Government employee: ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಯಾವ ಘೋಷಣೆ?

ಬೆಂಗಳೂರು, ಫೆಬ್ರವರಿ 13: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಫೆಬ್ರವರಿ 27ರಂದು ನಡೆಯಲಿದೆ. ಈ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ. ಸಮ್ಮೇಳನದಲ್ಲಿ ಯಾವ ಘೋಷಣೆಯಾಗಲಿದೆ? ಎಂಬುದು ಈಗ ಚರ್ಚೆಯ ವಿಚಾರ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಅವರು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದರು. ಫೆಬ್ರವರಿ 27ರ ಮಂಗಳವಾರ ಬೆಳಗ್ಗೆ 10.30ಕ್ಕೆ ಅರಮನೆ ಮೈದಾನದ, ಕೃಷ್ಣ ವಿಹಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆಯಲಿದ್ದು, ಇದಕ್ಕೆ ಅಧಿಕೃತ ಆಹ್ವಾನ ನೀಡಿದರು.

What Will Announce In Government Employees General Conference On Feb 27

ಫೆಬ್ರವರಿ 14ರಂದು ಸಭೆ; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದ ಪೂರ್ವಭಾವಿಯಾಗಿ ಫೆಬ್ರವರಿ 14ರಂದು ಸಭೆಯನ್ನು ಕರೆದಿದೆ. ರಾಜ್ಯ ನೌಕರರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪೂರಕವಾಗಿ ಬೆಂಗಳೂರು ನಗರದ ಅರಮನೆ ಆವರಣದಲ್ಲಿ ದಿನಾಂಕ 27/02/2024ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಹೇಳಿದೆ.

ಈ ಸಮ್ಮೇಳನವನ್ನು ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಲಿದ್ದು, ಉಪ ಮುಖ್ಯಮಂತ್ರಿಗಳು, ಸಚಿವ ಸಂಪುಟದ ಸಚಿವರು ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಸಭೆಯ ತಿಳುವಳಿಕೆ ಪತ್ರದಲ್ಲಿ ತಿಳಿಸಲಾಗಿದೆ.

ಈ ಮಹಾ ಸಮ್ಮೇಳನದ ಸಂಬಂಧ ಪೂರ್ವಭಾವಿ ಸಭೆಯನ್ನು 14/02/2024ರ ಬುಧವಾರ ಸಂಜೆ 5 ಗಂಟೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಅಧ್ಯಕ್ಷತೆಯಲ್ಲಿ ನಡೆಸಲಾಗುತ್ತದೆ.

ರಾಜ್ಯದ ವಿವಿಧ ಇಲಾಖೆಗಳ ವೃಂದ ಸಂಘಗಳ ಹಾಗೂ ಸೇವಾ ಸಂಘಗಳ ಅಧ್ಯಕ್ಷರುಗಳು ಸಭೆಯಲ್ಲಿ ಪಾಲ್ಗೊಂಡು ಸಲಹೆ-ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಲು ಕೋರಲಾಗಿದೆ. ಈ ಸಭೆಯಲ್ಲಿಯೇ ಮಹಾಸಮ್ಮೇಳನದಲ್ಲಿ ಮುಖ್ಯಮಂತ್ರಿಗಳ ಮುಂದೆ ಇಡಬೇಕಾದ ಬೇಡಿಕೆ ಕುರಿತು ಚರ್ಚೆ ನಡೆಯಲಿದೆ.

ಬೇಡಿಕೆಗಳು; ಸದ್ಯ ಸರ್ಕಾರಿ ನೌಕರರ ಸಂಘ ಸರ್ಕಾರದ ಮುಂದೆ 3 ಪ್ರಮುಖ ಬೇಡಿಕೆಗಳನ್ನು ಇಟ್ಟಿದೆ. ಇವುಗಳಲ್ಲಿ ರಾಜ್ಯದ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸುವುದು. ಸರ್ಕಾರವು ರಾಜ್ಯದ 7ನೇ ವೇತನ ಆಯೋಗದಿಂದ ಶೀಘ್ರವಾಗಿ ವರದಿಯನ್ನು ಪಡೆದು ಸರ್ಕಾರ ಈಗಾಗಲೇ ನೀಡಿರುವ ಶೇಕಡ 17ರಷ್ಟು ಮಧ್ಯಂತರ ಪರಿಹಾರ ಭತ್ಯೆಯು ಸೇರಿದಂತೆ 40ರಷ್ಟು ಫಿಟ್ ಮೆಂಟ್ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ 1/7/2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು ಎಂಬುದು ಪ್ರಮುಖ ಬೇಡಿಕೆಯಾಗಿದೆ.

ದಿನಾಂಕ 1/4/2006ಕ್ಕಿಂತ ಮೊದಲು ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದು. ರಾಜ್ಯದ ಎನ್‌ಪಿಎಸ್‌ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‌ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ್‌, ಜಾರ್ಖಂಡ್‌ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕರ್ನಾಟಕ ರಾಜ್ಯದಲ್ಲೂ ಸಹ ಎನ್‌ಪಿಎಸ್ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬುದು 2ನೇ ಬೇಡಿಕೆಯಾಗಿದೆ.

ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡಲೇ ಜಾರಿಗೊಳಿಸುವುದು ಎಂದು ಬೇಡಿಕೆ ಇಡಲಾಗಿದೆ.

ಕರ್ನಾಟಕದ ಬಜೆಟ್ ಅಧಿವೇಶನ 2024 ಸೋಮವಾರ ಆರಂಭವಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 16ರಂದು 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಮೊದಲು ಸಿದ್ದರಾಮಯ್ಯ ಕೆ. ಸುಧಾಕರ್ ನೇತೃತ್ವದ 7ನೇ ವೇತನ ಆಯೋಗದ ಜೊತೆ ಮಹತ್ವದ ಸಭೆಯನ್ನು ಸೋಮವಾರ ನಡೆಸಿದ್ದಾರೆ.

ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೂ ಮೊದಲು ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಯಾವ ಉಡುಗೊರೆ ನೀಡಲಿದ್ದಾರೆ? ಎಂದು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+