School Holiday: ರಾಜ್ಯದಲ್ಲಿ ಮಾರ್ಚ್ 22ರಂದು ಶಾಲಾ ರಜೆ ಬಗ್ಗೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಹೇಳೋದೇನು?
School Holiday: ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ವಾಟಾಳ್ ನಾಗರಾಜ್ ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆ ಹಲವರು ಬೆಂಬಲ ಸೂಚಿಸಿದ್ದರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ ಶಾಲೆಗಳಿಗೆ ರಜೆ ಇರಲಿದೆಯಾ? ಈ ಬಗ್ಗೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರು ಹೇಳಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇತ್ತೀಚೆಗಷ್ಟೇ ಕರ್ನಾಟಕದ ಸಾರಿಗೆ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮತ್ತು ಚಾಲಕರ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದಿದ್ದರು. ಅಷ್ಟೇ ಅಲ್ಲದೆ, ಹಲ್ಲೆಯನ್ನೂ ಸಹ ನಡೆಸಿದ್ದರು. ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ತಡೆಯಲು ಸರ್ಕಾರದ ಮೇಲೆ ಒತ್ತಡ ಹಾಕಲು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾರ್ಚ್ 22 ಕರ್ನಾಟಕ ಬಂದ್ ಫಿಕ್ಸ್ ಎಂದು ಘೋಷಣೆ ಮಾಡಿದ್ದಾರೆ.

ವಾಟಾಳ್ ನಾಗರಾಜ್ ಅವರ ಕರ್ನಾಟಕದ ಬಂದ್ ಘೋಷಣೆಗೆ ಹಲವು ಸಂಘಟನೆಗಳು ಈಗಾಗಲೇ ಒಪ್ಪಿಗೆ ಸೂಚಿಸಿದ್ದು, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿವೆ. ಮತ್ತೊಂದೆಡೆ ಅಂದೇ ರಾಜ್ಯದಲ್ಲು ಕೆಲ ತರಗತಿಗಳಿಗೆ ಪರೀಕ್ಷೆಗಳು ಇವೆ. ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಮಾಮಾರ್ಚ್ 22ಕ್ಕೆ ನಿಗದಿಯಾಗಿರುವ ಕರ್ನಾಟಕ ಬಂದ್ ದಿನಾಂಕವನ್ನು ಮುಂದೂಡುವಂತೆ ಕನ್ನಡಪರ ಸಂಘಟನೆಗಳಿಗೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರು ಮನವಿ ಮಾಡಿದ್ದಾರೆ.
ಬಂದ್ ಮಾಡಿದರೆ ಆಟೋ, ಬಸ್ ಸಂಚಾರ ಇರುವುದಿಲ್ಲ. ಇದರಿಂದ ಶಾಲಾ ಮಕ್ಕಳಿಗೆ ತುಂಬಾ ತೊಂದರೆ ಆಗುತ್ತದೆ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮನವಿಮಾಡಿದ್ದಾರೆ. 1 ರಿಂದ 9ನೇ ತರಗತಿ ಮಕ್ಕಳಿಗೆ ವಿವಿಧ ಪರೀಕ್ಷೆ ನಡೆಯಲಿದೆ. ಬಂದ್ ವೇಳೆ ಮಕ್ಕಳಿಗೆ ಶಾಲೆಗಳಿಗೆ ರಜೆ ಕೊಡುವುದಕ್ಕೆ ಆಗುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಬಂದ್ ದಿನಾಂಕ ಬದಲಾಯಿಸಿ ಎಂದು ಮನವಿ ಮಾಡಿದ್ದಾರೆ.
ಮತ್ತೊಂದೆಡೆ ಮಕ್ಕಳ ಪೋಷಕರು ಕೂಡ ಮಾರ್ಚ್ 22ರಂದು ಪರೀಕ್ಷೆ ಇದ್ದರೂ ಕೂಡ ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂಸ್‌ಗೆ ಕರೆ ನೀಡಿರುವುದರಿಂದ ಈ ದಿನ ಪರೀಕ್ಷೆ ನಡೆಯುತ್ತಾ ಅಥವಾ ಇಲ್ಲವಾ ಎನ್ನುವ ಆತಂಕದಲ್ಲಿದ್ದಾರೆ. ಅಲ್ಲದೆ, ಪೋಷಕರ ಸಂಘಟನೆ ಅಧ್ಯಕ್ಷರು ಕೂಡ ಆಕ್ರೋಶ ವ್ಯಕ್ಯಪಡಿಸಿದ್ದಾರೆ.
ಪರೀಕ್ಷೆ ಮುಗಿದ ಬಳಿಕ ಕರ್ನಾಟಕ ಬಂದ್‌ಗೆ ಕರೆ ಕೊಡಬಹುದಿತ್ತು. ಆದರೆ, ಪರೀಕ್ಷೆ ದಿನವೇ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿರುವುದು ಸರಿಯಲ್ಲ ಎಂದು ಪೋಷಕರ ಸಂಘಟನೆ ಅಧ್ಯಕ್ಷ ಯೋಗಾನಂದ್ ಆಕ್ರೋಶ ಹೊರಹಾಕಿದರು. ಮಕ್ಕಳ ಭವಿಷ್ಯದ ವಿಚಾರದಲ್ಲಿ ಈ ರೀತಿ ಚೆಲ್ಲಾಟ ಆಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಡಿಸಿದ್ದಾರೆ.
ಯಾಕಂದ್ರೆ ಬಂದ್ ಮಾಡಿದ್ರೆ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಲಿದೆ. ಇದನೆಲ್ಲ ನೋಡಿಕೊಂಡು ಕರ್ನಾಟಕ ಬಂದ್‌ಗೆ ಕರೆ ನೀಡಬಹುದಾಗಿತ್ತು ಅಂತಲೂ ಆಕ್ರೋಶ ಹೊರಹಾಕಿದ್ದಾರೆ. ಒಟ್ಟಿನಲ್ಲಿ ಇದು ವಿದ್ಯಾರ್ಥಿಗಳ ಪೋಷಕರದಲ್ಲಿ ಕರ್ನಾಟಕ ಬಂದ್ ವಿಚಾರ ಆತಂಕ ಸೃಷ್ಟಿಸಿದೆ ಎನ್ನಲಾಗುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರವನ್ನು ಕನ್ನಡಪರ ಸಂಘಟನೆಗಳು ಕಂಡುಕೊಂಡು ಬಂದ್ ಮುಂದೂಡಿಕೆ ಮಾಡುವುದು ಒಳಿತು ಎಂದು ಮನವಿ ಮಾಡಿಕೊಂಡಿದ್ದಾರೆ.
ಮತ್ತೊಂದೆಡೆ ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರಿ ರಜೆಗಳನ್ನು ಹೊರತುಪಡಿಸಿ, ಪ್ರತಿಭಟನೆ ವೇಳೆ ಹಾಗೂ ವಿಶೇಷ ಕಾರ್ಯಕ್ರಮಗಳ ವೇಳೆ ರಜೆ ಘೋಷಣೆ ಮಾಡಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ವರ್ಷದ ಆರಂಭದಿಂದಲೂ ಸಾಲು ರಜೆಗಳೇ ಸಿಕ್ಕಿದ್ದು, ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ.












Click it and Unblock the Notifications