ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಫೆ.26ರ ಡೆಡ್ ಲೈನ್!

|
Google Oneindia Kannada News

Recommended Video

ಸಂಕಷ್ಟಕ್ಕೆ ಸಿಲುಕಿದ ಡಿಸಿಎಂ ಲಕ್ಷ್ಮಣ್ ಸವದಿ | LAKSHMAN SAVADI | ONEINDIA KANNADA

ಬೆಂಗಳೂರು, ಜನವರಿ 01 : ಹೊಸ ವರ್ಷದಲ್ಲಿ ಕರ್ನಾಟಕದ ರಾಜಕೀಯದಲ್ಲಿ ಹಲವು ಬೆಳಗಣಿಗೆ ನಡೆಯಲಿದೆ. ಫೆಬ್ರವರಿ 26ರ ಬಳಿಕ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭವಿಷ್ಯವೇನು? ಎಂಬ ಪ್ರಶ್ನೆ ಎದ್ದಿದೆ. ಬಿಜೆಪಿಯ ಹಲವು ನಾಯಕರು ಸಹ ಡಿಸಿಎಂ ಮುಂದಿನ ನಡೆ ಏನು ಎಂದು ಕಾದು ನೋಡುತ್ತಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಲಕ್ಷ್ಮಣ ಸವದಿ ಉಪ ಮುಖ್ಯಮಂತ್ರಿಯಾದರು. ಬಿಜೆಪಿಯ ನಡೆ ಕಂಡು ಹಲವರು ಹುಬ್ಬೇರಿಸಿದ್ದರು. ಉಪ ಚುನಾವಣೆಯಲ್ಲಿ ಅವರು ಗೆದ್ದು ಬರಲಿದ್ದಾರೆ ಎಂಬ ನಿರೀಕ್ಷೆ ಇತ್ತು.

ಸಂಕಷ್ಟಕ್ಕೆ ಸಿಲುಕಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಸಂಕಷ್ಟಕ್ಕೆ ಸಿಲುಕಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಅಚ್ಚರಿ ಎಂಬಂತೆ ಉಪ ಚುನಾವಣೆಯಲ್ಲಿ ಲಕ್ಷ್ಮಣ ಸವದಿಗೆ ಟಿಕೆಟ್ ಸಿಗಲಿಲ್ಲ. ಸವದಿ ಪ್ರತಿನಿಧಿಸುವ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಮಹೇಶ್ ಕುಮಟಳ್ಳಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಗೆದ್ದು ಬಂದರು. ಯಾವುದೇ ಸದನದ ಸದಸ್ಯರಾಗದ ಲಕ್ಷ್ಮಣ ಸವದಿ ಮುಂದೇನು ಮಾಡಲಿದ್ದಾರೆ?.

ಶಿವಾಜಿನಗರದಲ್ಲಿ ಗೆದ್ದ ಕಾಂಗ್ರೆಸ್‌; ಲಕ್ಷ್ಮಣ ಸವದಿಗೆ ಸಂತಸಶಿವಾಜಿನಗರದಲ್ಲಿ ಗೆದ್ದ ಕಾಂಗ್ರೆಸ್‌; ಲಕ್ಷ್ಮಣ ಸವದಿಗೆ ಸಂತಸ

ವಿಧಾನ ಪರಿಷತ್ ಸದಸ್ಯರಾದ ರಿಜ್ವಾನ್ ಅರ್ಷದ್ ಉಪ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಗೆದ್ದು ಬಂದಿದ್ದಾರೆ. ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರದಿಂದ ಲಕ್ಷ್ಮಣ ಸವದಿ ಪರಿಷತ್ ಸದಸ್ಯರಾಗಲಿದ್ದಾರೆ ಎಂಬುದು ಸದ್ಯದ ಸುದ್ದಿ.

ಸುಪ್ರೀಂ ತೀರ್ಪು; ಅನರ್ಹರಿಗೆ ಸಂತೋಷ, ಸವದಿಗೆ ಸಂಕಷ್ಟಸುಪ್ರೀಂ ತೀರ್ಪು; ಅನರ್ಹರಿಗೆ ಸಂತೋಷ, ಸವದಿಗೆ ಸಂಕಷ್ಟ

ಲಕ್ಷ್ಮಣ ಸವದಿ ಹೇಳುವುದೇನು?

ಲಕ್ಷ್ಮಣ ಸವದಿ ಹೇಳುವುದೇನು?

ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ, "ಕಾಲ ಕೂಡಿ ಬಂದಾಗ ಪರಿಷತ್ತಿಗೆ ಪ್ರವೇಶ ಆಗುತ್ತದೆ" ಎಂದು ಹೇಳಿದರು. ಫೆಬ್ರವರಿ 26ರೊಳಗೆ ಅವರು ವಿಧಾನ ಪರಿಷತ್ ಸದಸ್ಯರಾಗಬೇಕು. ಇಲ್ಲವಾದಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ.

ರಿಜ್ವಾನ್ ಅರ್ಷದ್ ಪ್ರಮಾಣ ವಚನ

ರಿಜ್ವಾನ್ ಅರ್ಷದ್ ಪ್ರಮಾಣ ವಚನ

ಉಪ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ರಿಜ್ವಾನ್ ಅರ್ಷದ್ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಪರಿಷತ್ ಸದಸ್ಯತ್ವ ರದ್ದಾಗಲಿದೆ. ಆಗ ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಬೇಕು. ಲಕ್ಷ್ಮಣ ಸವದಿ ಈ ಸ್ಥಾನಕ್ಕೆ ಆಯ್ಕೆಯಾಗಬಹುದು ಎಂಬ ಸುದ್ದಿ ಹಬ್ಬಿದೆ.

ರಿಜ್ವಾನ್ ಸ್ಥಾನಕ್ಕೆ ಪೈಪೋಟಿ

ರಿಜ್ವಾನ್ ಸ್ಥಾನಕ್ಕೆ ಪೈಪೋಟಿ

ತೆರವಾಗುವ ಒಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆಯ್ಕೆಯಾಗಲು ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಬೇಡ ಎಂದ ಶಂಕರ್ ಪರಿಷತ್ ಪ್ರವೇಶ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ. ಲಕ್ಷ್ಮಣ ಸವದಿಗೆ ಸ್ಥಾನ ಕೈ ತಪ್ಪಿದರೆ ಮುಂದೇನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಉಪ ಮುಖ್ಯಮಂತ್ರಿ ಹುದ್ದೆ

ಉಪ ಮುಖ್ಯಮಂತ್ರಿ ಹುದ್ದೆ

ಲಕ್ಷ್ಮಣ ಸವದಿ ಸೇರಿದಂತೆ ರಾಜ್ಯದಲ್ಲಿ ಮೂವರು ಡಿಸಿಎಂಗಳಿದ್ದಾರೆ. ಬಿ. ಶ್ರೀರಾಮುಲು, ರಮೇಶ್ ಜಾರಕಿಹೊಳಿ ಅವರನ್ನು ಉಪ ಮುಖ್ಯಮಂತ್ರಿ ಮಾಡಿ ಎಂಬ ಬೇಡಿಕೆಗಳಿವೆ. ಉಪ ಮುಖ್ಯಮಂತ್ರಿ ಹುದ್ದೆಯನ್ನು ರದ್ದು ಮಾಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಮುಂದೇನಾಗಲಿದೆ? ಎಂದು ಕಾದು ನೋಡಬೇಕಿದೆ.

English summary
Deputy chief minister of Karnataka Lakshman Savadi should elect as MLC or MLA before February 26, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X