KWIN City: ಉತ್ತರ ಕರ್ನಾಟಕದಲ್ಲೂ ಕ್ವಿನ್ ಸಿಟಿ ನಿರ್ಮಾಣ; ಏನಿದು ಯೋಜನೆ? ಅಭಿವೃದ್ಧಿಗೆ ಹೇಗೆ ಸಹಕಾರಿ?

ಬೆಂಗಳೂರು, ಭಾರತದ ಸ್ಟಾರ್ಟಪ್‌ ರಾಜಧಾನಿ, ಸಿಲಿಕಾನ್ ವ್ಯಾಲಿ, ಐಟಿ ಹಬ್ ಎಂದೆಲ್ಲಾ ಹೆಸರು ಪಡೆದಿರುವ ನಗರ. ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಬೆಂಗಳೂರು ನಗರದ ಪಾತ್ರ ಬಹಳ ದೊಡ್ಡದು. ಬೆಂಗಳೂರು ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಇದೆ. ನಗರದ ಅಭಿವೃದ್ಧಿಗೆ ಹೊಸ ಹೊಸ ಯೋಜನೆಗಳನ್ನು ಸರ್ಕಾರ ಕೂಡ ಘೋಷಣೆ ಮಾಡುತ್ತಲೇ ಇದೆ. ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಹೊರವಲಯದಲ್ಲಿ ಕ್ವಿನ್ ಸಿಟಿ (ಜ್ಞಾನ, ಯೋಗಕ್ಷೇಮ ಮತ್ತು ನಾವೀನ್ಯತೆ ನಗರ) ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಕ್ವಿನ್ ಸಿಟಿ (KWIN - Knowledge, Wellbeing, and Innovation) ಡಾಬಸ್‌ಪೇಟೆ ಮತ್ತು ದೊಡ್ಡಬಳ್ಳಾಪುರ ನಡುವೆ ತಲೆ ಎತ್ತಲಿದೆ. ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು 40,000 ಸಾವಿರ ಕೋಟಿ ರೂಪಾಯಿ ಹೂಡಿಕೆಯನ್ನು ಆಕರ್ಷಿಸುವ ಗುರಿ ಹೊಂದಿದೆ. ಇದೀಗ ಬೆಂಗಳೂರು ಮಾತ್ರವಲ್ಲದೆ ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ಕರಾವಳಿ ಭಾಗದಲ್ಲಿ ಮಿನಿ ಕ್ವಿನ್‌ ಸಿಟಿ ನಿರ್ಮಾಣ ಮಾಡಲು ಯೋಜನೆ ರೂಪಿಸಿರುವುದಾಗಿ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ತಿಳಿಸಿದ್ದಾರೆ.

what is kwin city how it helps Karnataka s development

2023ರಲ್ಲಿ ಯೋಜನೆಯನ್ನು ಬೆಂಗಳೂರು ಸಮೀಪದ ಕ್ವಿನ್ ಸಿಟಿ ಯೋಜನೆ ಘೋಷಣೆ ಮಾಡಿದ್ದರೂ, 2024ರ ಸೆಪ್ಟೆಂಬರ್ ನಲ್ಲಿ ಕೆಲಸ ಆರಂಭಿಸಲಾಗಿದೆ. ಹಾಗಾದರೆ ಕ್ವಿನ್ ಸಿಟಿ ಎಂದರೇನು, ಇಲ್ಲಿ ಏನೆಲ್ಲಾ ಇರಲಿದೆ. ಇದರಿಂದ ರಾಜ್ಯದ ಅಭಿವೃದ್ಧಿಗೆ ಏನೆಲ್ಲಾ ಸಹಾಯವಾಗಲಿದೆ ಎನ್ನುವ ಮಾಹಿತಿ, ವಿವರ ಇಲ್ಲಿದೆ.

ಹೂಡಿಕೆದಾರರ ಆಕರ್ಷಣೆ

ಕ್ವಿನ್ ಸಿಟಿ ಮೂಲ ಉದ್ದೇಶ ಹೂಡಿಕೆದಾರರನ್ನು ಆಕರ್ಷಿಸುವುದು. ಮೂಲಸೌಲಭ್ಯಗಳನ್ನು ಕಲ್ಪಿಸುವ ಮೂಲಕ ವಿಶ್ವದ ಪ್ರಮುಖ ಕಂಪನಿಗಳನ್ನು ಆಕರ್ಷಿಸಿ, ಉದ್ಯೋಗ ಸೃಷ್ಟಿಸುವುದು ಗುರಿಯಾಗಿದೆ. 5800 ಎಕರೆ ಪ್ರದೇಶದಲ್ಲಿ ಇದು ತಲೆ ಎತ್ತಲಿದ್ದು, ಆಟೋಮೊಬೈಲ್‌ಗಳು, ಸೆಮಿಕಂಡಕ್ಟರ್‌ಗಳು ಮತ್ತು ಏರೋಸ್ಪೇಸ್‌ನಂತಹ ಕ್ಷೇತ್ರಗಳಲ್ಲಿ ಉದ್ಯೋಗಗಳು ಮತ್ತು ಗೃಹ ಕೈಗಾರಿಕೆಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಸುಮಾರು 80 ಸಾವಿರ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.

ಬೆಳಗಣಿಗೆಗೆ ಸಹಕಾರಿ

ಕ್ವಿನ್ ಸಿಟಿ ರಾಜ್ಯದ ಆರ್ಥಿಕ ಬೆಳವಣಿಗೆಗೆ ವೇಗ ಒದಗಿಸಯತ್ತದೆ. ಅತ್ಯಾಧುನಿಕ ಸಂಶೋಧನೆಗಳಿಗೆ ಪ್ರೋತ್ಸಾಹ ನೀಡುತ್ತದೆ. ಆರೋಗ್ಯ ರಕ್ಷಣೆ, ಜೈವಿಕ ತಂತ್ರಜ್ಞಾನ ಮತ್ತು ಎಐ ಕ್ಷೇತ್ರಗಳಲ್ಲಿ ಅವಕಾಶ ಸೃಷ್ಟಿಸುತ್ತದೆ.

ಹೆಸರೇ ಸೂಚಿಸುವಂತೆ ಜ್ಞಾನ, ಆರೋಗ್ಯ ರಕ್ಷಣೆ, ನಾವೀನ್ಯತೆ ಮತ್ತು ಸಂಶೋಧನೆಗೆ ಪ್ರಾಮುಖ್ಯತೆ ನೀಡಲಿದೆ. ಪ್ರಮುಖ ಸಂಸ್ಥೆಗಳು, ಸಂಶೋಧನಾ ಕೇಂದ್ರಗಳು ಮತ್ತು ಉದ್ಯಮ ಪಾಲುದಾರರನ್ನು ಒಂದೆಡೆ ಸೇರಿಸುವ ಮಹತ್ವಾಕಾಂಕ್ಷೆ ಹೊಂದಲಾಗಿದೆ. ಆರೋಗ್ಯ ರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು ಆರೋಗ್ಯ ರಕ್ಷಣೆ ವ್ಯವಸ್ಥೆಯನ್ನು ಸುಧಾರಿಸುತ್ತದೆ ಎಂದು ಸರ್ಕಾರ ತಿಳಿಸಿದೆ.

5800 ಎಕರೆ ಪ್ರದೇಶದಲ್ಲಿ ತಲೆ ಎತ್ತಲಿರುವ ಕ್ವಿನ್ ಸಿಟಿಯಲ್ಲಿ, 5,00,00 ನಿವಾಸಿಗಳಿಗೆ ಅವಕಾಸ ಕಲ್ಪಿಸಲು ವಿನ್ಯಾಸ ಮಾಡಲಿದೆ. 465 ಎಕರೆ ವಿಸ್ತೀರ್ಣದ ಸೌರ ವಿದ್ಯುತ್ ಉತ್ಪಾದನಾ ಘಟಕ ಹೊಂದಿರಲಿದ್ದು ವಿದ್ಯುತ್‌ ಸ್ವಾವಲಂಬನೆ ಸಾಧಿಸುವ ಗುರಿ ಹೊಂದಿದೆ. ಮಳೆ ನೀರು ಕೊಯ್ಲು ವ್ಯವಸ್ಥೆ ಮೂಲಕ ನಗರಕ್ಕೆ ಬೇಕಾದ 50 ಪ್ರತಿಶತ ನೀರನ್ನು ಪೂರೈಕೆ ಮಾಡಲು ಯೋಜನೆ ರೂಪಸಿಲಾಗಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳು, ಅಗ್ರ 500 ವಿದೇಶಿ ಶಿಕ್ಷಣ ಸಂಸ್ಥೆಗಳನ್ನು ಆಕರ್ಷಿಸುವ ಯೋಜನೆ ಹೊಂದಲಾಗಿದೆ.

ಮಿನಿ ಕ್ವಿನ್ ಸಿಟಿಗಳಲ್ಲಿ ಕೂಡ ಇದೇ ಮಾದರಿಯನ್ನು ಅನುಸರಿಸಲಾಗುತ್ತದೆ. ವಿವಿಧ ಜಿಲ್ಲೆಗಳಲ್ಲಿ ಕ್ವಿನ್ ಸಿಟಿ ನಿರ್ಮಾಣವಾದರೆ ಬೆಂಗಳೂರು ಮೇಲಿನ ಒತ್ತಡ ಕಡಿಮೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+