ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಕ್ಷಣೆಗೆ ಮುಂದಿರುವ ಮಾರ್ಗಗಳೇನು?
Recommended Video
ಬೆಂಗಳೂರು, ಮೇ 24: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಕುತ್ತು ಬರಲಿದೆ ಎನ್ನುವ ಮಾತುಗಳು ಕೇಳಿಬಂದಿವೆ.
ಆದರೆ ಸರ್ಕಾರ ರಕ್ಷಿಸಿಕೊಳ್ಳುವ ಬಗ್ಗೆ ಕಾಂಗ್ರೆಸ್ ಹಾಗೂ ಕೆಡಿಎಸ್ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಪಕ್ಷದ ಎರಡನೇ ಹಂತದ ನಾಯಕರುಗಳು ಸರ್ಕಾರ ಮುಂದುವರೆಸುವ ಬಗ್ಗೆ ಅಸಮಾಧಾನ ಹೊಂದಿದ್ದರು. ಅವಶ್ಯಕವಾಗಿ ಸರ್ಕಾರವನ್ನು ಬಿಜೆಪಿ ತೆಕ್ಕೆಗೆ ನೀಡುವುದು ಬೇಡ ಎಂದು ಹಿರಿಯರ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ ಹೀಗಾಗಿ ಶಾಸಕರಿಗೆ ಒಮ್ಮತ ಅಭಿಪ್ರಾಯ ಮೂಡಿಸಿ ಸರ್ಕಾರವನ್ನು ಯಥಾಸ್ಥಿತಿಯಲ್ಲೇ ಮುಂದುವರೆಸುವುದು ಮೊದಲ ಆಧ್ಯತೆಯಾಗಿದೆ.ಇಲ್ಲವಾದಲ್ಲಿ ಮುಖ್ಯಮಂತ್ರಿಯನ್ನು ಬದಲಿಸಿ ಮೈತ್ರಿ ಸರ್ಕಾರ ಮುಂದುವರೆಸುವ ತಂತ್ರಗಾರಿಕೆ ಇದೆ.
ಹೀಗಾದಲ್ಲಿಡಾ. ಜಿ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಯಾವುದೇ ಕಾಂಗ್ರೆಸ್ ನಾಯಕರನ್ನು ಮುಖ್ಯಮಂತ್ರಿ ಗಾಧೆಯಲ್ಲಿ ಕೂರಿಸುವ ಸಾಧ್ಯತೆ ಇದೆ ಆಗ ಎಚ್‌ಡಿ ರೇವಣ್ಣ ಉಪ ಮುಖ್ಯಮಂತ್ರಿಯಾಗಬಹುದು.

ಅತೃಪ್ತ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು
ಕಾಂಗ್ರೆಸ್‌ನ ಅತೃಪ್ತ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದೇ ಮೈತ್ರಿ ಸರ್ಕಾರ ಮಾಡಬೇಕಾದ ಮೊದಲ ಕೆಲವಾಗಿದೆ. ಆದರೆ ಇದೇ ಕಾಂಗ್ರೆಸ್- ಜೆಡಿಎಸ್ ಸರ್ಕಾರಕ್ಕೆ ಕಬ್ಬಿಣದ ಕಡಲೆಯಾಗಿದೆ. ಯಾಕೆಂದರೆ ಈಗಾಗಲೇ ಸಾಕಷ್ಟು ಅತೃಪ್ತ ಶಾಸಕರು ರಾಜೀನಾಮೆಗೆ ಮುಂದಾಗಿದ್ದರು ಆದರೆ ಲೋಕಸಭಾ ಚುನಾವಣೆಯವರೆಗೆ ರಾಜೀನಾಮೆ ನೀಡದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಧಾನಪಡಿಸಿದ್ದರು.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲೂ ಅಧಿಕಾರ ಕಳೆದುಕೊಳ್ಳುವ ಸ್ಥಿತಿಯಲ್ಲಿಲ್ಲ
ನಿರೀಕ್ಷಡ ಮೀರಿದ ಸಾಧನೆ ತೋರಿರುವ ಬಿಜೆಪಿಯತ್ತ ಕಾಂಗ್ರೆಸ್ ಶಾಸಕರು ವಲಸೆ ಹೋಗುವ ಸ್ಥಿತಿ ನಿರ್ಮಾಣವಾಗಬಹುದು. ಆದರೆ ದೇಶದಲ್ಲಿ ಕೆಲವೇ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲೂ ಅಧಿಕಾರವನ್ನು ಕಳೆದುಕೊಳ್ಳುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಹಾಲಿ ಸ್ವರೂಪದಲ್ಲೇ ಸರ್ಕಾರ ಮುಂದುವರೆಯುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ನಾಯಕರ ಮೇಲೆ ಒತ್ತಡ ನಿರ್ಮಾಣವಾಗಬಹುದು.

ಜೆಡಿಎಸ್ ಕಾಂಗ್ರೆಸ್ ಎರಡೂ ಕಳಪೆ ಸಾಧನೆ
ಈ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಸಾಧನೆ ತೋರದಿದ್ದರೆ ಆಗ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕೋರುವ ಮನಸ್ಥಿತಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಶಾಸಕರಿಗೆ ಇತ್ತು ಆದರೆ ಕಾಂಗ್ರೆಸ್ ಕೂಡ ಕಳಪೆ ಸಾಧನೆ ಮಾಡಿರುವುದರಿಂದ ಇಂತಹ ದುಸ್ಸಾಹಸಕ್ಕೆ ತೋರುವ ಸಾಧ್ಯತೆಗಳಿಲ್ಲ, ಹಾಲಿ ಸ್ಥಿತಿಯಲ್ಲೇ ಮುಂದುವರೆಸಬಹುದು.

ಲೋಕಸಭಾ ಚುನಾವಣಾ ಫಲಿತಾಂಶ ಅನಿರೀಕ್ಷಿತ
ಲೋಕಸಭೆ ಚುನಾವಣೆಯ ಫಲಿತಾಂಶ ಅನಿರೀಕ್ಷಿತ ಈ ಫಲಿತಾಂಶವನ್ನು ಗೌರವಿಸುತ್ತೇನೆ, ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ, ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲಾ ಅಭ್ಯರ್ಥಿಗಳಿಗೂ ನನ್ನ ಶುಭಾಶಯ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಬಿಜೆಪಿಗೆ ಬಿಟ್ಟುಕೊಟ್ಟು ಬೇರೆ ಹುದ್ದೆಗೆ ಒಪ್ಪಬಹುದು
ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಗೆ ಬಿಟ್ಟುಕೊಟ್ಟು ಉಪ ಮುಖ್ಯಮಂತ್ರಿ ಹಾಗೂ ಹೆಚ್ಚಿನ ಸಚಿವ ಸ್ಥಾನಗಳಿಗೆ ಜೆಡಿಎಸ್ ಬೇಡಿಕೆಯಿಡಬಹುದು. ಅಕಸ್ಮಾತ್ ಈ ಬೇಡಿಕೆಗೆ ಬಿಜೆಪಿ ಒಪ್ಪಿಬಿಟ್ಟರೆ ಆಗ ಕುಮಾರಸ್ವಾಮಿ ಸಿಎಂ ಹುದ್ದೆ ತ್ಯಜಿಸಿ ಪಕ್ಷದ ಉನ್ನತ ಹುದ್ದೆಗೆ ತೃಪ್ತರಾಗಬಹುದು.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications