ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಕಾರಣವೇನು? ಕೆಎಸ್ ಈಶ್ವರಪ್ಪ ಕೊಟ್ಟ ಉತ್ತರವಿದು

ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ಈ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಕ್ಕೆ ಕೆಲವೇ ಗಂಟೆಗಳು ಬಾಕಿ ಇವೆ. ಅದಾಗಲೇ ಹಲವೆಡೆ ಬಿಜೆಪಿ ಮುನ್ನಡೆ ಸಾಧಿಸಿದ್ದು ನಾಯಕರ ಮುಖದಲ್ಲಿ ಮಂದಹಾಸ ಮೂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಸಂತೋಷದೊಂದಿಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ನೋಡಿದ ಮೇಲೆ ನಮ್ಮ ದೇಶಕ್ಕೆ ಭವಿಷ್ಯ ಇದೆ ಅನ್ನಿಸಿದೆ. ಆದ್ರೆ ಕರ್ನಾಟಕದ ಮತದಾರರ ವಿಚಾರದಲ್ಲಿ ನಾವು ಮಾಡಿಕೊಂಡ ಮುಟ್ಟಾಳತನದಿಂದ ಅಧಿಕಾರ ಕಳೆದುಕೊಳ್ಳಬೇಕಾಯಿತು. ರಾಜ್ಯದಲ್ಲಿಯೂ ಬಿಜೆಪಿ ಒಟ್ಟಾಗಿ ಹೋಗಿದ್ದರೆ ಅಧಿಕಾರ ಕಳೆದುಕೊಳ್ಳುತ್ತಿರಲಿಲ್ಲ ಎಂದು ಅವಲೋಕನ ಮಾಡಿಕೊಂಡಿದ್ದಾರೆ.

What is the reason for BJPs defeat in Karnataka - KS Eshwarappa answer

ರಾಜ್ಯದಲ್ಲಿ ಬಿಜೆಪಿ ಒಟ್ಟಾಗಿ ಹೋಗದೇ ಇದ್ದದ್ದು, ನಮ್ಮ ನೇತೃತ್ದದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾದೆವು. ಈ ನಡುವೆ ಕಾಂಗ್ರೆಸ್ ಬಡವರಿಗೆ ಕೊಟ್ಟ ಗ್ಯಾರಂಟಿಗಳನ್ನ ಅರ್ಥಮಾಡಿಕೊಳ್ಳುವಲ್ಲಿ ವಿಫಲರಾದೆವು. ಇದೆಲ್ಲವೂ ಬಿಜೆಪಿ ಸೋಲಿಗೆ ಕಾರವಾಯಿತು ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಂತೆ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣದಲ್ಲೂ ಕಾಂಗ್ರೆಸ್ ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬರಲು ಯೋಚಿಸುತ್ತಿತ್ತು. ಆದರೆ ಅದು ವಿಫಲವಾಗಿದೆ. ಬಿಜೆಪಿ ಇಂದೇ ಪಾಠ ಕಲಿಯಬೇಕು. ಮುಂಬರುವ ಚುನಾವಣೆಯಲ್ಲಿ ಗೆಲ್ಲಲು ಎಲ್ಲರೂ ಒಟ್ಟಾಗಿ ಹೋಗಬೇಕಾಗಿದೆ. ಕಾರ್ಯಕರ್ತರುನಮ್ಮ ತಪ್ಪುಗಳಿಮದ ನೊಂದಿದ್ದಾರೆ ಅವರನ್ನು ವಿಶ್ವಾಸಕ್ಕೆ ತೆಗೆದುಕೊಮಡು ಹೋಗಬೇಕಾಗಿದೆ ಎಂದು ಅವರು ಹೇಳಿದರು.

ಇದೇ ವೇಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಬಗ್ಗೆ ಮಾತನಾಡಿದ ಅವರು, 'ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸ್ವರ್ಗದಲ್ಲಿದ್ದಾರೆ. ಅವರನ್ನು ಯಾರೂ ಕೆಳಗಿಳಿಸಲು ಸಾಧ್ಯವಿಲ್ಲ ಎನ್ನುವ ಭ್ರಮೆಯಲ್ಲಿದ್ದಾರೆ. ಅದೂ ಅಲ್ಲದೇ ಕಾಮಗ್ರೆಸ್‌ನಲ್ಲಿ ಪ್ರತಿದಿನವೂ ಒಬ್ಬೊಬ್ಬರೂ ಸಿಎಂ ಆಗುತ್ತಾರೆ. ಇದು ಮುಂದೆ ನಡೆಯೋದಿಲ್ಲ. ಬಿಜೆಪಿ ಇದೆಲ್ಲವೂ ಸೂಕ್ಷ್ಮಿವಾಗಿ ಅವಲೋಕಿಸುತ್ತಿದೆ' ಎಂದು ಅವರು ವಾಗ್ದಾಳಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+