ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಕಾಂಗ್ರೆಸ್ ನಿಲುವು ಏನು?: ಕಟೀಲ್
ಬೆಂಗಳೂರು, ಸೆಪ್ಟಂಬರ್ 04: ತಮಿಳುನಾಡು ಮುಖ್ಯಮಂತ್ರಿ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಹಿಂದೂ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಖಂಡನೀಯ. ಡಿಎಂಕೆ ಪಕ್ಷವು ಐಎನ್‍ಡಿಐಎ ಜೊತೆ ಸೇರಿದ್ದು, ಈ ಹೇಳಿಕೆ ಕುರಿತು INDIA ಅಂಗ ಪಕ್ಷಗಳು ನಿಲುವು ಏನು? ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಪ್ರಶ್ನಿಸಿದರು.
ಸೋಮವಾರ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ' ಸುದ್ದಿಗಾರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸನಾತನ, ಹಿಂದೂ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಅವರು ಅವಹೇಳನಕಾರಿಗೆಯಾಗಿ ಮಾಡಿದ್ದಾರೆ.

ತಮಿಳುನಾಡಿನ ರಾಜಕಾರಣದಲ್ಲಿ ನಿರಂತರವಾಗಿ ಆರ್ಯ- ದ್ರಾವಿಡ ಎಂಬ ಸಮಸ್ಯೆಯನ್ನು ಹುಟ್ಟು ಹಾಕಿ ಅದರ ಮೂಲಕ ರಾಜಕಾರಣ ಮಾಡುವುದನ್ನು ನಾವು ಕಂಡಿದ್ದೇವೆ ಎಂದು ಅವರು ದೂರಿದರು.
ಆ ರಾಜಕಾರಣದ ಮುಂದುವರೆದ ಭಾಗವಾಗಿ ಸನಾತನ ಹಿಂದೂ ಧರ್ಮಕ್ಕೆ ಅವಹೇಳನ ಮಾಡಿದ್ದಾರೆ ಎಂದ ಅವರು, ಡಿಎಂಕೆ ಪಕ್ಷವು ಐಎನ್‍ಡಿಐಎ ಜೊತೆ ಸೇರಿದೆ. INDIA ಅಂಗ ಪಕ್ಷಗಳು ಇದರ ಕುರಿತು ಏನು ಹೇಳುತ್ತಾರೆಂದು ಸ್ಪಷ್ಟಪಡಿಸಲು ಎಂದು ಅವರು ಒತ್ತಾಯಿಸಿದರು.
ಸಿದ್ದರಾಮಯ್ಯ, ಡಿಕೆಶಿ ಪ್ರತಿಕ್ರಿಯೆ ಕೇಳಿದ ಕಟಿಲ್
ಈ ರಾಜ್ಯದಲ್ಲಿ INDIA ಮೈತ್ರಿಕೂಟ ಸೇರಿರುವ ಕಾಂಗ್ರೆಸ್ ನಿಲವು ಏನು, ಸ್ಟಾಲಿನ್ ಹೇಳಿಕೆಯನ್ನು ಸಮರ್ಥಿಸುತ್ತಾರಾ?. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಬಗ್ಗೆ ಏನು ಹೇಳುತ್ತಾರೆ? ಎಂದು ಕೇಳಿದರು.

ಭಾರತದ ಆತ್ಮ ಹಿಂದುತ್ವ. ಈ ದೇಶದ ಬಹುಸಂಖ್ಯಾತ ಜನರು ಹಿಂದೂಗಳು. ಭಾರತವನ್ನೇ ಹಿಂದೂ ರಾಷ್ಟ್ರ ಎಂದು ಕರೆಯಲಾಗುತ್ತಿದೆ. ಇಲ್ಲಿ ಇರುವ ಧರ್ಮ ಒಂದೇ ಅದು ಹಿಂದೂ ಧರ್ಮ. ಬಾಕಿ ಉಳಿದುದೆಲ್ಲ ಮತಗಳು ಎಂದು ಅವರು ವಿಶ್ಲೇಷಿಸಿದರು.
ಇಲ್ಲಿನ ಆತ್ಮ ಹಿಂದುತ್ವ. ಇಲ್ಲಿನ ಸಂಸ್ಕೃತಿ ಶ್ರೇಷ್ಠವಾದುದು. ಭಾರತದ ಸನಾತನ ಸಂಸ್ಕೃತಿಯನ್ನು ಜಗತ್ತು ಒಪ್ಪಿಕೊಳ್ಳುತ್ತಿದೆ. ರಾಜಕಾರಣಕ್ಕಾಗಿ ಇಂಥ ಹೇಳಿಕೆ ಸರಿಯಲ್ಲ. ಇದನ್ನು ಖಂಡಿಸುವುದಾಗಿ ತಿಳಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸೌಜನ್ಯ ಕೊಲೆ ಮರುತನಿಖೆಗೆ ರಾಜ್ಯಪಾಲರಿಗೆ ಮನವಿ
ಬೆಳ್ತಂಗಡಿ ತಾಲ್ಲೂಕಿನ ಕುಮಾರಿ ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆ ಮಾಡುವಂತೆ ಆದೇಶ ನೀಡಲು ರಾಜ್ಯಪಾಲರನ್ನು ಬಿಜೆಪಿ ನಿಯೋಗ ಮನವಿ ಮಾಡಿದೆ. ಬಿಜೆಪಿ ನಿಯೋಗವು ರಾಜ್ಯಪಾಲರ ಬಳಿ ತೆರಳಿ ಮನವಿ ಪತ್ರ ಸಲ್ಲಿಸಿದೆ. ಈ ನಿಯೋಗದ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ವಹಿಸಿದ್ದರು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರು ಈ ನಿಯೋಗದಲ್ಲಿ ಹಾಜರಿದ್ದರು.












Click it and Unblock the Notifications