ಹವಾಮಾನ ವರದಿ: ರಾಜ್ಯದಲ್ಲಿ ಹೆಚ್ಚಾಗಲಿದೆ ತಾಪಮಾನ
ಬೆಂಗಳೂರು, ಮಾರ್ಚ್ 29: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿಸಿಲಿನ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿಸಿಲಿನ ಬೇಗೆ ಹೆಚ್ಚಾಗಿ ತಾಪಮಾನದಲ್ಲಿ ಏರಿಕೆಯಾಗಲಿದೆ.
ಮಾರ್ಚ್ 29ರ ಸೋಮವಾರ ಬೆಳಗಿನ ಜಾವ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲು ಹೆಚ್ಚಾಗಲಿದೆ.
ಮೇ ಅಂತ್ಯದವರೆಗೂ ತಾಪಮಾನದಲ್ಲಿ ಕೊಂಚ ಪ್ರಮಾಣದಲ್ಲಿ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗರಿ, ಬಳ್ಳಾರಿ, ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಾರ್ಚ್ 30ರವರೆಗೂ ಅಕಾಲಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಹಾವೇರಿ ಜಿಲ್ಲೆಯ ಕೆಲವು ಭಾಗದಲ್ಲಿ ಭಾನುವಾರ ರಾತ್ರಿ ಮಳೆಯಾಗಿದೆ.
ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೋಓಡ ಕವಿದ ವಾತಾವರಣವಿರಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.