ಆರ್‌ಎಸ್‌ಎಸ್ ಶಾಖೆಗೆ ಹೋಗಿ 40% ಕಮಿಷನ್ ಹೊಡೆಯುವುದನ್ನು ಕಲಿಯಬೇಕಾ?

ಬೆಂಗಳೂರು, ಮೇ 30: ಬಿಜೆಪಿಯ ಒಬ್ಬ ನಾಯಕರು ಆರ್.ಎಸ್.ಎಸ್ ಶಾಖೆಗೆ ಬನ್ನಿ ಎಂದು ಕರೆಯುತ್ತಿದ್ದಾರೆ, ಇನ್ನೊಬ್ಬರು ಆರ್.ಎಸ್.ಎಸ್ ಪುಸ್ತಕ ಓದಿ ಎಂದು ಸಲಹೆ ನೀಡಿದ್ದಾರೆ. ಅಲ್ಲಿಗೆ ಹೋಗಿ, ಓದಿ ಏನನ್ನು ಕಲಿಯುವುದು? 40% ಕಮಿಷನ್ ಹೊಡೆಯುವುದಾ? ದುಡ್ಡು ಪಡೆದು ಪಕ್ಷಾಂತರ ಮಾಡುವುದಾ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಿಮ್ಮ ಸಂಘದಲ್ಲಿ ಒಂದು ಜಾತಿಯ ಪದಾಧಿಕಾರಿಗಳು ಮಾತ್ರ ಯಾಕಿದ್ದಾರೆ? ದಲಿತರು, ಹಿಂದುಳಿದವರು ಸೇರಿದಂತೆ ಬೇರೆ ಜಾತಿಗಳಿಗೆ ಯಾಕೆ ಅವಕಾಶ ಇಲ್ಲ? ಇಂತಹದ್ದೊಂದು ಸರಳ ಪ್ರಶ್ನೆಗೆ ಆರ್.ಎಸ್.ಎಸ್ ನಲ್ಲಿ ಉತ್ತರ ಇಲ್ಲ ಎನ್ನುವುದೇ ಈ ಸಂಘಟನೆಯ ಡೋಂಗಿತನಕ್ಕೆ ಸಾಕ್ಷಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ನನ್ನ ಸರಳ ಪ್ರಶ್ನೆಗೆ ಉತ್ತರಿಸಲಾಗದ ಆರ್.ಎಸ್.ಎಸ್, ಮತ್ತು ಬಿಜೆಪಿ ಕರ್ನಾಟಕದ ಕೂಗುಮಾರಿಗಳನ್ನು ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಲು ಛೂ ಬಿಟ್ಟಿದೆ. 97 ವರ್ಷಗಳ ಇತಿಹಾಸವಿರುವ ಆರ್.ಎಸ್.ಎಸ್ ನನ್ನದೊಂದು ಸರಳ ಪ್ರಶ್ನೆಗೆ ಉತ್ತರಿಸಲಾಗದಷ್ಟು ದುರ್ಬಲ ಸಂಘಟನೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನನ್ನ ಮೇಲೆ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಕರ್ನಾಟಕದ ನಾಯಕರ ಮಾತುಗಳೇ, ಆರ್.ಎಸ್.ಎಸ್ ತನ್ನ ಸ್ವಯಂಸೇವಕರಿಗೆ ಕಲಿಸಿಕೊಡುವ ಸಂಸ್ಕಾರ- ಸಂಸ್ಕೃತಿ ಏನು ಎನ್ನುವುದನ್ನು ಸೂಚಿಸುತ್ತದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗೌರವಾನ್ವಿತ ನಾಯಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತಿದ್ದೇನೆ. ಹಿಂದುಗಳೆಲ್ಲ ಒಂದು ಎನ್ನುವ ನಿಮ್ಮ ಸಂಘದ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಉಳಿದ ಜಾತಿಗಳು ಯಾಕೆ ಅಸ್ಪೃಶ್ಯವಾಗಿವೆ? ದಯವಿಟ್ಟು ಉತ್ತರಿಸಿ.

What we learn from RSS Shakha? 40 percent commission? Siddaramiah questioned

ಆರ್.ಎಸ್.ಎಸ್ ಶಾಖೆಗಳಿಗೆ ಹೋದರೆ ಏನಾಗುತ್ತದೆ ಎನ್ನುವುದಕ್ಕೆ ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರೇ ಜೀವಂತ ಉದಾಹರಣೆ. ಸಂಸ್ಕೃತಿ, ಸಂಸ್ಕಾರ, ಸಚ್ಛಾರಿತ್ರ್ಯದಂತಹ ಮೌಲ್ಯಗಳಿಗೂ, ನಿತ್ಯ ಶಬ್ದಭೇದಿ ಮಾಡುತ್ತಿರುವ ಕಟೀಲ್ ಅವರಿಗೂ ಏನಾದರೂ ಸಂಬಂಧವಿದೆಯೇ? ಎಂದು ಕೇಳಿದ್ದಾರೆ.

ಮಸಿ ಬಳಿದಿದ್ದು ರಾಜ್ಯ ಸರ್ಕಾರಕ್ಕೆ:

ರೈತ ನಾಯಕ‌ ರಾಕೇಶ್ ಟಿಕಾಯತ್ ಅವರ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಖಂಡನೀಯ ದುಷ್ಕೃತ್ಯ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನೆನಪಿರಲಿ, ಈ ಗೂಂಡಾಗಳು ಮಸಿ ಬಳಿದಿರುವುದು ರಾಜ್ಯ ಸರ್ಕಾರದ ಮುಖಕ್ಕೆ. ಈ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟದಿದ್ದರೆ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂರುವ ನೈತಿಕತೆ ನಿಮಗಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರೈತ ನಾಯಕ ರಾಜೇಶ್ ಟಿಕಾಯತ್ ಅವರ ಮೇಲಿನ ದೈಹಿಕ ಹಲ್ಲೆ, ಭಿನ್ನಾಭಿಪ್ರಾಯವನ್ನು ಸಿದ್ದಾಂತದ ಮೂಲಕ ಎದುರಿಸಲಾಗದ ಬಿಜೆಪಿ ಮತ್ತು ಮತ್ತು ಬೆಂಬಲಿಗರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸಹನೆ-ಸಜ್ಜನಿಕೆಗೆ ಹೆಸರಾದ ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+