HSRP ನಂಬರ್‌ ಪ್ಲೇಟ್‌ ದರವೆಷ್ಟು..? ನಂಬರ್‌ ಪ್ಲೇಟ್‌ ಬದಲಿಸದೇ ಇದ್ದರೆ ಏನಾಗುತ್ತದೆ?

ಬೆಂಗಳೂರು, ಫೆಬ್ರವರಿ 12: ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು (HSRP) ಅಳವಡಿಸಲು ನೀಡಿರುವ ಡೆಡ್‌ಲೈನ್‌ಗೆ ಇನ್ನೇನು ಐದು ದಿನಗಳಷ್ಟೇ ಬಾಕಿ ಇದ್ದು, ಇನ್ನೂ ಒಂದು ಕೋಟಿಗೂ ಅಧಿಕ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕಿದೆ. ಹೀಗಾಗಿ ಮತ್ತೊಂದು ಬಾರಿ ಡೆಡ್‌ಲೈನ್‌ವಿಸ್ತರಿಸುವಂತೆ ವಾಹನ ಸವಾರರು ಸಾರಿಗೆ ಇಲಾಖೆಗೆ ಮನವಿ ಮಾಡುತ್ತಿದ್ದಾರೆ.

2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಕಡ್ಡಾಯ ಮಾಡಿರುವ ಸಾರಿಗೆ ಇಲಾಖೆ, ಈ ಹಿಂದೆ ವಾಹನ ಸವಾರರಿಗೆ ನಂಬರ್‌ ಪ್ಲೇಟ್‌ ಬದಲಿಸಲು 2023ರ ನವೆಂಬರ್ 17ರವರೆಗೆ ಕಾಲಾವಕಾಶ ನೀಡಿತ್ತು. ಆದರೆ ಇದಕ್ಕೆ ಜನ ಸರಿಯಾಗಿ ಸ್ಪಂದಿಸದ ಕಾರಣ ಹಳೆ ಫಲಕ ಬದಲಿಸಲು ಫೆಬ್ರವರಿ 17ರವರೆಗೆ ಗಡುವು ವಿಸ್ತರಿಸಿತ್ತು. ಇನ್ನೇನು ಈ ಡೆಡ್‌ ಲೈನ್‌ ಕೂಡ ಅಂತಿಮ ಹಂತಕ್ಕೆ ಬರುತ್ತಿದ್ದು, ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ.

What Is The Cost Of HSRP Number Plate

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕೂ ಮುನ್ನ ನೋಂದಣಿಯಾಗಿರುವ ವಾಹನಗಳ ಸಂಖ್ಯೆ ಸುಮಾರು 2 ಕೋಟಿಯಷ್ಟಿದ್ದು, ಗಡುವು ವಿಸ್ತರಿಸಿದರೂ ಈವರೆಗೆ ಸುಮಾರು 12 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ. ಇನ್ನೂ 1.88 ಕೋಟಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸುವುದು ಬಾಕಿ ಇದೆ. ಈ ಬಗ್ಗೆ ಸಾರಿಗೆ ಇಲಾಖೆ ಪದೇ ಪದೇ ವಾಹನ ಸವಾರರನ್ನು ಎಚ್ಚರಿಸುತ್ತಿದ್ದು, ಒಂದು ವೇಳೆ ನಂಬರ್‌ ಪ್ಲೇಟ್‌ ಬದಲಿಸದೇ ಇದ್ದರೆ ಭಾರೀ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.

HSRP ನಂಬರ್‌ ಪ್ಲೇಟ್‌ ಶುಲ್ಕ ಎಷ್ಟು?

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಲು ದ್ವಿಚಕ್ರ ವಾಹನಗಳಿಗೆ ನಂಬರ್‌ ಪ್ಲೇಟ್‌ ದರ 400 ರೂನಿಂದ 600 ರೂ ವರೆಗೆ ಇದೆ. ಅದೇ ರೀತಿ ನಾಲ್ಕು ಚಕ್ರದ ವಾಹನಗಳಿಗೆ ಜೋಡಿ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಶುಲ್ಕವು 650 ರೂಪಾಯಿನಿಂದ 800 ರೂಪಾಯಿ ವರೆಗೂ ಆಗಿರುತ್ತದೆ ಎನ್ನಲಾಗಿದೆ. ಇನ್ನು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಆನ್‌ಲೈನ್‌ ಮೂಲಕ ಬುಕ್ ಮಾಡಬಹುದಾಗಿದೆ. ವಾಹನ ಮಾಲೀಕರು ಅಧಿಕೃತ www.siam.in ವೆಬ್‌ಸೈಟ್‌ಗೆ ಭೇಟಿ ನೀಡಿ, ಅಲ್ಲಿ ಬುಕ್‌ ಎಚ್‌ಎಸ್‌ಆರ್‌ಪಿ (BOOK HSRP) ಆಯ್ಕೆ ಕ್ಲಿಕ್ ಮಾಡಿ ವಿವರಗಳನ್ನು ದಾಖಲಿಸಿ ನಂಬರ್‌ ಪ್ಲೇಟ್‌ ಪಡೆಯಬಹುದಾಗಿದೆ.

ಎಚ್‌ಎಸ್‌ಆರ್‌ಪಿ ಅಳವಡಿಲು ಅನುಸರಿಸಬೇಕಾದ ಕ್ರಮವೇನು?

https://transport.karnataka.gov.in ಅಥವಾ www.siam.in ವೆಬ್‌ ಸೈಟ್‌ಗೆ ಭೇಟಿ ನೀಡಿ Book HSRP & ಕ್ಲಿಕ್ ಮಾಡಿ.

• ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.

• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.

• HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲ‌ರ್ ಸ್ಥಳವನ್ನು ಆಯ್ಕೆಮಾಡಿ.

• HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.

• ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.

• ನಿಮ್ಮ ಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.

• ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

• ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+