ಜಾರಕಿಹೊಳಿ ಬ್ರದರ್ಸ್ ಗೆ ವಿದೇಶದಿಂದ ಬಂತು ಸಿದ್ದರಾಮಯ್ಯ ಸಂದೇಶ!
Recommended Video

ಬೆಳಗಾವಿ, ಸೆಪ್ಟೆಂಬರ್ 12: ಕರ್ನಾಟಕದಲ್ಲಿ ಕಳೆದ ಎರಡು ಮೂರು ದಿನಗಳಿಂದ ನಡೆಯುತ್ತಿರುವ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದೇಶದಿಂದಲೇ ಜಾರಕಿಹೊಳಿ ಸಹೋದರರಿಗೆ ತಾಳ್ಮೆಯ ಪಾಠ ಮಾಡಿದ್ದಾರೆ.
ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಅವರ ಬಳಿ ಖುದ್ದು ಫೋನಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ, 'ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ' ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಯುರೋಪ್ ಪ್ರವಾಸದಲ್ಲಿರುವ ಸಮಯದಲ್ಲಿ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ. ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಣ ಗೆದ್ದು, ಜಾರಕಿಹೊಳಿ ಬ್ರದರ್ಸ್ ಗೆ ಮುಖಭಂಗವಾದ ನಂತರ ಕರ್ನಾಟಕ ರಾಜಕೀಯದ ಕಿಚ್ಚಿಗೆ ತುಪ್ಪ ಸುರಿದಂತಾಗಿದೆ.

ಸಿದ್ದರಾಮಯ್ಯ ಬೆಂಬಲಿಗರಾದ ಜಾರಕಿಹೊಳಿ ಬ್ರದರ್ಸ್ ಗೆ ವಿದೇಶದಿಂದಲೇ ತಾಳ್ಮೆಯ ಪಾಠ ಮಾಡಿರುವ ಸಿದ್ದರಾಮಯ್ಯ, 'ವಿದೇಶದಿಂದ ಈ ಬಗ್ಗೆ ಮಾತನಾಡುತ್ತೇನೆ. ಅಲ್ಲಿಯವರೆಗೂ ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರವಾಗುವಂಥ ಯಾವುದೇ ನಡೆ ಇಡಬೇಡಿ' ಎಂದು ಸಲಹೆ ನೀಡಿದ್ದಾರೆ.
ಸೆ.16 ರಂದು ವಿದೇಶದಿಂದ ಸಿದ್ದರಾಮಯ್ಯ ವಾಪಸ್ ಆಗಲಿದ್ದು, ಅಷ್ಟರಲ್ಲಿ ರಾಜ್ಯ ರಾಜಕಾರಣದಲ್ಲಿ ಏನೆಲ್ಲ ಬದಲಾವಣೆಯಾಗುತ್ತದೋ, ಕಾದು ನೋಡಬೇಕು!












Click it and Unblock the Notifications