ಕರ್ನಾಟಕ ಹವಾಮಾನ ವರದಿ, ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಒಣಹವೆ?

ಬೆಂಗಳೂರು, ಸೆಪ್ಟೆಂಬರ್ 16: ಮಳೆಯ ಆರ್ಭಟ ರಾಜ್ಯದಲ್ಲಿ ಸ್ವಲ್ಪ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ.

ಬೀದರ್, ಕಲಬುರಗಿ, ವಿಜಯಪುರ, ಹಾವೇರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ರಾಜ್ಯಾದ್ಯಂತ ಮಳೆ ಹೆಚ್ಚಾಗಲಿದ್ದು, ಕರಾವಳಿ, ಮಲೆನಾಡಿನಲ್ಲಿ ಉತ್ತರ ಮತ್ತು ನೈಋತ್ಯ ಭಾಗಗಳಲ್ಲಿ ಸೆ. 17ರವರೆಗೂ ಮಳೆ ಮುಂದುವರೆಯಲಿದೆ.

ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿಯಲ್ಲಿ ಬೇರೆ ಜಿಲ್ಲೆಗಳಿಗಿಂತ ಅಧಿಕ ಮಳೆಯಾಗಲಿದೆ.

 ವಿವಿಧ ರಾಜ್ಯಗಳಲ್ಲಿ ಮಳೆ

ವಿವಿಧ ರಾಜ್ಯಗಳಲ್ಲಿ ಮಳೆ

ಕರ್ನಾಟಕ ಮಾತ್ರವಲ್ಲ ಒರಿಸ್ಸಾ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಗೋವಾ, ಛತ್ತೀಸ್​ಗಢ, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಾಖಂಡ, ರಾಜಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಅಂಡಮಾನ್ ನಿಕೋಬಾರ್ ರಾಜ್ಯಗಳಲ್ಲಿ ಇಂದು ವಿಪರೀತ ಮಳೆಯಾಗಲಿದೆ. ಒರಿಸ್ಸಾ, ಗುಜರಾತ್, ಮಧ್ಯಪ್ರದೇಶ, ಅಸ್ಸಾಂನಲ್ಲಿ ಸೆ. 17ರವರೆಗೆ ಮಳೆಯ ಅಬ್ಬರವಿರಲಿದೆ.

ಅಂಡಮಾನ್ ನಿಕೋಬಾರ್, ಕೊಂಕಣ, ಗೋವಾ, ಕರ್ನಾಟಕದ ಕರಾವಳಿ ಜಿಲ್ಲೆಗಳು, ಉತ್ತರ ಪ್ರದೇಶ, ಸಿಕ್ಕಿಂ, ಕೊಂಕಣ, ಮಿಜೋರಾಂ, ಲಕ್ಷದ್ವೀಪ, ಅಸ್ಸಾಂ, ಮೇಘಾಲಯ, ತ್ರಿಪುರ, ದೆಹಲಿ, ನಾಗಾಲ್ಯಾಂಡ್, ಮಣಿಪುರ, ತೆಲಂಗಾಣ, ಕಚ್, ವಿದರ್ಭ, ಪುದುಚೆರಿ, ಮಾಹೆ, ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಮರಾಠವಾಡ, ಹಿಮಾಚಲಪ್ರದೇಶ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಪಂಜಾಬ್, ಲಡಾಖ್, ತಮಿಳುನಾಡು, ರಾಯಲಸೀಮದಲ್ಲಿ ಇಂದು ಮಳೆಯ ಅಬ್ಬರ ಜೋರಾಗಲಿದೆ. ಸೆ. 17ರಂದು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆಯಿದೆ. ಒರಿಸ್ಸಾ, ಪಶ್ಚಿಮ ಬಂಗಾಳದ ಕರಾವಳಿ ತೀರದಲ್ಲಿ ಚಂಡಮಾರುತ ಅಪ್ಪಳಿಸಲಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆ ಬರುವ ಸಾಧ್ಯತೆ ದಟ್ಟವಾಗಿದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ನೈಋತ್ಯ ಮುಂಗಾರು ಒಳನಾಡಿನಲ್ಲಿ ದುರ್ಬಲವಾಗಿತ್ತು, ಕರಾವಳಿಯಲ್ಲಿ ವ್ಯಾಪಕವಾಗಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಕ್ಯಾಸಲ್ ರಾಕ್, ಕೊಲ್ಲೂರು, ಕೊಟ್ಟಿಗೆಹಾರ, ಆಗುಂಬೆ, ಕಾರ್ಕಳ, ಶಿರಾಲಿ, ಕಮ್ಮರಡಿ, ಉಡುಪಿ, ಮುಲ್ಕಿ, ಕದ್ರಾ, ಭಟ್ಕಳ, ಹೊನ್ನಾವರ, ಲಿಂಗನಮಕ್ಕಿ, ಸಿದ್ದಾಪುರ, ಕೋಟ, ಧರ್ಮಸ್ಥಳ, ಬೆಳ್ತಂಗಡಿ, ಮಾಣಿ, ಸುಬ್ರಹ್ಮಣ್ಯ, ಕಳಸ, ಜಯಪುರ, ಸೊರಬ, ಮಂಡಗದ್ದೆ, ಭಾಗಮಂಡಲದಲ್ಲಿ ಮಳೆಯಾಗಿದೆ.

Recommended Video

    ಸರ್‌.ಎಂ ವಿಶ್ವೇಶ್ವರಯ್ಯ ಜನ್ಮದಿನ ಹಿನ್ನೆಲೆ ಸಮಾಧಿಗೆ ಪೂಜೆ ಸಲ್ಲಿಕೆ
     ಎಲ್ಲೆಲ್ಲಿ ಮಳೆಯಾಗಲಿದೆ?

    ಎಲ್ಲೆಲ್ಲಿ ಮಳೆಯಾಗಲಿದೆ?

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ.

    ಬೀದರ್, ಕಲಬುರಗಿ, ವಿಜಯಪುರ, ಹಾವೇರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+