ಉಪಚುನಾವಣೆ ಫಲಿತಾಂಶ: ನಾನು ಹೇಳಿದ್ದು ನಿಜವಾಯಿತು ಎಂದ ಡಿ ಕೆ ಶಿವಕುಮಾರ್‌

ಬೆಂಗಳೂರು, ಫೆಬ್ರವರಿ 03: ಮೂರು ಕ್ಷೇತ್ರಗಳ ಉಪಚುನಾವಣೆಗಳ ಪೈಕಿ ಸಂಡೂರು ಬಿಟ್ಟರೆ ಎಲ್ಲೂ ನೀವು ಎಲ್ಲೂ ಗೆಲ್ಲಲ್ಲ ಅಂತ ಮಾಧ್ಯಮಗಳು ಹೇಳಿದ್ದವು. ಎಲ್ಲಾ ಸಮೀಕ್ಷೆಗಳು ತಲೆ ಕೆಳಗಾಗುತ್ತವೆ. ಬರೆದಿಟ್ಟುಕೊಳ್ಳಿ ಎಂದು ಹೇಳಿದ್ದೆ. ನಮ್ಮ ಸರ್ಕಾರದ ಸಂಖ್ಯಾಬಲ 135 ಅಲ್ಲ, 138 ಎಂದು ಹೇಳಿದ್ದೆ. ಮಾಜಿ ಸಿಎಂ ಬೊಮ್ಮಾಯಿ ಹಾಗೂ ಕುಮಾರಸ್ವಾಮಿ ಅವರ ಸುಪುತ್ರ ವಿರುದ್ಧ ಗೆಲ್ಲುತ್ತೇವೆ ಎಂದು ಹೇಳಿದ್ದೆವು. ನೀವು ಅದೇ ರೀತಿ ಫಲಿತಾಂಶ ಕೊಟ್ಟಿದ್ದೀರಿ. ಆದರೆ, ನಾನು ಹೇಳಿದ್ದು ನಿವವಾಯಿತು ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಿವೇಶನ ಮತ್ತು ಮನೆಗಳಿಗಾಗಿ 300 ಎಕರೆ ಜಮೀನು ಗುರುತಿಸಲಾಯಿತು. ಸಚಿವ ಜಮೀರ್ ಅಹಮದ್ ಖಾನ್ ರವರು 5 ಸಾವಿರ ಮನೆಗಳನ್ನು ಮಂಜೂರು ಮಾಡಿದರು. ಇವುಗಳನ್ನು ಹಂಚುವ ಕೆಲಸ ಮಾಡುತ್ತೇವೆ. ನೀವು ಅಧಿಕಾರಿಗಳಿಗೆ ಲಂಚ ನೀಡಲು ನಾನು ಹಾಗೂ ಯೋಗೇಶ್ವರ್ ಬಿಡುವುದಿಲ್ಲ ಎಂದು ಹೇಳಿದರು.

What I Said About The By-Election Came True Says DK Shivakumar

ಈಗ ನಮ್ಮ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆ ಸಮಯದಲ್ಲಿ ನಾವು ಜ್ಯೋತಿ ಬೆಳಗುವಾಗ, ನೀವು ನಾಲ್ಕು ಜನ ಶಾಸಕರು ಸೇರಿ ಏನು ಸಾಧನೆ ಮಾಡುತ್ತೀರಿ ನೋಡುತ್ತೇವೆ ಎಂದು ಸುರೇಶ್ ಸವಾಲು ಹಾಕಿದ್ದಾರೆ. ನಾವೆಲ್ಲರೂ ಶಾಸಕರು ಸೇರಿ ಈ ಸವಾಲು ಸ್ವೀಕರಿಸಬೇಕು.ಚನ್ನಪಟ್ಟಣದ ಮತದಾರರಿಗೆ ಮಂಕು ಬೂದಿ ಎರಚಲು ಸಾಧ್ಯವಿಲ್ಲ ಎಂಬುದನ್ನು ತೋರಿಸಿದ್ದೀರಿ. ನಮ್ಮ ಮೇಲೆ ಹಾಗೂ ಗ್ಯಾರಂಟಿ ಯೋಜನೆಗೆ ಮತ ನೀಡಿದ್ದೀರಿ. ಈ ಕ್ಷೇತ್ರಕ್ಕೆ ಈಗಾಗಲೇ 600 ಕೋಟಿ ರೂಪಾಯಿ ಅನುದಾನ ತಂದು ಕೆಲಸ ಆರಂಭಿಸಿದ್ದೇವೆ. ಚುನಾವಣೆಗೆ ಬಂದಾಗ ಅಭಿವೃದ್ಧಿ ಬೇಕೋ, ಕಣ್ಣೀರು ಬೇಕೋ ನಿರ್ಧಾರ ಮಾಡಿ ಎಂದು ನಿಮ್ಮ ಹತ್ತಿರ ಮನವಿ ಮಾಡಿದ್ದೆ. ನೀವು ಅಭಿವೃದ್ಧಿಯನ್ನೇ ಆಯ್ಕೆ ಮಾಡಿದ್ದೀರಿ ಎಂದರು.

ಚುನಾವಣೆ ಸಮಯದಲ್ಲಿ ಜೆಡಿಎಸ್ ನಾಯಕರು ಭಾವನಾತ್ಮಕವಾಗಿ ನಿಮ್ಮನ್ನು ಸೆಳೆಯುವ ಪ್ರಯತ್ನ ಮಾಡಿದರು. ಕಣ್ಣೀರು ಹಾಕಿದ್ದರು. ಭಾವನಾತ್ಮಕವಾಗಿ ನಿಮ್ಮನ್ನು ಬ್ಲಾಕ್ ಮೇಲ್ ಮಾಡಲು ನೋಡಿದ್ದರು. ಆದರೆ ನೀವು ಜಗ್ಗಲಿಲ್ಲ, ಬಗ್ಗಲಿಲ್ಲ ಎಂದರು. ದೇವರು ವಾರ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ ಎಂದು ನಾನು ಹೇಳುತ್ತಿರುತ್ತೇನೆ. ಈಗ ನೀವು ನಮಗೆ ಅವಕಾಶ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಕ್ಷೇತ್ರದಲ್ಲಿ ಬದಲಾವಣೆ ಮಾಡಲು ನಾವು ಸಾಧನೆ ಮಾಡಲು ರೂಪುರೇಷೆ ನಿರ್ಮಿಸಬೇಕು. ನಾನು ಆಕಾಶವನ್ನು ಧರೆಗೆ ಇಳಿಸುತ್ತೇನೆ ಎಂದು ಹೇಳುವುದಿಲ್ಲ. ನಿಮ್ಮ ಕಣ್ಣಿಗೆ ಕಾಣುವ ಬದಲಾವಣೆ ತರುತ್ತೇವೆ ಎಂದು ಹೇಳಿದರು.

ಹಾಲು ಉತ್ಪಾದಕರ ಸಮಸ್ಯೆ ನಮ್ಮ ಗಮನದಲ್ಲಿ ಇದೆ. ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ಮಾಡುತ್ತೇವೆ. ನೀವು ಹಣಕ್ಕೆ ಬೆಲೆ ಕೊಡಲಿಲ್ಲ, ಗುಣಕ್ಕೆ ಬೆಲೆ ಕೊಟ್ಟಿದ್ದೀರಿ ಎಂದು ಹೇಳಿದರು. ನಾನು ಆರಂಭದಲ್ಲಿ ಇಲ್ಲಿಗೆ ಬಂದಾಗ ನೀವು ತೋರಿದ ಪ್ರೀತಿ ವಿಶ್ವಾಸ ಮರೆಯುವುದಿಲ್ಲ. ನಾನು ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಮಾಡಿ ನಮ್ಮ ಜನರನ್ನು ಕಾಪಾಡು ಎಂದು ಬೇಡಿಕೊಂಡಿದ್ದೆ. ರಾಮನ ತಂದೆ ದಶರಥನ ದೇವಾಲಯಕ್ಕಿಂತ ರಾಮನ ಭಂಟ ಆಂಜನೇಯನ ದೇವಾಲಯ ನಮ್ಮಲ್ಲಿ ಹೆಚ್ಚಿವೆ. ಆಂಜನೇಯ ರಾಮನ ಸೇವಕ, ಸೇವೆಯನ್ನು ಸಮಾಜ ಗುರುತಿಸುತ್ತದೆ ಎಂದರು.

ನಾನು ಮುಂದಿನ ಒಂದು ವಾರದಲ್ಲಿ ಮತ್ತೆ ಕ್ಷೇತ್ರಕ್ಕೆ ಬಂದು ಕೊಟ್ಟ ಮಾತು ಈಡೇರಿಸುವ ಕೆಲಸದ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಚುನಾವಣೆ ಸಮಯದಲ್ಲಿ ನಾನು ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಮಾಡಿದೆ. ನೀವು ಶಾಸಕರಾಗಿ ಮುಖ್ಯಮಂತ್ರಿಯಾಗಿ ಯಾವ ಸಾಧನೆ ಮಾಡಿದ್ದೀರಿ ಎಂದು. ಯೋಗೇಶ್ವರ್ ಅವರು ಅನೇಕ ದೇವಾಲಯ ಕಟ್ಟಿಸಿದ್ದಾರೆ, ನೀವು ಯಾವ ದೇವಾಲಯ ಕಟ್ಟಿದ್ದೀರಿ, ಶಾಲೆಗಾಗಿ ನೀವು 2 ಎಕರೆ ಜಮೀನು ದಾನ ಮಾಡಿದ್ದೀರಾ ಎಂದು ಸವಾಲು ಹಾಕಿದ್ದೆ. ನನ್ನ ಪ್ರಶ್ನೆಗೆ ಅವರಿಂದ ಉತ್ತರ ಬರಲಿಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+