ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ: ಸಿದ್ದರಾಮಯ್ಯ ಗರಂ

ಬೆಂಗಳೂರು, ಏಪ್ರಿಲ್ 23: ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ. ರಾಜ್ಯಕ್ಕೆ ಮೇಲಿನಿಂದ ಮೇಲೆ ಬರಲು ಯಾವುದೇ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.

ಮಂಗಳವಾರ ವಿಧಾನಸೌಧ ಮುಂಭಾಗ ಇರುವ ಗಾಂಧಿ ಪ್ರತಿಮೆಯ ಎದುರು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಧರಣಿಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, 8172 ಕೋಟಿ ಗಳನ್ನೂ ಕೇಂದ್ರಕ್ಕೆ ಎನ್.ಡಿ.ಆರ್.ಎಫ್ ನಿಂದ ಬಿಡುಗಡೆ ಮಾಡುವಂತೆ ಕೋರಿ ಒತ್ತಾಯ ಮಾಡಿದ್ದೇವೆ. ಇದನ್ನು ಮಂಡಿಸಿ 7 ತಿಂಗಳಾಗಿವೆ.

What face will Modi and Amit Shah come to Karnataka with Siddaramaiah Questions

ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಬಿಡುಗಡೆ ಮಾಡುವಂತೆ ಹೇಳುವುದಾಗಿ ಹೇಳಿದ್ದರು. ನಂತರ ನಾನು ಕೃಷ್ಣಭೈರೇಗೌಡ ಡಿಸೆಂಬರ್ 20 ತಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಡಿಸೆಂಬರ್ 23ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿ ಈವರೆಗೆ ಏನೂ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಹಾಗು ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇಂದಿನವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಹಾಗೂ ದೇಶದ ಜನರ ಗಮನವನ್ನು ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೆಪ್ಟೆಂಬರ್ 22 ರಂದು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಕೇಂದ್ರ ತಂಡ 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ಈ ಮಧ್ಯೆ ಸಚಿವ ಕೃಷ್ಣಭೈರೇಗೌಡ ಹಾಗು ಪ್ರಿಯಾಂಕ ಖರ್ಗೆ ಸಂಬಂಧ ಪಟ್ಟ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂಥ ಬರಗಾಲ ಎದುರಾಗಿದೆ. ಮನವಿ ಕೊಟ್ಟಿದ್ದರೂ ಕೂಡ ಅಮಿತ್ ಶಾ ಚನ್ನಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮನವಿಯನ್ನು ವಿಳಂಬವಾಗಿ ಸಲ್ಲಿಸಿದ್ದಾರೆ ಎಂದು ಹೇಳಿದ್ದರು ಎಂದರು.

What face will Modi and Amit Shah come to Karnataka with Siddaramaiah Questions

ನಿರ್ಮಲಾ ಸೀತಾರಾಮನ್ ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ ಬರಗಾಲಕ್ಕೆ ಅಲ್ಲ ಎಂದು ಇಬ್ಬರೂ ಸುಳ್ಳು ಹೇಳಿದ್ದಾರೆ. ನಾವು ಗ್ಯಾರಂಟಿಗಳಿಗೆ ಒಂದೇ ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ ಎಂದ ಅವರು, ಗ್ಯಾರಂಟಿಗಳಿಗೆ ನಮ್ಮ ಸಂಪನ್ಮೂಲದಿಂದಲೇ ಭರಿಸಿದ್ದೇವೆ. 36000 ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಹಾಗೂ 52009 ಕೋಟಿ ರೂಪಾಯಿಗಳನ್ನು ಮುಂದಿನ ಸಾಲಿಗೆ ಮೀಸಲಿರಿಸಿದ್ದೇವೆ. ಬರಗಾಲಕ್ಕೆ 48000 ಹೆಕ್ಟೇರ್ ಪ್ರದೇಶ ಮಳೆ ಇಲ್ಲದೇ ಬೆಳೆ ನಷ್ಟವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ನಮ್ಮ ಸರ್ಕಾರ 2000 ರೂ.ಗಳ ವರೆಗೆ 34 ಲಕ್ಷ ರೈತರಿಗೆ ನೀಡಲಾಗಿದೆ. 650 ಕೋಟಿ ರೂ.ಗಳನ್ನು ಇದಕ್ಕಾಗಿ ವೆಚ್ಚ ಮಾಡಲಾಗಿದೆ. ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ. ಕುಡಿಯುವ ನೀರು, ಮೇವು, ಜನರಿಗೆ ಕೆಲಸ, ಗುಳೇ ಹೋಗುವುದನ್ನು ತಪ್ಪಿಸುವುದು, ರೈತರಿಗೆ ಮೊದಲ ಕಂತಿನ ಪರಿಹಾರ ನೀಡುವುದನ್ನು ಮಾಡಿದ್ದೇವೆ.

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ನಲ್ಲಿಯೇ ಹೇಳಿದರು. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್ ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿ ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15 ನೆ ಹಣಕಾಸು ಆಯೋಗ 5495 ಕೋಟಿ ವಿಶೇಷ ಅನುದಾನವನ್ನು ಕೊಡಲಿಲ್ಲ. ಕೊಡದೇ ಈರಲು ಕಾರಣ ನಿರ್ಮಲಾ ಸೀತಾರಾಮನ್ ಹಾಗೂ ನರೇಂದ್ರ ಮೋದಿ ಅವರು.

ಪೆರಿ ಫೆರಲ್ ರಿಂಗ್ ರೋಡ್ ಗೆ 3000 ಕೋಟಿ ಹಾಗು ಬೆಂಗಳೂರಿನ ಅಭಿವೃದ್ಧಿಗೆ 3000ಕೋಟಿ ಕೊಡಿ ಎಂದು ಶಿಫಾರಸು ಮಾಡಿದ್ದರೂ ಕೊಡಲಿಲ್ಲ. ಬರಪರಿಹಾರಕ್ಕೂ ಒಂದು ರೂ.ಇಲ್ಲ. ನರೇಂದ್ರ ಮೋದಿ ಅವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ ಗೋ ಬ್ಯಾಕ್ ನರೇಂದ್ರ ಮೋದಿ, ಗೂ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ ಎಂದರು.

ಇಂದು ಬರುತ್ತಿರುವ ಅಮಿತ್ ಶಾ ಅವರು ಸಭೆ ನಡೆಸಿ 18171 ಕೋಟಿ ಕೊಟ್ಟು ಆಮೇಲೆ ರಾಜ್ಯಕ್ಕೆ ಬರಲಿ. ನಿಮಗೆ ಯಾವುದೇ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದರು. ರಾಜ್ಯ ಸರ್ಕಾರ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಪರಿಸ್ಥಿತಿ ಬಂತು. ಅಲ್ಲಿ ಅಟಾರ್ನಿ ಜನರಲ್ ಅವರು ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೇಳಿದ ಸುಳ್ಳಿನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ತೆರಿಗೆ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದ ಹಾಗೂ ಸತ್ಯಾಂಶವನ್ನು ಮಂಡಿಸಿದ್ದರಿಂದ ಕರ್ನಾಟಕದ ಮೇಲೆ ಕರುಣೆ ತೋರಿತು. ಸರ್ವೋಚ್ಚ ನ್ಯಾಯಾಲಯ ನಮ್ಮ ಪರವಾಗಿ ಕರುಣೆ ತೋರಿದೆ ಎಂದರು. ಒಂದು ವೇಳೆ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೇ ಹೋಗಿದ್ದರೆ ಒಂದು ರೂ.ಪರಿಹಾರ ನೀಡುತ್ತಿರಲಿಲ್ಲ ಎಂದರು.

ರಾಜ್ಯದ ಪರವಾಗಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಾರತೀಯ ಚೆಂಬು ಪಕ್ಷದ ಸುಳ್ಳುಗಳನ್ನು ಜನತೆಗೆ ತೋರಿಸುತ್ತೇವೆ ಎಂದರು. ಈಗಾಗಲೇ ಸರ್ವೋಚ್ಚ ನ್ಯಾಯಾಲಯಕ್ಕೇ ಹೋಗಿದ್ದೇವೆ. ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ. ಮೋದಿ ಸರ್ಕಾರವನ್ನು ಕರ್ನಾಟಕದಿಂದ ಮಾತ್ರವಲ್ಲದೆ ಭಾರತದ ಇತರೆಡೆಗಳಿಂದಲೂ ಕಿತ್ತು ಹಾಕಲು ಪ್ರಯತ್ನಿಸುತ್ತೇವೆ ಎಂದು ರಂದೀಪ್ ಸುರ್ಜೀವಾಲ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+