ಬರ ಪರಿಹಾರ ಬಿಡುಗಡೆಗೆ ಕೇಂದ್ರದ ವಿಳಂಬಕ್ಕೆ ಕಾರಣವೇನು?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ನವೆಂಬರ್‌ 28: ಕೇಂದ್ರದಿಂದ ಬರಪರಿಹಾರ ಬಿಡುಗಡೆಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಉತ್ತರಿಸಿ, ರಾಜ್ಯದಿಂದ ಪಡೆದ ಹಣವನ್ನೇ ಕೇಂದ್ರ ಸರ್ಕಾರ ಪರಿಹಾರವಾಗಿ ನೀಡುತ್ತದೆ. ಈ ಪರಿಹಾರವನ್ನು ನೀಡಲು ಕೇಂದ್ರ ವಿಳಂಬನೀತಿ ತೋರುತ್ತಿದೆ. ಈ ವಿಳಂಬಕ್ಕೆ ಕಾರಣವೇನು ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕರ್ನಾಟಕದಿಂದ ಸುಮಾರು 4 ಲಕ್ಷ ಕೋಟಿ ತೆರಿಗೆ ಹಣ ಕೇಂದ್ರಕ್ಕೆ ತಲುಪಿದರೂ, ರಾಜ್ಯಕ್ಕೆ ಪರಿಹಾರವಾಗಿ ಕೇವಲ 50 ರಿಂದ 60 ಸಾವಿರ ಕೋಟಿ ಬರುತ್ತದೆ ಎಂದರು.ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲವೆಂಬುದನ್ನು ಅವರು ಸಾಬೀತುಪಡಿಸಲಿ. ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರನ್ನೂ ತಲುಪುತ್ತಿಲ್ಲ ಎಂಬ ಪ್ರತಿಪಕ್ಷ ನಾಯಕ ಆರ್ .ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೇವಲ ಆರೋಪ ಮಾಡುವ ಉದ್ದೇಶದಿಂದ ಆರೋಪಿಸುತ್ತಿದ್ದಾರೆ.

What Is The Reason For Centres Delay In Releasing Drought Relief? Siddaramaiah Questions

ಇದುವರೆಗೆ 1.17 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದೆ. ಇದರಲ್ಲಿ 1.14 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿದ್ದು, ಇನ್ನೂ 3 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿಸಲಾಗುವುದು. ಡಿಸೆಂಬರ್ ಅಂತ್ಯದೊಳಗೆ ಗೃಹಲಕ್ಷ್ಮಿ ನೋಂದಾಯಿಸಿಕೊಂಡಿರುವವರಿಗೆ ಆಗಿರುವ ತಾಂತ್ರಿಕ ಸಮಸ್ಯೆಗಳನ್ನು ನೀಗಿಸಿ, ಹಣ ಒದಗಿಸಲು ಸೂಚನೆ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 4.34 ಕೋಟಿ ಜನರಿಗೆ ಪ್ರತಿ ಮಾಹೆ 170 ರೂ. ನೀಡಲಾಗುತ್ತಿದೆ. ಇದುವರೆಗೆ 1.50 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡುತ್ತಿರುವುದು ಸುಳ್ಳು ಎಂದು ಬಿಜೆಪಿಯವರು ಸಾಬೀತುಪಡಿಸಲಿ ಎಂದರು.

ಕ್ಯಾನ್ಸರ್, ಕಿಡ್ನಿ, ಹೃದಯ ಸೇರಿದಂತೆ ಆರೋಗ್ಯ ಸಮಸ್ಯೆಯಿಂದ ವೈದ್ಯಕೀಯ ವೆಚ್ಚ ಭರಿಸುವ ಮನವಿಗಳು ಹೆಚ್ಚು ಸ್ವೀಕೃತವಾಗಿವೆ. ನಾನು ಮುಖ್ಯಮಂತ್ರಿಯಾದ ನಂತರ ಜನರ ಆರೋಗ್ಯಸಮಸ್ಯೆಗಳ ಪರಿಹಾರಕ್ಕಾಗಿ ಸುಮಾರು 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತದೆ ಎಂಬ ನಂಬಿಕೆಯಿಂದ ಜನರು ಸರ್ಕಾರಿ ಆಸ್ಪತ್ರೆ ಬಿಟ್ಟು, ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುವ ಕಾರಣ, ಅವರ ವೈದ್ಯಕೀಯ ವೆಚ್ಚಗಳೂ ಹೆಚ್ಚಾಗುತ್ತವೆ. ಆ ವೆಚ್ಚದಲ್ಲಿ ಸಣ್ಣಪ್ರಮಾಣವನ್ನು ಸರ್ಕಾರ ಈ ರೀತಿ ಭರಿಸಲು ಪ್ರಯತ್ನಿಸುತ್ತದೆ ಎಂದರು.

ಇಂದಿನ ಜನಸ್ಪಂದನಕ್ಕೆ ಉದ್ಯೋಗ ಬೇಡಿಕೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿದ್ದು, ಸಾಧ್ಯವಾದ ಕಡೆಗಳಲ್ಲಿ ಉದ್ಯೋಗ ಹಾಗೂ ಮಾಸಾಶನ ಒದಗಿಸಲು ಸೂಚನೆ ನೀಡಲಾಗಿದೆ. ಜಿಲ್ಲಾ ಮಂತ್ರಿಗಳು, ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಜನರ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಲಾಗಿದೆ. ಮೂರು ತಿಂಗಳ ನಂತರ ಮತ್ತೊಮ್ಮೆ ಜನಸ್ಪಂದನ ನಡೆಸಲಾಗುವುದು. ಆಗ ಈ ಪ್ರಮಾಣದಲ್ಲಿ ಜನರು ತಮ್ಮ ಸಮಸ್ಯೆಗಳೊಂದಿಗೆ ಬರದಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ನೋಡಿಕೊಳ್ಳಬೇಕು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+