ಮುಂದುವರೆದ ಬಿಜೆಪಿ ಆಪರೇಷನ್: ಕೈ ಬಿಡದಂತೆ ಲಕ್ಷ್ಮಣ್ ಸವದಿಗೆ ಡಿಕೆ ಶಿವಕುಮಾರ್ ಕೊಟ್ಟ ಆಫರ್ ಏನು?
ಬೆಂಗಳೂರು, ಜನವರಿ 31: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಗೆಲುವು ಕಂಡ ಕಾಂಗ್ರೆಸ್, ಲೋಕಸಭಾ ಚುನಾವಣೆ ಆಪರೇಷನ್ ಹಸ್ತದ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ನ ಅಸಮಾಧಾನಿತ ನಾಯಕರಿಗೆ ಹಾಗೂ ಮಾಜಿ ಶಾಸಕರಿಗೆ ಗಾಳ ಹಾಕಿತ್ತು. ಆದರೆ, ಇದೀಗ ಬಿಜೆಪಿ ರಿವರ್ಸ್ ಆಪರೇಷನ್ ನಡೆಸಿದೆ.
ಹೌದು, ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಿದ್ದ ಬಳಿಕ ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಹಲವು ಹಿರಿಯ ನಾಯಕರನ್ನ ಕರೆತರುವ ನಿಟ್ಟಿನಲ್ಲಿ ತಂತ್ರಗಾರಿಕೆ ಎಣೆದಿದ್ದು, ಅದರಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನ ಬಿಜೆಪಿ ಕರೆತಂದಿದ್ದಾರೆ. ಇದೀಗ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಅವರನ್ನ ಬಿಜೆಪಿ ಕರೆತರುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಜವಾಬ್ದಾರಿ ನೀಡಿದ್ದು, ಡಿ ಕೆ ಶಿವಕುಮಾರ್ ಪಕ್ಷದಲ್ಲೇ ಉಳಿಸಿಕೊಳ್ಳಲು ಹಲವು ಪ್ರಯತ್ನಗಳನ್ನ ನಡೆಸಿದ್ದಾರೆ.

ಇತ್ತ ಬಿಜೆಪಿಗೆ ಲಕ್ಷ್ಮಣ್ ಸವದಿ ಅವರು ಮರು ಸೇರ್ಪಡೆಯಾಗುವುದನ್ನ ತಡೆಯುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗಾಗಲೇ ಲಕ್ಷ್ಮಣ್ ಸವದಿ ಅವರ ಜೊತೆಗೆ ಸುದೀರ್ಘ ಚರ್ಚೆಯನ್ನ ನಡೆಸಿದ್ದಾರೆ. ಈ ವೇಳೆ ನಾನು ಬಿಜೆಪಿಗೆ ಹೋಗಲ್ಲ ಅಂದಿದ್ದರಂತೆ. ಬಿಜೆಪಿ ಟಿಕೆಟ್ ಸಿಗದೇ ಕಾಂಗ್ರೆಸ್ ಸೇರಿ ಅಥಣಿ ಕ್ಷೇತ್ರದಿಂದ ಶಾಸಕರಾಗಿಯೂ ಲಕ್ಷ್ಮಣ ಸವದಿ ಗೆದ್ದು ಬಂದರು. ಆದರೆ ಸವದಿಯವರು ಬಿಜೆಪಿಗೆ ವಾಪಸ್ ಬರ್ತಾರೆ ಎನ್ನುವ ಚರ್ಚೆ ಬೆನ್ನಲ್ಲೇ ಕನಕಪುರದ ಬಂಡೆ ಡಿ ಕೆ ಶಿವಕುಮಾರ್ ಅವರು ಸವದಿ ಜೊತೆಗೆ ಚರ್ಚೆ ನಡೆಸಿದ್ದಾರೆ.
ಈಗಾಗಲೇ ಲೋಕಸಭಾ ಚುನಾವಣೆ ಹಿನ್ನಲೆ ಹಲವು ಮೂಲ ಬಿಜೆಪಿ ನಾಯಕರನ್ನ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಂತ್ರಗಾರಿಕೆಯನ್ನ ಎಣೆದಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನ ಗಾಳ ಹಾಕುವ ಮೂಲಕ ರಾಜಹುಲಿ ಯಶಸ್ವಿಯಾಗಿದ್ದು, ಇದೀಗ ಲಕ್ಷ್ಮಣ್ ಸವದಿ ಅವರಗೆ ಗಾಳ ಹಾಕಿದ್ದಾರೆ. ಹೀಗಾಗಿ ಲಕ್ಷ್ಮಣ ಸವದಿಯವರನ್ನ ಕರೆಸಿ ಮಾತುಕತೆನೂ ನಡೆಸಿ, ಬಿಜೆಪಿಗೆ ಹೋಗದಂತೆ ಬ್ರೈನ್ ವಾಶ್ ಕೂಡ ಮಾಡಿದ್ದರು. ಜೊತೆಗೆ ಉನ್ನತ ಸ್ಥಾನಮಾನದ ಆಫರ್ ಕೂಡ ಕೊಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಲಕ್ಷ್ಮಣ್ ಸವದಿಗೆ ಡಿ ಕೆ ಶಿವಕುಮಾರ್ ಕೊಟ್ಟ ಆಫರ್ ಏನು?
ಲೋಕಸಭಾ ಚುನಾವಣೆ ಹಿನ್ನಲೆ ಶಾಸಕರಿಗೆ ಈಗಾಗಲೇ ನಿಗಮ ಮಂಡಳಿಯಲ್ಲಿ ಅವಕಾಶವನ್ನ ಕಲ್ಪಿಸಿದ್ದು, ನಿಗಮ ಮಂಡಳಿಯಲ್ಲಿ ನಿಮ್ಮ ಬೆಂಬಲಿಗರಿ ಅಥವಾ ನಿಮ್ಮ ಆಪ್ತರಿಗೆ ಸ್ಥಾನಮಾನ ಕಲ್ಪಸಿಕೊಡುವ ನಿಟ್ಟಿನಲ್ಲಿ ಆಫರ್ ನೀಡಿದ್ದಾರೆ. ಅಲ್ಲದೇ ಉತ್ತರ ಕರ್ನಾಟಕ ಎರಡು-ಮೂರು ಲೋಕಸಭಾ ಕ್ಷೇತ್ರವನ್ನ ಗೆಲ್ಲಿಸುವ ನಿಟ್ಟಿನಲ್ಲಿ ಜವಾಬ್ದಾರಿಯನ್ನ ನೀಡುವ ನಿಟ್ಟಿನಲ್ಲಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನೂ ಲೋಕಸಭಾ ಚುನಾವಣೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ, ಲೋಕಸಭಾ ಚುನಾವಣೆಯ ಬಳಿಕ ನಿಮ್ಮನ್ನ ಮಂತ್ರಿ ಮಾಡ್ತೀವಿ ಎನ್ನುವ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ನಿಮ್ಮ ಪುತ್ರನಿಗೂ ಪಕ್ಷದಲ್ಲಿ ಸೂಕ್ತ ಸ್ಥಾನಮಾನವನ್ನ ನೀಡುವ ಭರವಸೆಯನ್ನ ನೀಡಿದ್ದಾರೆ. ಇನ್ನೂ ಲೋಕಸಭಾ ಚುನಾವಣೆ ಹೊತ್ತಲಿ ಬಿಜೆಪಿಯ ಪ್ರಮುಖರನ್ನೂ ಕಾಂಗ್ರೆಸ್ಗೆ ಕರೆತರಲು ಟಾಸ್ಕ್ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications