ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆ, ಇನ್ನು 3-4 ದಿನ

ಬೆಂಗಳೂರು, ಜೂನ್ 06: ಕೇರಳಕ್ಕೆ ಮುಂಗಾರು ಪ್ರವೇಶ ವಿಳಂಬವಾಗುತ್ತಿದ್ದು, ಕರ್ನಾಟಕಕ್ಕೂ ಒಂದೆರಡು ದಿನ ತಡವಾಗಿ ಮುಂಗಾರು ಪ್ರವೇಶವಾಗಲಿದೆ. ಈ ನಡುವೆ ಮುಂಗಾರು ಪೂರ್ವ ಮಳೆ ಆರ್ಭಟ ಇನ್ನೂ 3 ರಿಂದ 4 ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮುಂಗಾರು ಪ್ರವೇಶದ ತನಕ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ. ಕರ್ನಾಟಕದಲ್ಲಿ ಹಲವೆಡೆ ಬರ ಪರಿಸ್ಥಿತಿ ಮುಂದುವರೆದಿದ್ದು, ರಾಜ್ಯದ ಪ್ರಮುಖ ದೇಗುಲಗಳಲ್ಲಿ ಇಂದು ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪರ್ಜನ್ಯ ಹೋಮ, ಪೂಜೆ ನೆರವೇರುತ್ತಿದೆ.

Weather : Scattered rain and thundershowers expected in Souther Interior Karnataka

ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಜೋರಾದ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನಲ್ಲಿ ವಾಯುಭಾರ ಕುಸಿತದ ಕಾರಣ ಬೆಂಗಳೂರು, ಮಂಗಳೂರು, ಮೈಸೂರು ಮಳೆಯಿಂದ ತಂಪಾಗಲಿವೆ ಎಂದು ಸ್ಕೈಮೆಟ್ ವೆದರ್ ಸಂಸ್ಥೆ ಹೇಳಿದೆ. ಜೂನ್ 07-08ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಇದಾದ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಪ್ರವೇಶ ಪಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+