ಬಜೆಟ್ 2021; ಕರ್ನಾಟಕದ ಸಂಸದೆ ರಾಜ್ಯಕ್ಕೆ ಕೊಟ್ಟಿದ್ದೇನು?
ಬೆಂಗಳೂರು, ಫೆಬ್ರವರಿ 01; ರಾಜ್ಯಸಭಾ ಸದಸ್ಯೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ಮಂಡನೆ ಮಾಡಿದ್ದಾರೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಮಂಡನೆ ಮಾಡಿದ ಬಜೆಟ್ ಬಗ್ಗೆ ಹಲವಾರು ನಿರೀಕ್ಷೆಗಳಿತ್ತು. ಕೆಲವು ಕ್ಷೇತ್ರಗಳಿಗೆ ಹೊಸ ಘೋಷಣೆಗಳನ್ನು ಮಾಡಲಾಗಿದೆ.
Recommended Video
ನಿರ್ಮಲಾ ಸೀತಾರಾಮನ್ ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋದವರು. ಸಹಜವಾಗಿಯೇ ಕರ್ನಾಟಕ ಜನರ ನಿರೀಕ್ಷೆ ತುಸು ಹೆಚ್ಚಿತ್ತು. ಆದರೆ, ಬಜೆಟ್ ಭಾಷಣೆ ಬಳಿಕ ರಾಜ್ಯದ ಜನರಿಗೆ ನಿರಾಸೆಯಾಗಿದೆ.
ಕೆಲವು ದಿನಗಳ ಹಿಂದೆ ಬೆಳಗಾವಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, "ಕೇಂದ್ರ ಹಾಗೂ ರಾಜ್ಯ ಸರ್ಕಾರ ಡಬಲ್ ಎಂಜಿನ್ ಇದ್ದಂತೆ" ಎಂದು ಹೇಳಿದ್ದರು. ಆದರೆ, ಬಜೆಟ್‌ನಲ್ಲಿ ರಾಜ್ಯ ನಿರೀಕ್ಷೆ ಮಾಡಿದಷ್ಟು ಸಿಕ್ಕಿದೆಯೇ?.

ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, "ಕೋವಿಡ್ ಸಂಕಷ್ಟದ ಕಾಲದಲ್ಲಿ ಪ್ರಜೆಗಳಿಗೆ ಅನುಕೂಲವಾಗುವಂತೆ ಯಾವುದೇ ಹೊಸ ತೆರಿಗೆಯನ್ನು ಹಾಕದೇ, ತೆರಿಗೆರಹಿತವಾದ ಬಜೆಟ್ ಘೋಷಿಸಿದ ಮಾನ್ಯ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳು" ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕಕ್ಕೆ ಸಿಕ್ಕಿದ್ದೇನು?; ಈ ಬಾರಿಯ ಬಜೆಟ್‌ನಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ನಿರ್ಮಾಣ ಕಾರ್ಯ ಆರಂಭಿಸುವುದಾಗಿ ಘೋಷಣೆ ಮಾಡಲಾಗಿದೆ. 278 ಕಿ. ಮೀ. ಮಾರ್ಗದ ಯೋಜನೆ ಹಿಂದೆಯೇ ಘೋಷಣೆಯಾಗಿತ್ತು. ಈ ವರ್ಷ ಕಾಮಗಾರಿ ಆರಂಭವಾಗಲಿದೆ.
ಕೇಂದ್ರ ಬಜೆಟ್‌ನಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.
— Karnataka Congress (@INCKarnataka) February 1, 2021
ಬಿಜೆಪಿಯ 25 ಸಂಸದರು,ರಾಜ್ಯದಲ್ಲೂ ಬಿಜೆಪಿ, ಕೇಂದ್ರದಲ್ಲೂ ಬಿಜೆಪಿ ಇನ್ಮುಂದೆ ಭರಪೂರ ಅಭಿವೃದ್ಧಿ ಎಂದಿದ್ದ
ಡಬಲ್ ಇಂಜಿನ್ ಸರ್ಕಾರಗಳಿಂದ ರಾಜ್ಯಕ್ಕೆ ಡಬಲ್ ದೊಖಾ ಆಗಿದೆ.
ಫಸ್ಟ್ ಇಂಜಿನ್ಗೂ ಸಕೆಂಡ್ ಇಂಜಿನ್ಗೂ ಲಿಂಕ್ ತಪ್ಪಿ ಹೋಗಿದೆಯೇ @BJP4Karnataka?
ಬೆಂಗಳೂರು ನಗರದಲ್ಲಿ ಸಂಚಾರ ಸಮಸ್ಯೆ ಬಗೆಹರಿಸಲು ನಮ್ಮ ಮೆಟ್ರೋ ಯೋಜನೆ ಜಾರಿಗೊಳಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ 2ಎ ಮತ್ತು 2ಬಿ ವಿಸ್ತರಣೆಗೆ ಬಜೆಟ್‌ನಲ್ಲಿ 58.19 ಕಿ.ಮೀ ಗೆ ರೂ. 14,788 ಕೋಟಿ ಅನುದಾನವನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕದ ಹಲವು ರೈಲು ಯೋಜನೆಗಳು ಕುಟುಂತ್ತಾ ಸಾಗಿವೆ. ಆದರೆ, ಅದಕ್ಕೆ ಅನುದಾನ ಬಿಡುಗಡೆಯಾಗಿಲ್ಲ. ರಾಜ್ಯಕ್ಕೆ ಯಾವುದೇ ಹೊಸ ರೈಲು ಯೋಜನೆ ಘೋಷಣೆ ಮಾಡಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಇದೆ, ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ.
ಚುನಾವಣೆ ನಡೆಯುವ ರಾಜ್ಯ; ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ರಸ್ತೆ ಸೇರಿದಂತೆ ಹಲವು ಕೊಡುಗೆಗಳನ್ನು ನೀಡಲಾಗಿದೆ. ಈ ಎಲ್ಲಾ ರಾಜ್ಯಗಳಿಗೆ ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೊಡುಗೆ ನೀಡಲಾಗಿದೆ ಎಂಬ ಚರ್ಚೆ ಜೋರಾಗಿದೆ.
ಜಿಎಸ್‌ಟಿ ಪಾಲು; ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೆ ಬಂದ ಬಳಿಕ ರಾಜ್ಯಗಳಿಗೆ ಜಿಎಸ್‌ಟಿಪಾಲನ್ನು ನೀಡಲಾಗುತ್ತದೆ.
ಸೆಪ್ಟೆಂಬರ್ 2, 2020ರಂದು ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು, "ಜಿಎಸ್‌ಟಿ ಪರಿಹಾರದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೀಡಿದ ಎರಡು ಆಯ್ಕೆಗಳ ಮೌಲ್ಯಮಾಪನದ ನಂತರ ರಾಜ್ಯ ಸರ್ಕಾರವು ಆಯ್ಕೆ 1ರ ಅಡಿಯಲ್ಲಿ ಒಟ್ಟು 18,289 ಕೋಟಿ ರೂ. ಪರಿಹಾರ ಪಡೆಯುವ ಆಯ್ಕೆಯನ್ನು ಕರ್ನಾಟಕ ತನ್ನ ಆದ್ಯತೆಯನ್ನಾಗಿ ತೀರ್ಮಾನಿಸಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ಆದಾಯ ಹೆಚ್ಚಳಕ್ಕೆ ಇದು ಸಹಕಾರಿಯಾಗಲಿದೆ" ಎಂದು ಹೇಳಿದ್ದರು.
GST ಪರಿಹಾರದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೀಡಿದ ಎರಡು ಆಯ್ಕೆಗಳ ಮೌಲ್ಯಮಾಪನದ ನಂತರ ರಾಜ್ಯ ಸರ್ಕಾರವು ಆಯ್ಕೆ 1ರ ಅಡಿಯಲ್ಲಿ ಒಟ್ಟು 18,289 ಕೋಟಿ ರೂ. ಪರಿಹಾರ ಪಡೆಯುವ ಆಯ್ಕೆಯನ್ನು ಕರ್ನಾಟಕ ತನ್ನ ಆದ್ಯತೆಯನ್ನಾಗಿ ತೀರ್ಮಾನಿಸಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ಆದಾಯ ಹೆಚ್ಚಳಕ್ಕೆ ಇದು ಸಹಕಾರಿಯಾಗಲಿದೆ.@PMOIndia @FinMinIndia pic.twitter.com/pn83QrLjhV
— CM of Karnataka (@CMofKarnataka) September 2, 2020












Click it and Unblock the Notifications