Siddaramaiah: ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ: ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಹಾಸನ, ನವೆಂಬರ್‌ 07: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರ ಕೇವಲ ಶಾಸಕರನ್ನು ಸೆಳೆಯುವ ಕೆಲಸದಲ್ಲಿ ಮಗ್ನವಾಗಿದೆ ಎಂದಿದ್ದಾರೆ. ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗ ಮಾತನಾಡಿ, ಕುಮಾರಸ್ವಾಮಿ ಅವರು ಸುಳ್ಳು ಆರೋಪಗಳನ್ನು ಮಾಡುವುದು, ಸುಳ್ಳು ಹೇಳುವುದನ್ನು ಬಿಟ್ಟರೆ ಬೆರೆ ಏನೂ ಮಾಡುತ್ತಿಲ್ಲ. ವಿರೋಧ ಪಕ್ಷ ಎಂದ ಮೇಲೆ ಸಲಹೆಗಳನ್ನು ನೀಡಬೇಕು ಎಂದು ಹೇಳಿದರು.

kumaraswamy-speak-the-truth-siddaramaiah

ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿ ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆ ಮಾತನಾಡಬಹುದೇ ಎಂದು ಪ್ರಶ್ನಿಸಿದರು. ಪ್ರಧಾನಮಂತ್ರಿಗಳೆಂದರೆ ಅವರೇನು ಸರ್ವಾಧಿಕಾರಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಹಾಸನದ ಲೋಕಸಭಾ ಚುನಾವಣಾ ಅಭ್ಯರ್ಥಿ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಹಾಸನ ಜಿಲ್ಲೆಗೆ ಸಚಿವರನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿನ ಜನನಾಯಕರ ಅಭಿಪ್ರಾಯಗಳ ವರದಿಯನ್ನು ಪಡೆದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಶೇಮ್‍ಲೆಸ್ ಸರ್ಕಾರ ಎಂದು ಹೇಳಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರೇ ಶೇಮ್‍ಲೆಸ್ ವ್ಯಕ್ತಿ. ಅವರ ನಡವಳಿಕೆ ಸರಿಯಿಲ್ಲದ ಕಾರಣ ಬಿಜೆಪಿ ಅವರಿಗೆ ನೋಟೀಸು ಜಾರಿ ಮಾಡಿತ್ತು ಎಂದರು.

ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಸಮಸ್ಯೆ ನಿವಾರಣೆ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ, 800 ಮೆಗಾ ವ್ಯಾಟ್ ನಷ್ಟು ಥರ್ಮಲ್ ವಿದ್ಯುತ್ ನ್ನು ಉತ್ಪಾದಿಸಲಾಗುತ್ತಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್ ನಲ್ಲಿ ರಾಜ್ಯದ ಬಳಕೆಗೆ ಲಭ್ಯವಾಗಬೇಕು ಎಂಬ ಆದೇಶ ಹೊರಡಿಸಲಾಗಿದೆ. ಸಕ್ಕರೆ ಕಾರ್ಖಾನೆಗಳ ಪ್ರಾರಂಭದಿಂದಾಗಿ ವಿದ್ಯುತ್ ಕೋಜನರೇಷನ್ ಸಾಧ್ಯವಾಗುತ್ತಿದ್ದು, ಸುಮಾರು 450 ಮೆ.ವ್ಯಾ ವಿದ್ಯುತ್ ಉತ್ಪಾದನೆಯಾಗುತ್ತದೆ. ಈ ಎಲ್ಲ ಕ್ರಮಗಳಿಂದ ಮೂರು ಫೇಸ್ ಗಳಲ್ಲಿ ಸತತ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ತೀರ್ಮಾನಿಸಲಾಗಿದೆ.

ಹಾಸನ ವೈದ್ಯಕೀಯ ಕಾಲೇಜಿನ ನಿರ್ದೇಶಕರ ರಾಜಿನಾಮೆಯಿಂದ ಖಾಲಿ ಹುದ್ದೆಗೆ ನೇಮಕಾತಿ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿರುವುದಿಲ್ಲ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪರಿಶೀಲಿಸಿ ಕೂಡಲೇ ಬೇರೆಯವರನ್ನು ಹುದ್ದೆಗೆ ನೇಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕರ ಸಂಗಪ್ಪ 300 ಕೋಟಿ ಹಣ ಬಿಡುಗಡೆ ಮಾಡಲು 38 ಲಕ್ಷ ಲಂಚ ಕೇಳುತ್ತಿರುವ ಕುರಿತು ಮಾತನಾಡಿ ಈ ಬಗ್ಗೆ ವಿಚಾರಣೆ ಮಾಡಲಾಗುವುದು. ತನಿಖೆ ನಡೆಸಿ, ಆರೋಪ ಸಾಬೀತಾದರೆ ಅವರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+