ಪಶ್ಚಿಮ ಘಟ್ಟ ಸಾಲಿನಲ್ಲಿ ಜೋರು ಮಳೆಗೆ ಮೋಸ ಇಲ್ಲ

Subscribe to Oneindia Kannada

ಬೆಂಗಳೂರು, ಆಗಸ್ಟ್, 09: ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ ಮಲೆನಾಡು ಮತ್ತು ಬೆಳಗಾವಿ ಭಾಗದಲ್ಲಿ ಮಳೆ ಮುಂದುವರಿದಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಉತ್ತರ ಕನ್ನಡ ಸೇರಿದಂತೆ ಪಶ್ಚಿಮ ಘಟ್ಟ ಸಾಲಿನಲ್ಲಿ ಎರಡು ದಿನ(ಆಗಸ್ಟ್ 10,11) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೋಮವಾರ ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 8 ಸೆಂ.ಮೀ. ಮಳೆಯಾಗಿದೆ. ಆಗುಂಬೆಯಲ್ಲಿ 7 ಸೆಂ.ಮೀ, ಬೆಳ್ತಂಗಡಿಯಲ್ಲಿ 5, ಗೇರುಸೊಪ್ಪ ಹಾಗೂ ಯಲ್ಲಾಪುರದಲ್ಲಿ 4 ಸೇಂ ಮೀ ಮಳೆಯಾಗಿದೆ. ಮೂಡಬಿದಿರೆ, ಧರ್ಮಸ್ಥಳ, ಬಂಟ್ವಾಳ, ಕಾರ್ಕಳ, ಶೃಂಗೇರಿ, ಕೊಟ್ಟಿಗೆಹಾರ, ಮಂಗಳೂರು, ಮುಲ್ಕಿ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.[ಮಡಿಕೇರಿಯ ಅಜ್ಞಾತ ಜಲಧಾರೆ ಹಾಲೇರಿ ಫಾಲ್ಸ್]

ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮಂಗಳವಾರ (ಆಗಸ್ಟ್ 09) ಮುಂದುವರಿಯಲಿದ್ದು ಸಂಜೆ ವೇಳೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡಲ್ಲಿ ಮಳೆ ಅಬ್ಬರ

ಮಲೆನಾಡಲ್ಲಿ ಮಳೆ ಅಬ್ಬರ

ಮಲೆನಾಡಲ್ಲಿ ಕಳೆದ ಒಂದು ವಾರದಿಂದ ಮಳೆ ಅಬ್ಬರ ಮುಂದುವರಿದಿದೆ. ಮಳೆ ರಭಸಕ್ಕೆ ನದಿಗಳು ಉಕ್ಕಿ ಹರಿಯುತ್ತಿದ್ದು ಸೇತುವೆಗಳ ಮೇಲೂ ನೀರು ಹರಿಯುತ್ತಿದೆ.

ಒಂದು ವಾರದಿಂದ ಮಳೆ

ಒಂದು ವಾರದಿಂದ ಮಳೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡಿನ ಬೆಳೆಗಾರರು ಅಡಿಕೆ ಫಸಲಿಗೆ ಔಷಧ ಸಿಂಪಡಣೆಯಲ್ಲಿ ತೊಡಗಿದ್ದಾರೆ.

ಮಹಾರಾಷ್ಟ್ರದಲ್ಲೂ ಮಳೆ ಆರ್ಭಟ

ಮಹಾರಾಷ್ಟ್ರದಲ್ಲೂ ಮಳೆ ಆರ್ಭಟ

ಮಹಾರಾಷ್ಟ್ರದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕೃಷ್ಣಾ ಮತ್ತು ಅದರ ಉಪ ನದಿಗಳಲ್ಲಿ ನೀರಿನ ಹರಿವು ಕಮ್ಮಿಯಾಗಿಲ್ಲ. ಮಹಾರಾಷ್ಟ್ರದ ವಿವಿಧ ಡ್ಯಾಂಗಳಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರನ್ನು ಹರಿಬಿಡಲಾಗುತ್ತಿರುವುದರಿಂದ ಇಲ್ಲಿನ ನದಿಗಳು ಉಕ್ಕಿ ಹರಿಯುತ್ತಿವೆ.

ಹವಾಮಾನ ವರದಿ

ಹವಾಮಾನ ವರದಿ

ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Weather report: Rainfall occurred at most places over Coastal Karnataka and at a few places over Interior Karnataka. Heavy rainfall witnessed at Humchadakatte, Agumbe (Shivamogga dt). Heavy rain very likely to occur at isolated places over Western ghat areas of South Interior Karnataka on 10, 11 Aug 2016.
Please Wait while comments are loading...