• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಯೋಧರ ಜೀವ ಮುಖ್ಯವೋ, 56 ಇಂಚಿನ ಪ್ರತಿಷ್ಠೆ ಮುಖ್ಯವೋ?

|

ಬೆಂಗಳೂರು, ಜೂನ್ 26: ಚೀನಾ ದೇಶದ ವಿರುದ್ದದ ಗಡಿ ವೈಷಮ್ಯದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿಯನ್ನು ಟೀಕಿಸಿದ್ದ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮತ್ತೆ ಪ್ರಧಾನಿ ವಿರುದ್ದ ಗುಡುಗಿದ್ದಾರೆ.

   Railway service to be cancelled till August 12th | Oneindia Kannada

   ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಪ್ರಧಾನಿ ಮೋದಿವರ ರಾಜತಾಂತ್ರಿಕ ವೈಫಲ್ಯದಿಂದಾಗಿ ನಾವು ನಮ್ಮ ಯೋಧರನ್ನು ಮತ್ತು ಭೂಭಾಗವನ್ನು ಕಳೆದುಕೊಂಡಿದ್ದೇವೆ"ಎಂದು ಟ್ವೀಟ್ ಮಾಡಿದ್ದಾರೆ.

   ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಮಾಡಲು ಸಿದ್ದರಾಮಯ್ಯ ಒತ್ತಾಯ

   "ಮೋದಿಯವರು ಚೀನಾದವರು ನಮ್ಮ ಭೂಮಿಯನ್ನು ಕಬಳಿಸಿಲ್ಲ ಎಂದು ಹೇಳುತ್ತಿದ್ದಾರೆ. ಇದು ಅವರ 56 ಇಂಚಿನ ಪ್ರತಿಷ್ಠೆ ಉಳಿಸಿಕೊಳ್ಳಲು ಹೇಳಿರುವಂತಹ ಮಾತು. ನಮಗೆ ಏನು ಮುಖ್ಯ, ಯೋಧರ ಜೀವವೋ ಅಥವಾ 56 ಇಂಚಿನ ಪ್ರತಿಷ್ಠೆಯೋ "ಎಂದು ಸಿದ್ದರಾಮಯ್ಯ, ಮೋದಿಯವರನ್ನು ಪ್ರಶ್ನಿಸಿದ್ದಾರೆ.

   "ಚೀನಾ ಮತ್ತು ಭಾರತದ ನಡುವಿನ ಗಡಿ ಸಂಘರ್ಷದಲ್ಲಿ ಇಪ್ಪತ್ತು ಜನ ನಮ್ಮ ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧರ ಕುಟುಂಬಕ್ಕೆ ಕಾಂಗ್ರೆಸ್ ಪಕ್ಷ ಸಾಂತ್ವನವನ್ನು ಹೇಳುತ್ತದೆ ಮತ್ತು ಅವರ ಪರವಾಗಿ ನಿಲ್ಲುತ್ತದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

   "ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ. ಸರ್ಕಾರ ದೇಶಕ್ಕೆ, ದೇಶದ ಜನತೆಗೆ ಉತ್ತರದಾಯಿ. ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರ್ಕಾರವನ್ನು ನಂಬಿದೆ, ಜನರನ್ನು ವಿಶ್ವಾಸಕ್ಕೆ‌ ತೆಗೆದುಕೊಂಡು ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆಯೂ ಕೇಂದ್ರ ಸರ್ಕಾರದ್ದು" ಎಂದು ಈ ಹಿಂದೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

   'ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಪೈಪೋಟಿಗೆ ಇಳಿಯುವುದಿಲ್ಲ'

   "ಚೀನಾ ದೇಶ ಗಡಿತಂಟೆ ಶುರುಹಚ್ಚಿ ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ನಿಜಸಂಗತಿಯ ಬಗ್ಗೆ @narendramodi , @rajnathsingh ಇಲ್ಲಿಯ ವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

   English summary
   What Is Important For Us, Our Soldiers Life Or His 56 Inch Pride: Siddaramaiah Questions To PM Modi.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X