ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ಕರ್ನಾಟಕಕ್ಕೆ ನೀಡಿದ ಎಚ್ಚರಿಕೆ ಏನು?

Recommended Video

      ಯಾಡಿಯೂರಪ್ಪಗೆ ಮಹಾರಾಷ್ಟ್ರ CM ಹೇಳಿದ್ದೇನು ಗೊತ್ತಾ..? | Yeddyurappa | Oneindia Kannada

      ಮುಂಬೈ, ಸೆಪ್ಟೆಂಬರ್ 9: ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಕೊಯ್ನಾ ಜಲಾಶಯದಿಂದ ಮತ್ತಷ್ಟು ನೀರು ಹರಿಸಲಾಗುತ್ತದೆ ಎಚ್ಚರವಾಗಿರಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕರ್ನಾಟಕಕ್ಕೆ ಎಚ್ಚರಿಕೆ ನೀಡಿದ್ದಾರೆ.

      ಈಗಾಗಲೇ ಕೊಯ್ನಾ ಜಲಾಶಯದಿಂದ ಕೃಷ್ಣ ನದಿಗೆ 1.70 ಲಕ್ಷ ಕ್ಯುಸೆಕ್‌ ನೀರು ಹೊರಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು ಸುರಿದ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಜಲಾವೃತಗೊಂಡಿದ್ದವು. ಅಥಣಿ, ಚಿಕ್ಕೋಡಿ, ಗೋಕಾಕ್‌ ತಾಲೂಕುಗಳಲ್ಲಿ ಅತಿ ಹೆಚ್ಚು ಹಾನಿಯಾಗಿದೆ.
      ಈಗ ಮತ್ತಷ್ಟು ನೀರು ಹರಿಸುವ ಸಾಧ್ಯತೆ ಎನ್ನುವ ಮಾಹಿತಿ ಲಭ್ಯವಾಗಿದೆ.

      ಎರಡು ಲಕ್ಷ ಕ್ಯೂಸೆಕ್ ಹೆಚ್ಚುವರಿ ನೀರು ಬಿಡುವ ಸಂಬಂಧ ಕರೆ ಮಾಡಿ ಫಡ್ನವಿಸ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದ್ದಾರೆ. ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಅಲರ್ಟ್ ಮಾಡುವಂತೆ ಫಡ್ನವೀಸ್ ಸಿಎಂಗೆ ಮನವಿ ಮಾಡಿದ್ದಾರೆ.

      What Was Maharashtra Chief Minister Fadnavis Warning To Karnataka

      ಈಗಾಗಲೇ ಇತ್ತೀಚೆಗೆ ಒಂದು ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಜಲಾಶಯದಿಂ ದ ಬಿಡಲಾಗಿತ್ತು. ಈಗ ಮತ್ತೆ 2 ಲಕ್ಷ ಕ್ಯೂಸೆಕ್ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರದಿಂದ ಸಿಎಂಗೆ ಮಾಹಿತಿ ಲಭ್ಯವಾಗಿದೆ. ಇದೀಗ ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

      ಇನ್ನು ಚಿಕ್ಕಮಗಳೂರಿನಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರ ಮುಂದುವರೆದಿದ್ದು, ಜನರು ತತ್ತರಿಸಿದ್ದಾರೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ದಾರದಹಳ್ಳಿ, ಗೋಣಿಬೀಡು, ಕಳಸ ಕುದುರೆಮುಖ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹ ಪರಿಸ್ಥಿತಿ ಇದ್ದುದರಿಂದ ಸಂತ್ರಸ್ತರನ್ನು ಸ್ಥಳಾಂತರಿಸಲಾಗಿದ್ದು, ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+