Malur: 30 ತಿಂಗಳ ಬಳಿಕ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರುಮತ ಎಣಿಕೆ! ಕಾರಣವೇನು?
ಬೆಂಗಳೂರು, ನವೆಂಬರ್ 11: ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರ ಒಳಗೊಂಡು 2023ರ ಮೇ ತಿಂಗಳಲ್ಲಿ ಚುನಾವಣೆ ನಡೆದಿತ್ತು. ಆದರೆ ಈ ಮಾಲೂರು ಕ್ಷೇತ್ರದಲ್ಲಿ ಮತ ಎಣಿಕೆಯಲ್ಲಿನ ಒಂದಷ್ಟು ಗೊಂದಲಗಳು ಉಂಟಾಗಿದೆ. ಪಾರದರ್ಶಕವಾಗಿ ನಡೆದಿಲ್ಲ ಎಂಬ ಆರೋಪ ಕೇಳಿ ಬಂತು. ಈ ವಿಚಾರ ಸುಪ್ರೀಂ ಕೋರ್ಟ್ ಅಂಗಳ ತಲುಪಿತು. ಕೋರ್ಟ್ ಆದೇಶ ಮೇರೆಗೆ ಇಂದು ನವೆಂಬರ್ 11ರಂದು (ಕ್ಷೇತ್ರದಲ್ಲಿ) ಮರು ಮತಎಣಿಕೆ ನಡೆಯುತ್ತಿದೆ.
ಮಾಲೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ, ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಮತ್ತು ಪಕ್ಷೇತರ ಅಭ್ಯರ್ಥಿ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಅಂದು ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಅವರು ವಿಜಯ ಸಾಧಿಸಿದರು. ಕೇವಲ 248 ಮತಗಳ ಅಂತರದಿಂದ ಗೆದ್ದು ಬೀಗಿದ್ದರು. ಇಷ್ಟು ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದಕ್ಕೆ ಪರಾಜಿತ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಅವರು ಅನುಮಾನ ವ್ಯಕ್ತಪಡಿಸಿದರು. ಪಾರದರ್ಶಕವಾಗಿ ಮತ ಎಣಿಕೆ ನಡೆದಿಲ್ಲ ಎಂದು ಮೊದಲು ಹೈಕೋರ್ಟ್ ಮೆಟ್ಟಿಲೇರಿದ್ದರು.

ಮತ ಎಣಿಕೆ ಮೇಲೆ ಅನುಮಾನ, ಕೋರ್ಟ್ ಮೊರೆ
2023ರಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಬಿರುಸಿನ ಪ್ರಚಾರ ನಡೆದಿತ್ತು. ತ್ರಿಕೋನ ಸ್ಫರ್ಧೆ ಏರ್ಪಟ್ಟಿತ್ತು. ಇದರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪ್ರಬಲ ನಾಯಕರು ಜಿದ್ದಾ ಜಿದ್ದಿಗೆ ಬಿದ್ದಿದ್ದರು. ಕೊನೆಗೆ ಕಾಂಗ್ರೆಸ್ ನಂಜೇಗೌಡ ಅವರು ಗೆದ್ದು ಬೀಗಿದರು. ಅವರಿಗೆ ಕಡಿಮೆ ಮತಗಳ ಅಂತರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಐದು ಮತಗಟ್ಟೆಗಳಲ್ಲಿ ವಿವಿ ಪ್ಯಾಟ್ಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಿ ಎಣಿಕೆ ಮಾಡಲಾಗಿದೆ ಎಂದಿದ್ದರು. ಪಾರದರ್ಶಕವಾಗಿ ನಡೆದಿಲ್ಲ ಎಂದಿದ್ದರು. ಇದೆಲ್ಲ ಅಂಶ ಉಲ್ಲೇಖಿಸಿ ನ್ಯಾಯಾಲಯ ಮೆಟ್ಟಿಲೇರಿದ್ದರು.
ಮೊದಲಿಗೆ ಹೈಕೋರ್ಟ್ನಲ್ಲಿ ವಿಚಾರಣೆ ನಡೆದಿತ್ತು. ಮಾಲೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಹೈಕೋರ್ಟ್ ಕೇಳಿತ್ತು. 2024 ಆಗಸ್ಟ್ 13ರಂದು ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳ ಮಧ್ಯಸ್ತಿಕೆಯಲ್ಲಿ ಇವಿಎಂ ಉಗ್ರಾಣದ ಬಾಗಿಲು ತೆರೆದು ದಾಖಲೆಗಳನ್ನು ತೆಗೆದುಕೊಳ್ಳಲಾಯಿತು. ಮತ ಎಣಿಕೆ ದಿನದ ದಾಖಲೆಗಳು ಸಿಕ್ಕಿವೆ ವಿನಃ ಅಂದಿನ ವಿಡಿಯೋ ಹಾಗೂ ಇತರ ದಾಖಲೆಗಳು ಸಿಕ್ಕಿಲ್ಲ ಎನ್ನಲಾಗಿದೆ.
ಮರು ಮತಎಣಿಕೆಗೆ ಸುಪ್ರೀಂ ಆದೇಶ
ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ನಂಜೇಗೌಡರ ಗೆಲುವನ್ನು ಅಸಿಂಧು ಗೊಳಿಸಿತು. ಮರು ಮತ ಎಣಿಕೆಗೆ ಆದೇಶ ಹೊರಡಿಸಿತು. ಆಗ ನಂಜೇಗೌಡ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದರು. ಹೈಕೋರ್ಟ್ ಅಸಿಂಧು ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್ ಮರು ಮತ ಎಣಿಕೆಗೆ ಗ್ರೀನ್ ಸಿಗ್ನಲ್ ನೀಡಿತು. ಈ ಸುಪ್ರಿಂ ಕೋರ್ಟ್ ಆದೇಶದನ್ವಯ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಮಾಲೂರು ಮರು ಮತದಾನ ಎಣಿಕೆಗೆ ಚುನಾವಣಾಧಿಕಾರಿಗಳು ಆದ ಕೋಲಾರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದರು.
ಕೋರ್ಟ್ ಆದೇಶದಂತೆ ಇಂದು ನವೆಂಬರ್ 11ರಂದು ಮಾಲೂರಿನಲ್ಲಿ ಮರು ಮತದಾನ ನಡೆಯುತ್ತಿದೆ. ರಾಜಕೀಯ ಪಕ್ಷಗಳ ಗಮನ ಇಂದಿನ ಫಲಿತಾಂಶದತ್ತ ನೆಟ್ಟಿದೆ. ಮಧ್ಯಾಹ್ನದ ಹೊತ್ತಿಗೆ ವಿಜೇತರ ಸುದ್ದಿ ಪ್ರಕಟಗೊಳ್ಳಲಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications