ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಜೆಟ್‌: ಶಿಕ್ಷಣ ಕ್ಷೇತ್ರಕ್ಕೆ ಏನು ದೊರೆತಿದೆ

By Nayana
|
Google Oneindia Kannada News

ಬೆಂಗಳೂರು, ಜು.4: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್‌ ಗುರುವಾರ ಮಂಡನೆಯಾಗಿದೆ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಂಡಿಸಿದ್ದಾರೆ. ರಾಜ್ಯದ ಜನತೆಗೆ ಸಾಲ ಮನ್ನಾ ಮತ್ತು ಶಿಕ್ಷಣಕ್ಕೆ ಬಜೆಟ್‌ ಏನು ನೀಡುತ್ತದೆ ಎನ್ನುವ ಕುತೂಹಲವಿತ್ತು. ಅದಕ್ಕೀಗ ತೆರೆ ಬಿದ್ದಿದೆ.

ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಮತ್ತು ದಾಖಲಾತಿ ಕಡಿಮೆ ಇರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ ಶಾಲೆಯೊಂದಿಗೆ ವಿಲೀನಗೊಳಿಸಲಾಗುತ್ತದೆ. ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಡಿಮೆ ದಾಖಲಾತಿ ಇರುವ 28,847 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಗುರುತಿಸಿದ್ದು, ಹತ್ತಿರದ 8530 ಸರ್ಕಾರಿ ಶಾಲೆಗಳೊಂದಿಗೆ ವಿಲೀನಗೊಳಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ.

ಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಬಜೆಟ್ Highlightsಕರ್ನಾಟಕ ಬಜೆಟ್ 2018 : ಕುಮಾರಸ್ವಾಮಿ ಬಜೆಟ್ Highlights

ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಆಯ್ದ 4100 ಸರ್ಕಾರಿ ಪ್ರಾಥಮಿಕ ಶಾಲೆಗಳ ಆವರಣದಲ್ಲಿ ಸ್ಥಳಾಂತರಿಸಿ ಬಾಲಸ್ನೇಹಿ ಕೇಂದ್ರಗಳನ್ನಾಗಿ ಬಲವಧಿಸಲಾಗುತ್ತದೆ. ಹಂತ ಹಂತವಾಗಿ ಬೇರೆ ಸರ್ಕಾರಿ ಶಾಲೆಗಳಲ್ಲಿ ಕೂಡ ಎಲ್‌ಕೆಜಿ, ಯುಕೆಜಿಯನ್ನು ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ ಬಜೆಟ್‌ ನೀಡಿದ್ದೇನು

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ ಬಜೆಟ್‌ ನೀಡಿದ್ದೇನು

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಕಟ್ಟಗಳ ದುರಸ್ತಿಗೆ 150 ಕೋಟಿ ರೂ. ನೀಡಿದೆ. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರದ ಮೂಲಭೂತ ಸೌಕರ್ಯಕ್ಕೆ 5 ಕೋಟಿ ಮೀಸಲಿಟ್ಟಿದೆ.

ಕನ್ನಡ ಮಾಧ್ಯಮಗಳ ಜತೆಗೆ ಇಂಗ್ಲಿಷ್‌ ಮಾಧ್ಯಮ ಆರಂಭ

ಕನ್ನಡ ಮಾಧ್ಯಮಗಳ ಜತೆಗೆ ಇಂಗ್ಲಿಷ್‌ ಮಾಧ್ಯಮ ಆರಂಭ

ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜೊತೆಗೆ ಇಂಗ್ಲಿಷ್‌ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗುತ್ತದೆ. ಸಾವಿರ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುತ್ತದೆ.

ಕರ್ನಾಟಕ ಬಜೆಟ್‌: ರಾಜ್ಯದ 28 ಸಾವಿರ ಸರ್ಕಾರಿ ಶಾಲೆಗಳು ವಿಲೀನ ಕರ್ನಾಟಕ ಬಜೆಟ್‌: ರಾಜ್ಯದ 28 ಸಾವಿರ ಸರ್ಕಾರಿ ಶಾಲೆಗಳು ವಿಲೀನ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು, ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು, ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್

ರಾಜ್ಯದ 48 ಸಾವಿರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಮತ್ತು ಮಕ್ಕಳ ಹಾಜರಾತಿಯ ನಿಗಾವಹಿಸಲು ಬಯೋಮೆಟ್ರಿಕ್ ಸಾಧನಗಳನ್ನು ಅಳವಡಿಸಲಾಗುತ್ತದೆ.ಮುಂದಿನ ಮೂರು ವರ್ಷಗಳಲ್ಲಿ ಜಾರಿಗೊಳಿಸಲಾಗುತ್ತದೆ.ಇದಕ್ಕೆ 5 ಕೋಟಿ ರೂ. ಮೀಸಲಿಡಲಾಗಿದೆ.

ಅಂಗನವಾಡಿಗಳಿನ್ನು ಬಾಲಸ್ನೇಹ ಕೇಂದ್ರ

ಅಂಗನವಾಡಿಗಳಿನ್ನು ಬಾಲಸ್ನೇಹ ಕೇಂದ್ರ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಆಯ್ದ 4100 ಸರ್ಕಾರಿ ಪ್ರಾಥಮಿಕ ಕೇಂದ್ರಗಳನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸ್ಥಳಾಂತರಿಸಲು ಬಾಲಸ್ನೇಹಿ ಕೇಂದ್ರಗಳನ್ನಾಗಿ ಬಲವರ್ದಿಸಲಾಗುತ್ತದೆ.

ಸರ್ಕಾರಿ ಶಾಲೆಗಳ ವಿಲೀನ

ಸರ್ಕಾರಿ ಶಾಲೆಗಳ ವಿಲೀನ

ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಮತ್ತು ದಾಖಲಾತಿ ಕಡಿಮೆ ಇರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ ಶಾಲೆಯೊಂದಿಗೆ ವಿಲೀನಗೊಳಿಸಲಾಗುತ್ತದೆ. ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಡಿಮೆ ದಾಖಲಾತಿ ಇರುವ 28,847 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ಗುರುತಿಸಿದ್ದು, ಹತ್ತಿರದ 8,530 ಸರ್ಕಾರಿ ಶಾಲೆಗಳೊಂದಿಗೆ ವಿಲೀನಗೊಳಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ.

ಉನ್ನತ ಶಿಕ್ಷಣಕ್ಕೆ ಬಜೆಟ್‌ ಕೊಟ್ಟಿದ್ದೇನು?

ಉನ್ನತ ಶಿಕ್ಷಣಕ್ಕೆ ಬಜೆಟ್‌ ಕೊಟ್ಟಿದ್ದೇನು?

ರಾಜ್ಯದ ಸರ್ಕಾರಿ ಪದವಿ, ಸ್ನಾತಕೋತ್ತರ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 250 ಕೋಟಿ ರೂ. ಮೀಸಲಿಡಲಾಗಿದೆ.ಪ್ರಾಥಮಿಕ ಶಾಲಾ ಹಂತದಲ್ಲೇ ಕ್ರೀಡೆಯನ್ನು ಪಠ್ಯಕ್ಕೆ ಸೇರಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ ಕ್ರೀಡೆ ಮತ್ತು ಅಂಗ ಸಾಧನೆಗೆ ಬೇಕಾದ ಉಪಕರಣಗಳಿಗಾಗಿ 3 ಕೋಟಿ ಮೀಸಲು

English summary
Chief minister Kumaraswamy decided to merge government and aided schools has less students. And he also proposed some new universities across the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X