ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆ, ಇನ್ನು 3-4 ದಿನ

|
Google Oneindia Kannada News

ಬೆಂಗಳೂರು, ಜೂನ್ 06: ಕೇರಳಕ್ಕೆ ಮುಂಗಾರು ಪ್ರವೇಶ ವಿಳಂಬವಾಗುತ್ತಿದ್ದು, ಕರ್ನಾಟಕಕ್ಕೂ ಒಂದೆರಡು ದಿನ ತಡವಾಗಿ ಮುಂಗಾರು ಪ್ರವೇಶವಾಗಲಿದೆ. ಈ ನಡುವೆ ಮುಂಗಾರು ಪೂರ್ವ ಮಳೆ ಆರ್ಭಟ ಇನ್ನೂ 3 ರಿಂದ 4 ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿ ಗುಡುಗು-ಮಿಂಚು ಸಹಿತ ಜೋರು ಮಳೆಬೆಂಗಳೂರಲ್ಲಿ ಗುಡುಗು-ಮಿಂಚು ಸಹಿತ ಜೋರು ಮಳೆ

ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮುಂಗಾರು ಪ್ರವೇಶದ ತನಕ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ. ಕರ್ನಾಟಕದಲ್ಲಿ ಹಲವೆಡೆ ಬರ ಪರಿಸ್ಥಿತಿ ಮುಂದುವರೆದಿದ್ದು, ರಾಜ್ಯದ ಪ್ರಮುಖ ದೇಗುಲಗಳಲ್ಲಿ ಇಂದು ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪರ್ಜನ್ಯ ಹೋಮ, ಪೂಜೆ ನೆರವೇರುತ್ತಿದೆ.

Weather : Scattered rain and thundershowers expected in Souther Interior Karnataka

ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಜೋರಾದ ಗಾಳಿ ಬೀಸಲಿದೆ.

ಮುಂಗಾರು ಕೇರಳ ಪ್ರವೇಶಕ್ಕೆ 2 ದಿನ ಬಾಕಿ, ಎಲ್ಲೆಲ್ಲಿ ಹೆಚ್ಚು ಮಳೆ ಸಾಧ್ಯತೆ ಮುಂಗಾರು ಕೇರಳ ಪ್ರವೇಶಕ್ಕೆ 2 ದಿನ ಬಾಕಿ, ಎಲ್ಲೆಲ್ಲಿ ಹೆಚ್ಚು ಮಳೆ ಸಾಧ್ಯತೆ

ದಕ್ಷಿಣ ಒಳನಾಡಿನಲ್ಲಿ ವಾಯುಭಾರ ಕುಸಿತದ ಕಾರಣ ಬೆಂಗಳೂರು, ಮಂಗಳೂರು, ಮೈಸೂರು ಮಳೆಯಿಂದ ತಂಪಾಗಲಿವೆ ಎಂದು ಸ್ಕೈಮೆಟ್ ವೆದರ್ ಸಂಸ್ಥೆ ಹೇಳಿದೆ. ಜೂನ್ 07-08ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಇದಾದ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಪ್ರವೇಶ ಪಡೆಯಲಿದೆ.

English summary
Monsoon rains are likely to enter India through the southern coast around June 8, the state-run India Meteorological Department (IMD) said on Wednesday, Scattered rain and thundershowers will be a sight over Konkan and Goa, Karnataka, Kerala, and Interior Tamil Nadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X