‌ಇಸ್ಲಾಂಗೆ ಮತಾಂತರವಾಗಿ ಎಂದು ಬಾಂಬ್‌ ಬೆದರಿಕೆ: ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು, ಡಿಸೆಂಬರ್‌ 01: ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು.

Bangalore Schools Bomb Threat: Convert to Islam or die Threat Email: Know What HD Kumaraswamy Says

ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರಕಾರ ಮೀನಾಮೇಷ ಎಣಿಸಬಾರದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಶಾಲೆಗಳಲ್ಲಿ ಬೆದರಿಕೆ ಕರೆ; ಪೋಷಕರು ಆತಂಕ ಪಡಬಾರದು: ಸಿಎಂ

ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಿ,ಎಚ್ಚರಿಕೆ ಯಿಂದ ಇರಬೇಕು ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ. ಪೋಷಕರು ಆತಂಕ ಪಡಬಾರದು. ಈ ಬಗ್ಗೆ ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್‌ ಸರ್ಕಾರ: ಬಿಜೆಪಿ

ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್‌ ಸರ್ಕಾರ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಮೂಲಕ ಕಿಡಿಕಾರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಆದಿಯಾಗಿ ಎಲ್ಲರೂ ಸೆರೆಸಿಕ್ಕ ಉಗ್ರರಿಗೆ ಅಮಾಯಕ ಪಟ್ಟ ಕಟ್ಟಿದ ಕಾರಣ, ಇಂದು ಬೆಂಗಳೂರಿನ ಶಾಲೆಗಳು ಬಾಂಬ್ ಬೆದರಿಕೆಯನ್ನು ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ.

Bangalore Schools Bomb Threat: Convert to Islam or die Threat Email: Know What HD Kumaraswamy Says

ಕಾಂಗ್ರೆಸ್ ಸರ್ಕಾರ ಬಂದ ಆರು ತಿಂಗಳಲ್ಲಿ ಬೆಲೆಯೇರಿಕೆ ಜೊತೆ ಮತಾಂಧರ ಸಂಖ್ಯೆ ಸಹ ಏರಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಇನ್ನೂ ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟ್ವೀಟ್‌ ಮಾಡಿದ್ದು,ರಾಜ್ಯದಲ್ಲಿ ಸಮಾಜ ಕಂಟಕ ಶಕ್ತಿಗಳಿಗೆ ಪೊಲೀಸ್ ಭಯ ಇಲ್ಲದಂತಾಗಿದೆ. ಇದರ ಪರಿಣಾಮವಾಗಿಯೇ ಕಿಡಿಗೇಡಿಗಳು ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂದು ಭಯದ ವಾತಾವರಣ ಸೃಷ್ಟಿಸಲು ನಿರ್ಭಯವಾಗಿ ಪ್ರಯತ್ನ ನಡೆಸಿದ್ದಾರೆ. ಆದರೆ ಈ ಪ್ರಕರಣವನ್ನು ಹುಸಿ ಎಂದು ಹಗುರವಾಗಿಯೂ ಪರಿಗಣಿಸುವಂತಿಲ್ಲ, ಸಮಾಜ ಪೀಡಕ ಶಕ್ತಿಗಳು ಶಾಲೆಗಳನ್ನೇ ಗುರಿಯಾಗಿಸಿಕೊಂಡು ಬೆದರಿಕೆ ಒಡ್ಡಿದ್ದಾರೆ ಎಂದರೆ, ಈ ಹಿನ್ನೆಲೆಯಲ್ಲಿ ಗಂಭೀರ ತನಿಖೆ ಹಾಗೂ ಮುಂಜಾಗ್ರತೆ ವಹಿಸಬೇಕಾಗಿರುವುದು ಸರ್ಕಾರದ ಆದ್ಯತೆಯಾಗಬೇಕಿದೆ.

ರಾಜ್ಯದ ಪ್ರತಿಯೊಂದು ಶಾಲೆಗಳಿಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಆತಂಕ ರಹಿತ ವಾತಾವರಣ ಮೂಡಿಸಲು ಈ ಕೂಡಲೇ ಅಗತ್ಯ ಕ್ರಮ ಕೈಗೊಂಡು ಈ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+