ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಎಚ್‌ಡಿ ದೇವೇಗೌಡ ಹೇಳಿದ್ದೇನು?

ಬೆಂಗಳೂರು, ಸೆಪ್ಟೆಂಬರ್‌ 22: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆಯೇ ಜೆಡಿಎಸ್ ಮುಖ್ಯಸ್ಥ ಎಚ್‌ಡಿ ದೇವೇಗೌಡ ಅವರು ಅಂತರ್‌ರಾಜ್ಯ ಜಲ ವಿವಾದವನ್ನು ಕಾಂಗ್ರೆಸ್ ಸರ್ಕಾರ ನಿಭಾಯಿಸುತ್ತಿರುವ ಬಗ್ಗೆ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

cauvery-water-to-tamil-nadu

ಮುಂಗಾರು ಮಳೆ ಕೊರತೆಯಿಂದಾಗಿ ನೀರಿನ ಅಭಾವ ಉಂಟಾಗಿರುವ ಕಾರಣ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಕುಡಿಯುವ ನೀರು ಮತ್ತು ನೀರಾವರಿಗಾಗಿ ತನ್ನದೇ ಆದ ಅಗತ್ಯವನ್ನು ಗಣನೆಗೆ ತೆಗೆದುಕೊಂಡು ನೀರು ಬಿಡುವ ಸ್ಥಿತಿಯಲ್ಲಿಲ್ಲ ಎಂದು ಕರ್ನಾಟಕ ಸಮರ್ಥಿಸುತ್ತಿದೆ.

"ರಾಜ್ಯದ ಅಧಿಕಾರಿಗಳು ದೈಹಿಕವಾಗಿ CWMA ಸಭೆಗಳಿಗೆ ಹಾಜರಾಗುತ್ತಿಲ್ಲ. ಅವರು ಅದರಲ್ಲಿ ವರ್ಚುವಲ್‌ ಆಗಿ ಭಾಗವಹಿಸುತ್ತಿದ್ದಾರೆ. ನೀವು ವರ್ಚುವಲ್ ಮೀಟಿಂಗ್‌ಗಳಲ್ಲಿ ಭಾಗವಹಿಸಿದರೆ ಕೆಲಸಗಳು ನಡೆಯುತ್ತವೆಯೇ?" ಎಂದು ಮಾಜಿ ಪ್ರಧಾನಿಯಾಗಿದ್ದ ಗೌಡರು ಸುದ್ದಿಗಾರರೊಂದಿಗೆ ಮಾತನಾಡಿ ಸಮಸ್ಯೆಯನ್ನು ನಿಭಾಯಿಸುತ್ತಿರುವ ರೀತಿಗೆ ಅಸಮಾಧಾನ ವ್ಯಕ್ತಪಡಿಸಿದರು.

ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತನ್ನ ತೀರ್ಪನ್ನು ಪ್ರಕಟಿಸಿರುವುದರಿಂದ ಮಾಜಿ ಪ್ರಧಾನಿಯಾಗಿ ಈ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ, ಈಗಷ್ಟೇ ಮುಗಿದ ಸಂಸತ್ ಅಧಿವೇಶನದಲ್ಲಿ ಕಾವೇರಿ ವಿಚಾರವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ. ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯದ ಯಾವೊಬ್ಬ ಸಂಸದರೂ ಈ ಬಗ್ಗೆ ಮಾತನಾಡಲಿಲ್ಲ ಎಂದರು.

ತಮಿಳುನಾಡಿಗೆ ನದಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ವಿಶೇಷವಾಗಿ ಕಾವೇರಿ ನದಿ ಪಾತ್ರದ ಮಂಡ್ಯ ಮತ್ತು ಮೈಸೂರಿನಲ್ಲಿ ಕಳೆದ ಕೆಲವು ದಿನಗಳಿಂದ ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಹಿತರಕ್ಷಣಾ ಸಮಿತಿಯು ಶನಿವಾರ ಮಂಡ್ಯದಲ್ಲಿ ಬಂದ್‌ಗೆ ಕರೆ ನೀಡಿದೆ.

ನೀರಿನ ಪಾಲನ್ನು ದಿನಕ್ಕೆ 5,000 ಕ್ಯೂಸೆಕ್‌ನಿಂದ 7,200 ಕ್ಯೂಸೆಕ್‌ಗೆ ಹೆಚ್ಚಿಸುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ಆದಾಗ್ಯೂ, CWMA ಆದೇಶಗಳಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಆದೇಶದ ಒಂದು ದಿನದ ನಂತರ, ಕರ್ನಾಟಕವು ಮಂಡ್ಯದ ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ (ಕೆಆರ್‌ಎಸ್) ತಮಿಳುನಾಡಿಗೆ ನೀರು ಬಿಡಲು ಪ್ರಾರಂಭಿಸಿದೆ ಎಂದು ಹೇಳಲಾಗಿದೆ. 3,000 ಕ್ಯೂಸೆಕ್ ನೀರನ್ನು ನೇರವಾಗಿ ಕಾವೇರಿ ನದಿಗೆ ಮತ್ತು 2,734 ಕ್ಯೂಸೆಕ್ ಕಾಲುವೆ ಮೂಲಕ ಬಿಡುಗಡೆ ಮಾಡಲಾಗಿದೆ.

ಮಂಡ್ಯ, ಮೈಸೂರು ಮತ್ತು ಬೆಂಗಳೂರಿನ ವಿವಿಧ ಸಂಘಟನೆಗಳ ಪ್ರತಿಭಟನೆಯ ನಡುವೆಯೂ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಕರ್ನಾಟಕಕ್ಕೆ ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದ್ದರೂ ಅದನ್ನು ಪಾಲಿಸಿ ನೀರು ಬಿಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+