H.D.Deve Gowda Birthday: ದೇವೇಗೌಡ್ರು ತಮ್ಮ ಜನ್ಮದಿನ ಆಚರಣೆ ಬಗ್ಗೆ ಹೀಗೆಳಿದ್ಯಾಕೆ?
H.D.Deve Gowda: ಇವತ್ತು (ಮೇ 18) ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ ಇದ್ದು, ಈ ಬಗ್ಗೆ ನಿನ್ನೆಯೇ ದೇವೇಗೌಡರು ಮೌನ ಮುರಿದಿದ್ದರು. ಹಾಗಾದರೆ ಅವರು ತಮ್ಮ ಜನ್ಮ ದಿನ ಆಚರಣೆ ಬಗ್ಗೆ ಹೇಳಿದ್ದಾದ್ರೂ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
"ಇದೇ ತಿಂಗಳ 18ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಕಾರಾಣಾಂತರಗಳಿಂದ ನಾನು ಜನ್ಮ ದಿನವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ. ಆದ್ದರಿಂದ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ," ಅಂತಾ ಮನವಿ ಪತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದರು.

"ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ (ಎನ್‌ಡಿಎ) ಅಭ್ಯರ್ಥಿಗಳಿಗೆ ಗೆಲುವಿಗೆ ಎಲ್ಲಾರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರು ಬದ್ಧತೆಯಿಂದ ಕೆಲಸ ಮಾಡಬೇಕು," ಎಂದು ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.
Former prime minister @H_D_Devegowda turning 92 on May.18. Says he will not celebrate his birthday & advise his fans to greet him from wherever they are.
— Devaraj Hirehalli Bhyraiah (@swaraj76) May 16, 2024
He insisted @JanataDal_S to work for the victory of NDA candidates June.3 Council polls.@XpressBengaluru @AshwiniMS_TNIE pic.twitter.com/z9PDAlsYdD
ಮೇ 18ರಂದು ಅಂದರೆ ಇಂದು 92ನೇ ವರ್ಷಕ್ಕೆ ಕಾಲಿಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಬಾರಿ ತಮ್ಮ ಹುಟ್ಟಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ದಾರ ಮಾಡಿದ್ದಾರೆ. ಶುಭ ಕೋರಲು ಯಾರೂ ತಮ್ಮ ನಿವಾಸಕ್ಕೆ ಆಗಮಿಸದಂತೆ ಕಾರ್ಯಕರ್ತರು, ಹಿತೈಷಿಗಳಿಗೆ ಮನವಿ ಮಾಡಿದ್ದಾರೆ. ಪ್ರಸಕ್ತ ಘಟನೆಗಳಿಂದ ನೊಂದಿರುವ ಅವರು, ಈ ಬಾರಿಯ ಹುಟ್ಟುಹಬ್ಬದ ಸಂಭ್ರಮದಿಂದ ದೂರ ಉಳಿಯಲು ನಿರ್ಧರಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ಮೋರ ಮೋದಿ ಅವರು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಹೆಚ್.ಡಿ.ದೇವೇಗೌಡರಿಗೆ ಅವರ ಜನ್ಮದಿನದಂದು ಶುಭ ಹಾರೈಕೆಗಳು. ಅವರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಾದ್ಯಂತ ಗೌರವಾನ್ವಿತರಾಗಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಿಚಾರದಲ್ಲಿ ಅವರ ಬದ್ಧತೆ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications