ಸರ್ಕಾರಗಳ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂ ಕೋರ್ಟ್ ನಿಲುವೇನು ಗೊತ್ತಾ?
ಬೆಂಗಳೂರು, ಫೆಬ್ರವರಿ, 13: ಈಗಾಗಲೇ ಕರ್ನಾಕದಲ್ಲಿ ಸಿಎಂ ಸಿದ್ದಾರಾಮಯ್ಯ ನೇತೃತ್ವದ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಬೇರೆ ರಾಜ್ಯಗಳಲ್ಲೂ ಕೂಡ ಇಂತಹ ಅನೇಕ ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ. ಇನ್ನು ಈ ಬಗ್ಗೆ ಈಗಾಗಲೇ ವಿಶ್ವಸಂಸ್ಥೆ ವ್ಯಕ್ತಪಡಿಸಿದ್ದರೆ. ಆದರೆ, ಸುಪ್ರೀಂ ಕೋರ್ಟ್ ಇವುಗಳಿಂದ ಜನರಿಗೆ ಕೆಲಸ ಮಾಡಲು ಮನಸ್ಸೇ ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಕರ್ನಾಕದಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ, ಶಕ್ತಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ-ಪ್ರತಿ ಮನೆ ಯಜಮಾನಿ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮೆ ಮಾಡಲಾಗುತ್ತಿದೆ. ಯುವನಿಧಿ-ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ.ಅಕ್ಕಿ ಹಾಗೂ ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೂ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಕಲ್ಪಿಸಲಾಗಿದೆ.

ಇಂತಹ ಉಚಿತ ಯೋಜನೆಗಳನ್ನು ಬೇರೆ ಬೇರೆ ರಾಜ್ಯಗಳಲ್ಲೂ ಕೂಡ ಜನರಿಗೆ ನೀಡಲಾಗಿದೆ. ರಾಜಕೀಯ ಉದ್ದೇಶಕ್ಕಾಗಿ ಈ ಯೋಜನೆಗಳನ್ನು ನೀಡಲಾಗಿದೆ. ಇವುಗಳು ಒಂದೆಡೆ ಒಳ್ಳೆಯದಾದರೆ, ಮತ್ತೊಂದೆಡೆ ರಾಜಕೀಯ ಲಾಭಕ್ಕಾಗಿ ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದ್ದಾರೆ ಎನ್ನುವುದೇ ಸುಪ್ರೀಂ ಕೋರ್ಟ್ ಹೇಳಿರುವುದರ ಸರ್ಥವಾಗಿದೆ.
ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ರಾಜಕೀಯ ಪಕ್ಷಗಳು ಇತ್ತೀಚಿನ ದಿನಗಳಲ್ಲಿ ಮತದಾರರನ್ನು ಸೆಳೆಯಲು ಉಚಿತ ಯೋಜನೆಗಳಂತಹ ಕೊಡುಗೆಯನ್ನು ನೀಡಲು ಮುಂದಾಗೊವೆ. ಇಂತಹ ಯೋಜನೆಗಳಿಂದ ಜನರಿಗೆ ಕೆಲಸ ಮಾಡಲು ಮನಸ್ಸೇ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ.
ಒಂದೆಡೆ ರಾಜ್ಯದಲ್ಲಿ ಜಾರಿ ಆಗರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸದಸ್ಯ ಪ್ರಶಂಸೆ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದೆ. ಮತ್ತೊಂದೆಡೆ, ಸುಪ್ರೀಂ ಕೋರ್ಟ್ ರಾಜಕೀಯ ಪಕ್ಷಗಳಿಗೆ ತರಾಟೆ ತೆಗೆದುಕೊಂಡಿದೆ. ಅಲ್ಲದೆ, ಹೀಗೆ ಮಾಡುವುದರಿಂದ ಜನರನ್ನು ಮುಖ್ಯ ವಾಹಿನಿಗೆ ತಂದು ರಾಷ್ಟ್ರಾಭಿವೃದ್ಧಿಗೆ ಕೊಡುಗೆ ನೀಡಲು ಸಶಕ್ತರಾಗಿಸುವ ಬದಲು, ಪರಾವಲಂಬಿಗಳನ್ನಾಗಿ ಮಾಡುತ್ತಿಲ್ಲವೇ? ಎಂದು ಸರ್ಕಾರಗಳನ್ನು ಪ್ರಶ್ನಿಸಿದೆ.
ಈ ಉಚಿತಗಲಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ. ಅವರು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ. ಯಾವುದೇ ಕೆಲಸ ಮಾಡದೆ ಹಣವನ್ನು ಪಡೆಯುತ್ತಿದ್ದಾರೆ ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು. ಮನೆ ಇಲ್ಲದ ಜನರನ್ನು ಸಮಾಜದ ಮುಖ್ಯವಾಹಿನಿಗೆ ಸೇರಿಸಬೇಕು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ನೀಡಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಅವರ ಬಗ್ಗೆ ನಿಮ್ಮ ಕಾಳಜಿಯನ್ನು ನಾವು ಸಾಕಷ್ಟು ಪ್ರಶಂಸಿಸುತ್ತೇವೆ. ಆದರೆ, ಅವರನ್ನು ಸಮಾಜದ ಮುಖ್ಯವಾಹಿನಿಯ ಭಾಗವಾಗಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವರಿಗೆ ಅವಕಾಶ ನೀಡುವುದು ಉತ್ತಮವಲ್ಲವೇ? ಎಂದು ನ್ಯಾಯಪೀಠ ಪ್ರಶ್ನಿಸಿದೆ. ಇನ್ನು ನಗರ ಪ್ರದೇಶಗಳಲ್ಲಿನ ವಸತಿರಹಿತರಿಗೆ ಆಶ್ರಯ ಒದಗಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪರಿಹರಿಸಲು ನಗರ ಬಡತನ ನಿರ್ಮೂಲನೆಯ ಧ್ಯೇಯವನ್ನು ಅಂತಿಮಗೊಳಿಸಲು ಕೇಂದ್ರವು ಕಾರ್ಯನಿರ್ವಹಿಸುತ್ತಿದೆ ಎಂದು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಕೇಂದ್ರದಿಂದ ಮಿಷನ್ ಅನ್ನು ಅನ್ವಯಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದನ್ನು ದೃಢೀಕರಿಸುವಂತೆ ಅಟಾರ್ನಿ ಜನರಲ್ ಅವರನ್ನು ಕೇಳಿತು. ಈ ವಿಷಯವು ಈಗ ಆರು ವಾರಗಳ ನಂತರ ವಿಚಾರಣೆಗೆ ಬರಲಿದೆ. ರೋಹಿಂಗ್ಯಾ ನಿರಾಶ್ರಿತರಿಗೆ ಸಾರ್ವಜನಿಕ ಆಸ್ಪತ್ರೆಗಳು ಮತ್ತು ಶಾಲೆಗಳಿಗೆ ಪ್ರವೇಶವನ್ನು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ಆಲಿಸಿತು ಮತ್ತು ಶಿಕ್ಷಣದಲ್ಲಿ ಯಾವುದೇ ಮಗುವಿಗೆ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.












Click it and Unblock the Notifications