KSRTC bus ticket Fare: ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳದ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು?

KSRTC bus ticket Fare: ಕಾಂಗ್ರೆಸ್‌ 5 ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯೂ ಒಂದಾಗಿದೆ. ಇದರಿಂದ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಹೊರೆ ಹೆಚ್ಚಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ನಡುವೆಯೇ ಟಿಕೆಟ್‌ ದರ ಹೆಚ್ಚಳದ ಬಗ್ಗೆ ನಿಗಮದ ಅಧ್ಯಕ್ಷರು ಸುಳಿವು ನೀಡಿದ್ದರು. ಇನ್ನು ಇದೀಗ ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಕೂಡ ಪ್ರತಿಕ್ರಿಯಿಸಿದ್ದಾರೆ.

ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತರ ರಾಜ್ಯ ಬೊಕ್ಕಸ ಖಾಲಿಯಾಗಿದೆ. ಕೆಎಸ್‌ಆರ್‌ಟಿಸಿಗೆ ಶಕ್ತಿ ಯೋಜನೆಯಡಿ ಉಚಿತ ಬಸ್‌ ಪ್ರಯಾಣ ನೀಡಿದಂತಹ ಟಿಕೆಟ್ ದರವನ್ನು ಸರ್ಕಾರ ಈವರೆಗೆ ಪಾವತಿ ಮಾಡಿಲ್ಲ. ಈ ಹಿನ್ನೆಲೆ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.

What did Ramalinga Reddy say about KSRTC bus ticket price increase

ಇದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆಯಾಗಿದೆ ಎನ್ನಲಾಗಿತ್ತು. "ಆದರೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ," ಎನ್ನುವ ಮಾಹಿತಿ ಲಭ್ಯವಾಗಿದೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಸಹಿತ ನಾಲ್ಕು ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆ ಆಗಿಲ್ಲ," ಎಂದರು.

ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌.ಆರ್.ಶ್ರೀನಿವಾಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಶ್ರೀನಿವಾಸ್ ಕೆ.ಎಸ್. ಆರ್.ಟಿ.ಸಿ ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಆದರೆ, ರಾಜ್ಯ ಸರ್ಕಾರಕ್ಕೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾವನೆ ಸಲ್ಲಿಕೆ ಮಾಡಿಲ್ಲ. ಸಾರಿಗೆ ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಅಲ್ಲದೇ ಟಿಕೆಟ್ ದರ ಏರಿಸುವಂತಹ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

ಟಿಕೆಟ್​​ ದರ ಹೆಚ್ಚಳಕ್ಕೆ ನಿರ್ಧಾರ: ಈಗಾಗಲೇ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದು, ಇದರ ನಡುವೆಯೇ ಇತ್ತೀಚೆಗಷ್ಟೇ ಹಾಲು, ಪೆಟ್ರೋಲ್‌, ಡೀಸೆಲ್ ದರವನ್ನು ಏರಿಕೆ ಮಾಡಿದ್ದರು. ಇದಕ್ಕೆ ವ್ಯಾಪಕ ಆಕ್ರೋಶಗಳು ಕೂಡ ವ್ಯಕ್ತವಾಗಿದ್ದವು. ಇದೀಗ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ ಮಾಡಲು ನಿಗಮ ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ ಹಾಗಾದರೆ ಎಷ್ಟು ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಿದೆ ಎಂದು ಇಲ್ಲಿ ತಿಳಿಯಿರಿ.

ಶಕ್ತಿ ಯೋಜನಡಯಡಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಈ ಹಣವನ್ನು ಬರಿಸಲು ಇದೀಗ ಸರ್ಕಾರ ಕೆಎಸ್‌ಆರ್‌ಟಿಸಿ ಟಿಕೆಟ್‌ ದರವನ್ನು ಏರಿಕೆ ಮಾಡುತ್ತಿದೆ ಎನ್ನುವ ಆಕ್ರೋಶಗಳು ಭಗಿಲೆದ್ದಿವೆ. ಇನ್ನು ನಿಗಮದ ಅಧ್ಯಕ್ಷರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.

"ಶೀಘ್ರದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಟಿಕೆಟ್ ದರ ಹೆಚ್ಚಾಗುವ ಸಾಧ್ಯತೆಯಿದೆ. ಶೇಕಡ 15ರಿಂದ 20ರಷ್ಟು ​ ಟಿಕೆಟ್​​ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ," ಎಂದು ತುಮಕೂರಿನಲ್ಲಿ ಗುಬ್ಬಿ ಕಾಂಗ್ರೆಸ್‌ ಶಾಸಕ, ಕೆಎಸ್ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+