ಫೆ.10ರ ತಾಪಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಬೆಳಗಿನ ಚಳಿ, ಮಧ್ಯಾಹ್ನದ ಚುರುಕು ಬಿಸಿಲು
ಬೆಂಗಳೂರು, ಫೆಬ್ರವರಿ 10: ರಾಜ್ಯದಲ್ಲಿ ಚಳಿಯ ಪ್ರಮಾಣ ಮುಂದುವರೆದಿದ್ದು, ಬೆಳಗಿನ ಚಳಿ ಮೈ ನಡುಕ ಹುಟ್ಟಿಸಿದರೆ, ಮಧ್ಯಾಹ್ನದ ನಂತರ ಬಿಸಿಲಿಗೆ ಜನರು ಬಳಲಿ ಬೆಂಡಾಗುತ್ತಿದ್ದಾರೆ. ಇನ್ನು ಉತ್ತರ ಕರ್ನಾಟಕ ಭಾಗಗಳಲ್ಲಿ ಒಣಹವೆ ಇರಲಿದ್ದು, ಬೆಳಗ್ಗೆ 10 ಗಂಟೆಯ ನಂತರ ಬಿಸಿಲಿನ ಪ್ರಮಾಣ ಹೆಚ್ಚಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಂಜೆ ವೇಳೆಗೆ ತಂಪಾದ ಗಾಳಿ ಬೀಸುತ್ತಿದೆ. ಇದರ ಜೊತೆಗೆ ಮಲೆನಾಡು, ಉತ್ತರ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಬೆಳಗಿನ ಜಾವ ದಟ್ಟ ಮಂಜು ಆವರಿಸುತ್ತಿದೆ. ಕಳೆದ ಕೆಲ ದಿನಗಳಿಂದಲೂ ರಾಜ್ಯದಲ್ಲಿ ಬೇಸಿಗೆಯ ಸುಳಿವು ಸಿಗುತ್ತಿದೆ. ಆದರೆ ಚಳಿಯ ಪ್ರಮಾಣ ಶಿವರಾತ್ರಿಯವರೆಗೂ ಮುಂದುವರೆಯಲಿದೆ.
ಹಾಸನ, ಮಂಡ್ಯ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಶಿವಮೊಗ್ಗದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಎಂದಿನಂತೆ ಬೆಳಗ್ಗೆ ಚುಮುಚುಮು ಚಳಿ ಸಹ ಇರಲಿದೆ.

ಜಿಲ್ಲಾವಾರು ತಾಪಮಾನ ವರದಿ (ಗರಿಷ್ಠ ಮತ್ತು ಕನಿಷ್ಠ ಡಿಗ್ರಿ ಸೆಲ್ಸಿಯಸ್ ಗಳಲ್ಲಿ)
ಬೆಂಗಳೂರು 30-16, ಮೈಸೂರು 32-17, ಚಾಮರಾಜನಗರ 32-17, ರಾಮನಗರ 32-17, ಮಂಡ್ಯ 32-18, ಬೆಂಗಳೂರು ಗ್ರಾಮಾಂತರ 30-16, ಚಿಕ್ಕಬಳ್ಳಾಪುರ 30-16, ಕೋಲಾರ 30-15, ಹಾಸನ 31-16, ಚಿಕ್ಕಮಗಳೂರು 31-16, ದಾವಣಗೆರೆ 33-19, ಶಿವಮೊಗ್ಗ 34-18, ಕೊಡಗು 31-17, ತುಮಕೂರು 31-17, ಉಡುಪಿ 31-22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಗಳೂರು 31-22, ಉತ್ತರ ಕನ್ನಡ 34-19, ಧಾರವಾಡ 33-19, ಹಾವೇರಿ 34-19, ಹುಬ್ಬಳ್ಳಿ 33-19, ಬೆಳಗಾವಿ 32-19, ಗದಗ 32-19, ಕೊಪ್ಪಳ 32-19, ವಿಜಯಪುರ 32-21, ಬಾಗಲಕೋಟ 33-21, ಕಲಬುರಗಿ 32-21, ಬೀದರ್ 30-18, ಯಾದಗಿರಿ 32-21, ರಾಯಚೂರ 32-20, ಬಳ್ಳಾರಿ 33-19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಭಾರತದ ಹಲವೆಡೆ ಮಳೆ
ಉತ್ತರ ಭಾರತದ ಬಹುತೇಕ ಕಡೆ ಗುಡುಗು ಸಹಿತ ಮಳೆ ಹೆಚ್ಚಾಗಿದೆ. ಸಿಕ್ಕಿಂನಲ್ಲಿ ಇಂದು (ಗುರುವಾರ) ಮಳೆಯಾಗುವ ಸಾಧ್ಯತೆಯಿದ್ದು, ಅರುಣಾಚಲ ಪ್ರದೇಶದಲ್ಲಿ ಚದುರಿದ ಮಳೆ, ಹಿಮಪಾತವಾಗಲಿದೆ. ಜಾರ್ಖಂಡ್ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಾಖಂಡದಲ್ಲಿ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಪೂರ್ವ ಉತ್ತರಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ.
ಹಿಮಾಲಯ ಪ್ರದೇಶಗಳಲ್ಲಿ ಹಿಮಪಾತ
ಇಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಲಘು ಮಳೆ ಅಥವಾ ಹಿಮಪಾತವಾಗಲಿದೆ. ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದಲ್ಲಿ ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನಲ್ಲಿ ಮತ್ತೆ ಮಳೆ
ಕಳೆದ ವರ್ಷ ಮಳೆಯಿಂದ ತತ್ತರಿಸಿರುವ ತಮಿಳುನಾಡಿಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಇಂದಿನಿಂದ ಮುಂದಿನ ಮೂರು ದಿನ ಮಳೆಯಾಗಲಿದೆ. ಮಧುರೈ, ಥೇಣಿ, ದಿಂಡಿಗಲ್, ವಿರುದುನಗರ, ಶಿವಗಂಗಾ, ತೆಂಕಶಿ, ರಾಮನಾಥಪುರಂ, ತೂತುಕುಡಿ, ತಿರುನಲ್ವೇಲಿ ಮತ್ತು ಕನ್ಯಾಕುಮಾರಿ ಭಾಗಗಳಲ್ಲಿ ಗುರುವಾರದಿಂದ ಶನಿವಾರದವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Recommended Video
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆಯಿಂದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತದ ಹವಾಮಾನ ಇಲಾಖೆ ಪ್ರಕಾರ, ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ದೆಹಲಿಯ ಕೆಲವು ಸ್ಥಳಗಳಲ್ಲಿ (ನರೇಲಾ, ಬವಾನಾ, ಅಲಿಪುರ್, ಬುರಾರಿ, ಕರವಾಲ್ ನಗರ, ಸೀಮಾಪುರಿ, ಸಫ್ದರ್‌ಜಂಗ್), ನಾರ್ನಾಲ್, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗುಡುಗು ಸಹಿತ ಮಳೆ ಮತ್ತು ಬಿರುಗಾಳಿ ಬೀಸುತ್ತದೆ.












Click it and Unblock the Notifications