ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.ಕೆ. ಶಿವಕುಮಾರ್‌ ವಿರುದ್ಧ ಸಿಬಿಐ ಎಫ್‌ಐಆರ್ ನಲ್ಲಿ ಏನಿದೆ ?

|
Google Oneindia Kannada News

ಬೆಂಗಳೂರು, ನವೆಂಬರ್ 25: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಅಧಿಕಾರಿಗಳು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ದಾಖಲಿಸಿರುವ ಎಫ್‌ಐಆರ್ ನಲ್ಲಿ ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದಂತೆ ಮಹತ್ವದ ಸಂಗತಿ ಉಲ್ಲೇಖಿಸಲಾಗಿದೆ. ಸಿಬಿಐ ತನಿಖೆ ಕೈಗೆತ್ತಿಕೊಳ್ಳಲು ಪ್ರಮುಖ ಕಾರಣವಾದ ಅಂಶಗಳನ್ನು ವಿವರಿಸಲಾಗಿದೆ. ಈ ಪ್ರಕರಣದ ವಿಚಾರಣೆ ಸಂಬಂಧ ಡಿ.ಕೆ. ಶಿವಕುಮಾರ್‌ ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಎಫ್‌ಐಆರ್ ನಲ್ಲಿರುವ ಅಂಶಗಳು ಹೀಗಿವೆ.

ಡಿ.ಕೆ. ಶಿವಕುಮಾರ್‌ ನಿವಾಸ ಸೇರಿದಂತೆ ವಿವಿಧ ಕಡೆ ದಾಳಿ ನಡೆಸಿದಾಗ ಹಣ ಪತ್ತೆಯಾಗಿತ್ತು, ಅದರ ಮೂಲ ವಿವರಣೆ ನೀಡುವಲ್ಲಿ ವಿಫಲರಾಗಿದ್ದರು. ಅಲ್ಲದೇ ಹಣ ಅಕ್ರಮ ವರ್ಗಾವಣೆ ಮಾಡಿರುವ ಬಗ್ಗೆ ಇಡಿ ಅಧಿಕಾರಿಗಳ ತನಿಖೆಯನ್ನು ಎದುರಿಸಿದ್ದರು. ಇಡಿ ಹಾಗೂ ಐಟಿ ಅಧಿಕಾರಿಗಳ ತನಿಖೆ ವೇಳೆ ಅಕ್ರಮ ಹಣ ಹಾಗೂ ಅಕ್ರಮ ವರ್ಗಾವಣೆ ಮಾಡಿರುವ ಸಂಗತಿ ಹೊರ ಬಂದಿತ್ತು. ಡಿಕೆಶಿ ತನ್ನ ಕುಟುಂಬಸ್ಥರ ಹೆಸರಿನಲ್ಲಿ ಆಸ್ತಿ ಹೊಂದಿರುವ ಅಂಶ ಬೆಳಕಿಗೆ ಬಂದಿತ್ತು.

ಸಿಬಿಐನಿಂದ ಡಿ.ಕೆ. ಶಿವಕುಮಾರ್ ವಿಚಾರಣೆ ರಾಜಕೀಯ ಪ್ರೇರಿತ!ಸಿಬಿಐನಿಂದ ಡಿ.ಕೆ. ಶಿವಕುಮಾರ್ ವಿಚಾರಣೆ ರಾಜಕೀಯ ಪ್ರೇರಿತ!

ಈ ಕುರಿತು ಡಿಕೆಶಿ ಆಪ್ತರಾದ ಆಂಜನೇಯ, ಶಶಿಕುಮಾರ್, ಹನುಮಂತರಾಯ ಅವರ ಪ್ರಾಥಮಿಕ ವಿಚಾರಣೆ ವೇಳೆ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಕೆಲವು ಮಹತ್ವದ ಮಾಹಿತಿ ಹೊರ ಬಿದ್ದಿದ್ದವು. ಐಟಿ ದಾಳಿ ವೇಳೆ ಆದಾಯತೆರಿಗೆ ಪಾವತಿಸದೇ ವಂಚಿಸಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಐಟಿ ಕಾಯ್ದೆ ಸೆಕ್ಷನ್ 276(1) ಅಕ್ರಮ ಗಳಿಕೆಗಾಗಿ ಆದಾಯ ತೆರಿಗೆ ವಂಚನೆ. ಸೆಕ್ಷನ್ 277 - ದಾಳಿ ವೇಳೆ ಸುಳ್ಳು ಹೇಳಿಕೆ ನೀಡಿ ತನಿಖೆಯ ಹಾದಿ ತಪ್ಪಿಸಲು ಯತ್ನ ಅಡಿ ಪ್ರಕರಣ ದಾಖಲಾಗಿತ್ತು. ಇಡಿ ಮತ್ತು ಐಟಿ ಅಧಿಕಾರಿಗಳ ತನಿಖೆ ವೇಳೆ ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರ ಮಾಡಿರುವ ಬಗ್ಗೆ ಪುರಾವೆಗಳು ಲಭ್ಯವಾಗಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

Whats in the CBI FIR against DK Shivakumar?

ಡಿ.ಕೆ. ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆಕ್ಷನ್ 13(2) r/w 13(1)(e) of pc act 1988 ಅಡಿ ಎಫ್‌ಐಆರ್ ದಾಖಲಿಸಿದ್ದು, 2013 ರಿಂದ 2018 ರ ನಡುವಿನ ಅವಧಿಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಕಾಲಾವಧಿ ಉಲ್ಲೇಖಿಸಲಾಗಿದೆ. ಡಿ.ಕೆ. ಶಿವಕುಮಾರ್ ಅವರು 2013 ರಲ್ಲಿ 33 ,62,793, ಕೋಟಿ ಅದಾಯ ಹೊಂದಿದ್ದಾಗಿ ಚುನಾವಣೆ ವೇಳೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಘೋಷಣೆ ಮಾಡಿಕೊಂಡಿದ್ದಾರೆ. ಐದು ವರ್ಷದ ಅವಧಿಯಲ್ಲಿ ಅವರ ಸ್ಥಿರ ಮತ್ತು ಚರಾಸ್ತಿ ಮೌಲ್ಯ 162,53,44,494 ಕೋಟಿ ರೂಪಾಯಿಗೆ ಏರಿಕೆಯಾಗಿತ್ತು.

ಈ ಅವಧಿಯ ವೆಚ್ಚ 113,12, 16, 585 ರೂ. ಆಗಿತ್ತು. ಅಕ್ರಮವಾಗಿ 74 ಕೋಟಿ ರೂಪಾಯಿ ಗಳಿಸಿರುವುದು ಸಿಬಿಐ ಭ್ರಷ್ಟಾಚಾರ ನಿಗ್ರಹ ಘಟಕದ ಪ್ರಾಥಮಿಕ ತನಿಖೆ ವೇಳೆ ಬಯಲಾಗಿತ್ತು. ಇದರ ಪ್ರಕಾರ ಶೇ. 44.93 ರಷ್ಟು ಅಕ್ರಮ ಆಸ್ತಿ ಗಳಿಸಿರುವುದು ಕಂಡು ಬಂದಿದ್ದು, ಇದಕ್ಕೆ ಸಂಬಂಧಿಸಿದಂತೆ ಸಮರ್ಥ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಡಿ.ಕೆ. ಶಿವಕುಮಾರ್‌ ಮತ್ತು ಇತರೆ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 2020 ಮಾರ್ಚ್ ನಲ್ಲಿ ಎಸಿಬಿ ಅಧಿಕಾರಿಗಳು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಅಂಶಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ.

ಸಿಬಿಐ ವಿಚಾರಣೆ ಸಂದರ್ಭ: ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ಡಿಕೆಶಿ!ಸಿಬಿಐ ವಿಚಾರಣೆ ಸಂದರ್ಭ: ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ಡಿಕೆಶಿ!

Recommended Video

BS Yediyurappa ಇಂದು ಸುತ್ತೂರು ಶ್ರೀ ಕ್ಷೇತ್ರದಲ್ಲಿ ಶಿಲಾನ್ಯಾಸ ನೆರವೇರಿಸಿದರು | Oneindia Kannada

ಈ ಪ್ರಕರಣದ ವಿಚಾರಣೆ ಸಂಬಂಧ ಡಿ.ಕೆ. ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಕೆಲ ದಿನಗಳ ಹಿಂದೆ ನೋಟಿಸ್ ನೀಡಿದ್ದರು. ಎರಡು ದಿನ ಕಾಲಾವಕಾಶ ಪಡೆದಿದ್ದ ಡಿ.ಕೆ. ಶಿವಕುಮಾರ್ ಇಂದು ಸಂಜೆ ಸಿಬಿಐ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಸಿಬಿಐ ಅಧಿಕಾರಿಗಳ ತನಿಖೆಯ ಮ್ಯಾನುಯಲ್ ಪೂರ್ಣ ಓದಿದ್ದೇನೆ. ಅವರ ಕೆಲಸ ಅವರು ಮಾಡುತ್ತಿದ್ದಾರೆ. ನನಗೆ ಯಾವ ತೊಂದರೆ ಕೊಟ್ಟವರು ಅಲ್ಲ, ವಿಚಾರಣೆ ಎದುರಿಸಲು ಸಿದ್ಧನಿದ್ದೇನೆ ಎಂಬ ಹೇಳಿಕೆಯನ್ನು ನೀಡಿ ಸಿಬಿಐ ವಿಚಾರಣೆಗೆ ಹಾಜರಾಗಿದ್ದರು.

English summary
important points are mentioned in the FIR filed by CBI officials against Shivakumar. Dk shivakumar, income during his term 2013 to 2018 as a minister comes back to haunt 74 crore IT and ED officials have revealed that the illicit property was brought to light when investigated. CBI officials have conducted a preliminary inquiry into the five-year period and found documents of possession of illicit property.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X