ಶ್ರೀರಾಮುಲು ಕಾಂಗ್ರೆಸ್ ಗೆ ಬಂದರೆ ಸ್ವಾಗತ: ಸಂತೋಷ್ ಲಾಡ್
ಧಾರವಾಡ, ಜನವರಿ 27: ಭಾರತೀಯ ಜನತಾ ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ವಾಲ್ಮೀಕಿ ಸಮುದಾಯದ ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಅವರು ಒಂದು ವೇಳೆ ಕಾಂಗ್ರೆಸ್‌ಗೆ ಬರುವುದಾದರೆ ಖಂಡಿತವಾಗಿಯೂ ಅವರನ್ನು ಸ್ವಾಗತ ಮಾಡುತ್ತೇನೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಈ ಕುರಿತು ಭಾನುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ನಾನು ಮತ್ತು ಶ್ರೀರಾಮುಲು ಅವರು ಮೊದಲಿನಿಂದಲೂ ಚೆನ್ನಾಗಿಯೇ ಇದ್ದೇವೆ. ಪಕ್ಷ, ಸಿದ್ದಾಂತಗಳು ಬೇರೆ ಬೇರೆಯಾಗಿರಬಹುದು. ಇದೀಗ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬರುವುದಾಗಿ ಖಂಡಿತವಾಗಿಯ ನಾನು ಅವರನ್ನು ಸ್ವಾಗತಿಸುತ್ತೇನೆ. ಆದರೆ ಈ ವಿಚಾರರು ಏನು ಮಾಡಬೇಕು ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸಲಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಕಾಂಗ್ರೆಸ್‌ನಲ್ಲಿ ವಾಲ್ಮೀಕಿ ಸಮುದಾಯದ ನಾಯಕ ಸತೀಶ್ ಜಾರಕಿಹೊಳಿ ಅವರಿಗೆ ಪರ್ಯಾಯ ನಾಯಕನನ್ನಾಗಿ ಮಾಡಲು ಶ್ರೀರಾಮುಲು ಅವರನ್ನು ಬಳಕೆ ಮಾಡಿಕೊಳ್ಳಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ ಎಂಬ ಮಾತುಗಳು ಕೇಳಿ ಬರತ್ತಿವೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಂತೋಷ್ ಲಾಡ್, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳಿಂದ ಉಂಟಾಗುತ್ತಿರುವ ತೊಂದರೆ ನಿವಾರಿಸಲು ಸರ್ಕಾರ ಬದ್ದವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಹೆಜ್ಜೆ ಇಡಬೇಕು. ಜನ ಸಾಮಾನ್ಯರಿಗೆ ತೊಂದರೆಯಾಗದಂತ ಮೈಕ್ರೋ ಫೈನಾನ್ಸ್‌ಗಳ ಕಾರ್ಯವೈಖರಿಯನ್ನು ನಿಗದಿ ಮಾಡಬೇಕು ಎಂದು ಸಂತೋಷ್ ಲಾಡ್ ತಿಳಿಸಿದರು.
ಫೈನಾನ್ಸ್ ದೌರ್ಜನ್ಯಗಳು ಗಮನಕ್ಕೆ ಬಂದಿವೆ. ಪೊಲೀಸರಿಗೆ ಈಗಾಗಲೇ ತಾಕೀತು ಮಾಡಿದ್ದೇನೆ, ದೂರು ಗಂಭೀರವಾಗಿ ಪರಿಗಣಿಸುತ್ತೇವೆ. ಒತ್ತಡ ಹಾಕೋದು, ಬ್ಲ್ಯಾಕ್‌ಮೇಲ್ ಮಾಡೋದು ಕಂಡು ಬರ್ತಾ ಇದೆ.
ರೌಡಿಗಳನ್ನು ಕಳುಹಿಸಿ ತೊಂದರೆ ಕೊಡುತ್ತಿದ್ದಾರೆ. ಫೈನಾನ್ಸ್ ಗ್ರುಪ್, ಫೈನಾನ್ಸ್ ರಗಳಿಗೆ ತಾಕೀತು ಮಾಡುತ್ತೇನೆ. ಈ ರೀತಿ ಮುಂದುವರೆದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆ. ಒಳ ಒಪ್ಪಂದ ಮಾಡಿಕೊಂಡು ಸಾಲ ಪಡೆಯುತ್ತಾರೆ, ಹೀಗಾಗಿ ಜಿಲ್ಲೆಯ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ವೈಯಕ್ತಿಕ ವ್ಯವಹಾರದಲ್ಲಿ ದುಡ್ಡು ತೆಗೆದುಕೊಂಡಿರುತ್ತಾರೆ ಎಂದು ಸಂತೋಷ್ ಲಾಡ್ ತಿಳಿಸಿದರು.
ಭಾರತದ ಸಂವಿಧಾನವನ್ನು ಪ್ರತಿಯೊಬ್ಬರು ಓದಬೇಕು. ಸಂವಿಧಾನ ಪೀಠಿಕೆಯಲ್ಲಿ ಹೇಳಿರುವ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ದೇಶದ ಅಭಿವೃದ್ಧಿಗೆ ವಿಶೇಷವಾಗಿ ಯುವ ಸಮೂಹ ತೊಡಗಿಸಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಅವರು ಹೇಳಿದರು.
ಭಾರತ ದೇಶವು ಎಲ್ಲ ಧರ್ಮದವರಿಗೂ ಸೇರಿದ್ದು, ಯಾವುದೇ ಪಕ್ಷ, ಧರ್ಮಗಳಿಗೆ ಮೀಸಲಾಗಿಲ್ಲ. ಡಾ. ಬಿ.ಆರ್. ಅಂಬೇಡ್ಕರ ಅವರು ರಚಿಸಿರುವ ಸಂವಿಧಾನವು ಪ್ರತಿಯೊಬ್ಬರ ಸಮಗ್ರ ಅಭಿವೃದ್ಧಿಗೆ ಮತ್ತು ಸಮಾಜದ ಹಿತಕ್ಕೆ ಪೂರಕವಾದ ಅಂಶಗಳನ್ನು ನೀಡಿದೆ. ಪ್ರತಿಯೊಬ್ಬರು ಪ್ರತಿದಿನ ಸಂವಿಧಾನ ಪೀಠಿಕೆಯನ್ನು ಓದುಬೇಕು. ಪಿಠೀಕೆಯಲ್ಲಿ ಇರುವ ಮೌಲ್ಯಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.












Click it and Unblock the Notifications