ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಸಿದ್ದರಾಮಯ್ಯ; ಡಿಕೆಶಿ ಜೊತೆ ಪತ್ರಿಕಾಗೋಷ್ಠಿ, ಹೇಳಿದ್ದೇನು

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟಿದ್ದಾರೆ. ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದು ಅವರು ಘೋಷಿಸಿದ್ದಾರೆ.

ನಾನು ಈ ಹಿಂದೆಯೂ ಹೇಳಿದ್ದೆ ಹೈಕಮಾಂಡ್ ಯಾವಾಗ ರಾಜೀನಾಮೆ ಕೊಡಿ ಎಂದು ಹೇಳುತ್ತಾರೋ ಆಗ ರಾಜೀನಾಮೆ ಕೊಡುತ್ತೇಣೆ ಎಂದು ಹೇಳಿದ್ದೆ. ಅದರಂತೆಯೇ ಇಂದು ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ. ವಿದಾಯದ ಭಾಷಣದಲ್ಲಿ ಸಿದ್ದರಾಮಯ್ಯ ಅವರು ಭಾವುಕರಾದರು, ಮೆಲುದನಿಯಲ್ಲೇ ಸಿದ್ದರಾಮಯ್ಯ ಅವರು ವಿದಾಯದ ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ.

Siddaramaiah

ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಭಾಷಣದಲ್ಲಿ ಡಾ.ರಾಜ್‌ಕುಮಾರ್ ಅವರನ್ನು ಸ್ಮರಿಸಿದ್ದಾರೆ. ರಾಜ್‌ಕುಮಾರ್‌ ಅವರು ಅಭಿಮಾನಿಗಳೇ ನನ್ನ ದೇವರು ಎಂದು ಹೇಳುತ್ತಿದ್ದರು. ನಾನು ರಾಜಕಾರಣಿ ನಮಗೆ ಮತದಾರರೇ ನಮ್ಮ ಅಭಿಮಾನಿ ದೇವರು. ನಾನು ಸಂವಿಧಾನವೇ ದೇವರು ಎಂದು ನಂಬಿರುವವನು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕನ್ನಡ ನಾಡಿನ ಕರ್ನಾಟಕದ 7 ಕೋಟಿ ಜನರಿಗೆ ಸೇವೆ ಮಾಡುವ ಅವಕಾಶ ನನಗೆ ಸಿಕ್ಕಿದೆ. ಎರಡು ಬಾರಿ ಮುಖ್ಯಮಂತ್ರಿಯಾಗಿ ಕರುನಾಡಿನ ಜನರಿಗೆ ಸೇವೆ ಸಲ್ಲಿಸುವ ಅವಕಾಶ ನನಗೆ ಸಿಕ್ಕಿದೆ. ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಿದ್ದೆ.

ನನಗೆ ಈ ಅವಕಾಶವನ್ನು ನೀಡಿದ ಕಾಂಗ್ರೆಸ್‌ನ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸಂದರ್ಭದಲ್ಲಿ ಅಪಾರವಾದ ಧನ್ಯವಾದಗಳನ್ನು ತಿಳಿಸುವ ಕೆಲಸ ಮಾಡುತ್ತೇನೆ. ನಾನು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಅಂದಿನಿಂದ ಕಾಂಗ್ರೆಸ್‌ನ ಕಾರ್ಯಕರ್ತರು, ಎಲ್ಲ ಮುಖಂಡರು ಶಾಸಕರು ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ನನಗೆ ಪ್ರೀತಿಯನ್ನು ತೋರಿಸಿದ್ದಾರೆ. ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ ಅವರೆಲ್ಲರಿಗೂ ಈ ಸಂದರ್ಭದಲ್ಲಿ ಧನ್ಯವಾದ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ನುಡಿದಂತೆ ನಡೆದುಕೊಳ್ಳುತ್ತೇನೆ - ಹೈಕಮಾಂಡ್‌ಗೆ ಮಾತುಕೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಮೇ 28ರ ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟಿದ್ದಾರೆ. ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಸಂಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಿದವರಲ್ಲಿ ಸಿದ್ದರಾಮಯ್ಯ ಒಬ್ಬರು. 17 ಬಾರಿ ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರದ್ದು.

ಅತಿಹೆಚ್ಚು ಬಜೆಟ್‌ಗಳನ್ನು ಮಂಡಿಸುವ ಅವಕಾಶ

ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್‌ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್‌ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ. ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.

ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+