ಫೆ.11ರ ತಾಪಮಾನ ವರದಿ: ಕಡಿಮೆಯಾಗುತ್ತಿರುವ ಚಳಿ, ಏರುತ್ತಿರುವ ಬಿಸಿಲು
ಬೆಂಗಳೂರು, ಫೆಬ್ರವರಿ 11: ರಾಜ್ಯದಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದರೆ, ಇನ್ನು ಮಧ್ಯಾಹ್ನದ ನೆತ್ತಿ ಸುಡು ಬಿಸಿಲಿಗೆ ಜನರು ಹೈರಾಣಾಗಿದ್ದಾರೆ. ಇನ್ನು ಉತ್ತರ ಕರ್ನಾಟಕ ಭಾಗಗಳಲ್ಲಿ ಒಣಹವೆ ಇರಲಿದ್ದು, ಬೆಳಗ್ಗೆ 10 ಗಂಟೆಯ ನಂತರ ಬಿಸಿಲಿನ ಪ್ರಮಾಣ ಹೆಚ್ಚಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಂಜೆ ವೇಳೆಗೆ ತಂಪಾದ ಗಾಳಿ ಬೀಸುತ್ತಿದೆ. ಇದರ ಜೊತೆಗೆ ಮಲೆನಾಡು, ಉತ್ತರ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಬೆಳಗಿನ ಜಾವ ದಟ್ಟ ಮಂಜು ಮತ್ತು ಸಾಧಾರಣ ಚಳಿ ಇರಲಿದೆ. ಕಳೆದ ಕೆಲ ದಿನಗಳಿಂದಲೂ ರಾಜ್ಯದಲ್ಲಿ ಬೇಸಿಗೆಯ ಸುಳಿವು ಸಿಗುತ್ತಿದ್ದು, ಆದರೆ ಚಳಿಯ ಪ್ರಮಾಣ ಶಿವರಾತ್ರಿಯವರೆಗೂ ಮುಂದುವರೆಯಲಿದೆ.
ಹಾಸನ, ಮಂಡ್ಯ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಶಿವಮೊಗ್ಗದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಎಂದಿನಂತೆ ಬೆಳಗ್ಗೆ ಚುಮುಚುಮು ಚಳಿ ಸಹ ಇರಲಿದೆ. ಉತ್ತರ ಕರ್ನಾಟಕದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರುತ್ತದೆ.

ಜಿಲ್ಲಾವಾರು ತಾಪಮಾನ ವರದಿ (ಗರಿಷ್ಠ ಮತ್ತು ಕನಿಷ್ಠ ಡಿಗ್ರಿ ಸೆಲ್ಸಿಯಸ್ ಗಳಲ್ಲಿ)
ಬೆಂಗಳೂರು 30-16, ಮೈಸೂರು 32-17, ಚಾಮರಾಜನಗರ 32-18, ರಾಮನಗರ 32-17, ಮಂಡ್ಯ 32-17, ಬೆಂಗಳೂರು ಗ್ರಾಮಾಂತರ 30-16, ಚಿಕ್ಕಬಳ್ಳಾಪುರ 29-16, ಕೋಲಾರ 29-16, ಹಾಸನ 25-18, ಚಿಕ್ಕಮಗಳೂರು 26-18, ದಾವಣಗೆರೆ 26-21, ಶಿವಮೊಗ್ಗ 29-21, ಕೊಡಗು 31-16 ಡಿಗ್ರಿ ಸೆಲ್ಸಿಯಸ್ ಇರಲಿದೆ.
ತುಮಕೂರು 31-17, ಉಡುಪಿ 33-23, ಮಂಗಳೂರು 33-23, ಉತ್ತರ ಕನ್ನಡ 34-19, ಧಾರವಾಡ 33-18, ಹಾವೇರಿ 33-18, ಹುಬ್ಬಳ್ಳಿ 33-18, ಬೆಳಗಾವಿ 32-18, ಗದಗ 32-19, ಕೊಪ್ಪಳ 32-19, ವಿಜಯಪುರ 32-20, ಬಾಗಲಕೋಟ 33-21, ಕಲಬುರಗಿ 32-19, ಬೀದರ್ 29-16, ಯಾದಗಿರಿ 33-21, ರಾಯಚೂರ 33-21, ಬಳ್ಳಾರಿ 33-19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಭಾರತದಲ್ಲಿ ಲಘು ಮಳೆ, ಹಿಮಪಾತ
ಇಂದು ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಹಾಗೆಯೇ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇನ್ನೆರಡು ದಿನ ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳ ಕಾಲ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಜೋರು ಗಾಳಿ ಕಂಡುಬರುತ್ತದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಜನವರಿ 13 ಮತ್ತು 14ರಂದು ಚದುರಿದ ಮಳೆ ಅಥವಾ ಹಿಮಪಾತ ಉಂಟಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮಪಾತವಾಗಲಿದೆ. ಫೆಬ್ರವರಿ 17ರಿಂದ 21ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ.

ಮುಂದಿನ ಎರಡು ದಿನಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನದಲ್ಲಿ ಮಳೆಯಾಗಲಿದೆ. ಫೆಬ್ರವರಿ 13 ಮತ್ತು 15ರ ನಡುವೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಮತ್ತು ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆ ಆಗುವ ನಿರೀಕ್ಷೆಗಳಿವೆ. ಈಶಾನ್ಯ ಭಾರತದ ಪ್ರತ್ಯೇಕ ಸ್ಥಳಗಳಲ್ಲಿ ಬೆಳಗ್ಗೆ ದಟ್ಟವಾದ ಮಂಜು ಉಂಟಾಗುವ ಸಾಧ್ಯತೆ ಇದೆ.












Click it and Unblock the Notifications