ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂದಿನ ನಡೆ ಏನು?

|
Google Oneindia Kannada News

Recommended Video

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂದಿನ ನಡೆ ಏನು? | Oneindia Kannada

ಬೆಂಗಳೂರು, ಜನವರಿ 18 : ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದೆ. ನಿರೀಕ್ಷೆಯಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದರು.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಶಾಸಕಾಂಗ ಪಕ್ಷದ ಸಭೆಗೆ ನಾಲ್ವರು ಶಾಸಕರು ಗೈರು ಹಾಜರಾಗಿದ್ದರು. ನಾಲ್ವರಲ್ಲಿ ರಮೇಶ್ ಜಾರಕಿಹೊಳಿ ಅವರೂ ಸಹ ಒಬ್ಬರು.

ಲಫಂಗ ರಾಜಕಾರಣ ಎನ್ನುವ ಸಿದ್ದು ಗೈರಾದವರ ವಿರುದ್ಧ ಏನು ಕ್ರಮ ಜರುಗಿಸುತ್ತಾರೆ?ಲಫಂಗ ರಾಜಕಾರಣ ಎನ್ನುವ ಸಿದ್ದು ಗೈರಾದವರ ವಿರುದ್ಧ ಏನು ಕ್ರಮ ಜರುಗಿಸುತ್ತಾರೆ?

ಕಾಂಗ್ರೆಸ್‌ನ 80 ಶಾಸಕರ ಪೈಕಿ 76 ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದರು. 'ಗೈರಾದ ಶಾಸಕರಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ. ಅವರಿಂದ ವಿವರಣೆ ಪಡೆಯಲಾಗುತ್ತದೆ' ಎಂದು ಸಭೆಯ ಬಳಿಕ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ, ಶಾಸಕರು ರೆಸಾರ್ಟ್‌ಗೆಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ, ಶಾಸಕರು ರೆಸಾರ್ಟ್‌ಗೆ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯರು ಶಾಸಕಾಂಗ ಪಕ್ಷದ ಸಭೆಯಲ್ಲಿ ಉಪಸ್ಥಿತರಿದ್ದರು. ಗೈರಾದ ಶಾಸಕರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ......

ಸಿದ್ದರಾಮಯ್ಯ ಕೈಗೂ ಸಿಕ್ಕಿಲ್ಲ ರಮೇಶ್ ಜಾರಕಿಹೊಳಿ!ಸಿದ್ದರಾಮಯ್ಯ ಕೈಗೂ ಸಿಕ್ಕಿಲ್ಲ ರಮೇಶ್ ಜಾರಕಿಹೊಳಿ!

ಯಾರು-ಯಾರು ಸಭೆಗೆ ಬಂದಿಲ್ಲ

ಯಾರು-ಯಾರು ಸಭೆಗೆ ಬಂದಿಲ್ಲ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಚಿಂಚೋಳಿ ಶಾಸಕ ಉಮೇಶ್ ಜಾಧವ್, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕಮಟಳ್ಳಿ ಗೈರಾಗಿದ್ದರು.

ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, 'ಬಿ.ನಾಗೇಂದ್ರ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ಮಾಹಿತಿ ನೀಡಿದ್ದರು. ಉಮೇಶ್ ಜಾಧವ್ ನನಗೆ ಪತ್ರ ಬರೆದಿದ್ದರು. ಇನ್ನಿಬ್ಬರು ಶಾಸಕರು ಯಾವುದೇ ಮಾಹಿತಿ ನೀಡಿಲ್ಲ' ಎಂದು ಹೇಳಿದರು.

ಮುಂಬೈನಲ್ಲಿದ್ದಾರೆ ಶಾಸಕರು

ಮುಂಬೈನಲ್ಲಿದ್ದಾರೆ ಶಾಸಕರು

ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕಮಟಳ್ಳಿ ಅವರು ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದು, ಇಬ್ಬರು ಮುಂಬೈ ಹೋಟೆಲ್‌ನಲ್ಲಿದ್ದಾರೆ. ಇನ್ನೂ ಕೆಲವು ಅತೃಪ್ತ ಶಾಸಕರು ಕೊನೆ ಕ್ಷಣದಲ್ಲಿ ಕೈ ಕೊಟ್ಟಿದ್ದರಿಂದ ರಮೇಶ್ ಜಾರಕಿಹೊಳಿ ಅವರು ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ

ರಮೇಶ್ ಜಾರಕಿಹೊಳಿ ರಾಜೀನಾಮೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಶನಿವಾರ ಅವರು ಸ್ಪೀಕರ್ ಭೇಟಿಯಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿಗೆ ಬಂದರೆ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆಯೇ? ಎಂಬುದನ್ನು ಕಾದು ನೋಡಬೇಕಿದೆ.

ಅಥಣಿ ಶಾಸಕ ಮಹೇಶ್ ಕಮಟಳ್ಳಿ

ಅಥಣಿ ಶಾಸಕ ಮಹೇಶ್ ಕಮಟಳ್ಳಿ

ರಮೇಶ್ ಜಾರಕಿಹೊಳಿ ಅವರ ಜೊತೆ ಇದ್ದ ಅಥಣಿ ಶಾಸಕ ಮಹೇಶ್ ಕಮಟಳ್ಳಿ ಅವರ ಸ್ಥಿತಿ ಅತಂತ್ರವಾಗಿದೆ. ಅವರು ಏನು ಮಾಡಲಿದ್ದಾರೆ? ಎಂದು ಕಾದು ನೋಡಬೇಕಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಅಥಣಿ ಕ್ಷೇತ್ರದಲ್ಲಿ 82,094 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಪ್ರಜಾಪ್ರಭುತ್ವದ ಮೇಲೆ ನಡೆಸಿರುವ ದಾಳಿ

ಆಪರೇಷನ್ ಕಮಲದಲ್ಲಿ ರಾಜ್ಯದ ನಾಯಕರು ಮಾತ್ರವಲ್ಲ, ಪ್ರಧಾನಿ, ಅಮಿತ್ ಶಾ ಮತ್ತು ಕೇಂದ್ರ ಸಚಿವರು ಭಾಗಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ

English summary
Gokak MLA Ramesh Jarakiholi and Athani MLA Mahesh Kumathalli skipped the Congress legislative party meeting. What is the next step of the MLA's.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X