Get Updates
Get notified of breaking news, exclusive insights, and must-see stories!

ಉತ್ತರ ಕರ್ನಾಟಕಕ್ಕೆ ಬಿಗ್‌ ಗುಡ್‌ನ್ಯೂಸ್‌, ಏನದು ?

ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಪ್ರಾರಂಭವಾಗಿದೆ. ಈ ಬಾರಿಯ ಹೂಡಿಕೆದಾರರ ಸಮಾವೇಶ ಹಲವು ಕಾರಣಕ್ಕೆ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಬಾರಿಯ ಸಮಾವೇಶದಲ್ಲಿ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಬೇಕು. ಅಭಿವೃದ್ಧಿ ಹಾಗೂ ಹೂಡಿಕೆಯ ವಿಚಾರದಲ್ಲಿ ಉತ್ತರ ಕರ್ನಾಟಕವನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ. ಹೀಗಾಗಿ ಈ ಬಾರಿಯ ಸಮಾವೇಶದಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಇದೀಗ ಕೊನೆಗೂ ಉತ್ತರ ಕರ್ನಾಟಕದ ಜನರಿಗೆ ಗುಡ್‌ನ್ಯೂಸ್‌ವೊಂದು ಸಿಕ್ಕಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಸಾವಿರಾರು ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆಯೂ ಇದೆ. ಇದರ ಸಂಪೂರ್ಣ ವಿವರ ನೋಡೋಣ.

ಜಾಗತಿಕ ಹೂಡಿಕೆದಾರರ ಸಮಾವೇಶ ಫೆಬ್ರವರಿ 11ಕ್ಕೆ ಪ್ರಾರಂಭವಾಗಿ ಫೆಬ್ರವರಿ 14ರವೆಗೆ ನಡೆಯಲಿದೆ. ಈ ಬಾರಿ ಹಲವು ಕಾರಣಕ್ಕೆ ಈ ಸಮಾವೇಶ ಕುತೂಹಲ ಮೂಡಿಸಿದೆ. ಕರ್ನಾಟಕಕ್ಕೆ ಕೋಟ್ಯಾಂತರ ರೂಪಾಯಿ ಹೂಡಿಕೆ ಬರುವ ನಿರೀಕ್ಷೆ ಇದೆ.

What is Big Good News for North Karnataka

ಜಾಗತಿಕ ಹೂಡಿಕೆದಾರರ ಸಮಾವೇಶ 2025ಕ್ಕೆ ಅತ್ಯುತ್ತಮ ರೆಸ್ಪಾನ್ಸ್‌ ಬಂದಿದೆ. ಮೊದಲ ದಿನವೇ ಅಧಿವೇಶನಕ್ಕೆ ಬೆಸ್ಟ್‌ ರೆಸ್ಪಾನ್ಸ್‌ ವ್ಯಕ್ತವಾಗುತ್ತಿದ್ದು. ಗಮನಾರ್ಹ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಇದರಿಂದ ಉತ್ತರ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಭಾಗಕ್ಕೆ ಅನುಕೂಲ ಆಗಲಿದೆ ಎಂದು ಹೇಳಲಾಗುತ್ತಿದೆ. ಬಲ್ದೋಟ ಎನ್ನುವ ಸಂಸ್ಥೆಯಿಂದ ಬರೋಬ್ಬರಿ 54,000 ಕೋಟಿ ಬಂಡವಾಳ ಹೂಡಿಕೆಗೆ ಸಹಿ ಹಾಕಲಾಗಿದೆ. ಈ ಒಪ್ಪಂದದಿಂದ ಉತ್ತರ ಕರ್ನಾಟಕದ ಭಾಗದಲ್ಲಿ ಬರೋಬ್ಬರಿ 15,000 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಉತ್ತರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಅದನ್ನು ತಪ್ಪಿಸುವುದಕ್ಕೆ ಹೂಡಿಕೆ ಹೆಚ್ಚಳವಾಗಬೇಕು ಎನ್ನುವ ಆಗ್ರಹ ಕೇಳಿ ಬಂದಿತ್ತು. ಇದೀಗ ಅದರ ಮೊದಲ ಹಂತ ಪ್ರಾರಂಭವಾಗಿದೆ. ಗಣಿಗಾರಿಕೆ, ಕೈಗಾರಿಕಾ ಅನಿಲ, ಪವನ ವಿದ್ಯುತ್ ಹಾಗೂ ನೌಕಾ ಸಾರಿಗೆ ಕ್ಷೇತ್ರಗಳಲ್ಲಿ ಜಾಗತಿಕವಾಗಿ ಹೆಸರು ಗಳಿಸಿರುವ ಬಲ್ದೋಟ ಸಂಸ್ಥೆಯು ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯಲ್ಲಿ 10.5 ಲಕ್ಷ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬಲ್ದೋಟ ಸಮೂಹ ಸಂಸ್ಥೆ ಭಾರತೀಯ ಉಕ್ಕಿನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಡುವ ಒಪ್ಪಂದಕ್ಕೆ ಸಹಿ ಹಾಕಲಿದೆ ಎಂದು ಅವರು ತಿಳಿಸಿದ್ದಾರೆ.

ಎಲ್ಲಾ ಕಣ್ಣು ಉತ್ತರ ಕರ್ನಾಟಕದ ಮೇಲೆ: ಎಲ್ಲರ ಕಣ್ಣು ಉತ್ತರ ಕರ್ನಾಟಕದ ಮೇಲೆ / all eyes on north karnataka ಹಾಗೂ #Voiceforuttarkarnataka ಎನ್ನುವ ಹ್ಯಾಷ್ ಟ್ಯಾಗ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ ಅದನ್ನು ತಪ್ಪಿಸಬೇಕು ಎನ್ನುವ ಆಗ್ರಹಗಳು ಸೋಷಿಯಲ್‌ ಮೀಡಿಯಾದಲ್ಲಿ ಕೇಳಿ ಬಂದಿತ್ತು. ಬೆಂಗಳೂರು ಹೊರತುಪಡಿಸಿಯೂ ಕರ್ನಾಟಕ ಇದೆ. ಈ ಭಾಗದಲ್ಲೂ ಅಭಿವೃದ್ಧಿ ಕೆಲಸಗಳು ಆಗಬೇಕಿವೆ. ಉತ್ತರ ಕರ್ನಾಟಕವನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಬೆಂಗಳೂರಿನ ಹೊರ ವಲಯದಲ್ಲಿ ಕ್ವಿನ್‌ ಸಿಟಿ ನಿರ್ಮಾಣ ಯೋಜನೆ ಪ್ರಕಟವಾದಾಗಲೂ ವಿರೋಧ ವ್ಯಕ್ತವಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+