ಕಾಂಗ್ರೆಸ್‌ಗೆ ಪ್ರಬಲ ಅಭ್ಯರ್ಥಿಯ ಕೊರತೆ; ಫೈನಲ್ ಆಗದ ಟಿಕೆಟ್- ಎರಡನೇ ಪಟ್ಟಿ ಬಿಡುಗಡೆ ಯಾವಾಗ?
ಬೆಂಗಳೂರು, ಮಾರ್ಚ್ 11: ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಹೈಕಮಾಂಡ್ 28 ಕ್ಷೇತ್ರಗಳ ಫೈಕಿ 7 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯೇ ದೊಡ್ಡ ತಲೆನೋವಾಗಿದೆ.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ದೆಹಲಿ ಹೈಕಮಾಂಡ್ ನಾಯಕರ ಮುಂದಿಟ್ಟಿದ್ದಾರೆ. ಆದರೆ, ಹಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವ ಲೆಕ್ಕಾಚಾರವನ್ನ ಕಾಂಗ್ರೆಸ್ ಹೈಕಮಾಂಡ್ ಹಾಕಿಕೊಂಡಿದೆ. ಈಗಾಗಲೇ ಸೂಕ್ತ ಅಭ್ಯರ್ಥಿಯ ಕೊರತೆಯಿಂದಾಗಿ ಕೆಲವು ಕ್ಷೇತ್ರಗಳಲ್ಲಿ ಸಚಿವರನ್ನ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿತ್ತು. ಆದರೆ, ಸಚಿವರುಗಳು ಸ್ಪರ್ಧೆ ಕುರಿತು ನಿರಾಸಕ್ತಿ ತೋರಿದ್ದಾರೆ.

ಇನ್ನೂ ಕೆಲವು ಕ್ಷೇತ್ರದಲ್ಲಿ ಸಚಿವರುಗಳು ತಮ್ಮ ಮಕ್ಕಳಿಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿತ್ತು. ಆದರೆ, ಸಚಿವರುಗಳ ಬೇಡಿಕೆ ಒಂದು ಕಡೆಯಾದ್ರೆ ಇನ್ನೊಂದು ಕಡೆ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎನ್ನುವ ಒತ್ತಡವೂ ಕೇಳಿ ಬಂದಿದೆ. ಈಗಾಗಲೇ 15 ಜನ ಆಕಾಂಕ್ಷಿಗಳನ್ನ ಒಳಗೊಂಡ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಘೋಷಣೆಯಾಗಿದ್ದು, ಇಂದು ಇನ್ನೊಂದು ಸುತ್ತಿನ ಸಭೆಯ ಬಳಿಕ ಪಟ್ಟಿ ಅಂತಿಮಗೊಳಲಿದೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 15 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನ ಫೈನಲ್ ಮಾಡಲಾಗಿತ್ತು. ಅದರಂತೆ ಸ್ಕ್ರೀನಿಂಗ್ ಕಮಿಟಿ ಸಭೆ ಕರ್ನಾಟಕದ 15 ಕ್ಕೂ ಹೆಚ್ಚು ಹೆಸರುಗಳನ್ನ ಬಿಡುಗಡೆ ಮಾಡುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ನೀರಿಕ್ಷೆ ಇಟ್ಟುಕೊಂಡಿದ್ರು, ಆದ್ರೆ 39 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕೇವಲ ಕರ್ನಾಟಕದ 7 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದ್ದು, ಮಾರ್ಚ್ 11 ರ ನಂತರ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಇನ್ನೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಇನ್ನೊಂದು ಸುತ್ತಿನ ಬಳಿಕ ಕಾಂಗ್ರೆಸ್ ಎರಡನೇ ಪಟ್ಟಿಯನ್ನ ಅಂತಿಮಗೊಳಿಸಲಿ. ಇಂದು ಬಿಜೆಪಿ ಹೈಕಮಾಂಡ್ ಎರಡನೇ ಪಟ್ಟಿಯನ್ನ ಬಿಡುಗಡ ಮಾಡಲಿದೆ. ಆ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಒಳಗೊಂಡಿರಲಿದೆ ಎಂದು ತಿಳಿದು ಬಂದಿದ್ದು, ಬಿಜೆಪಿ ಪಟ್ಟಿಯನ್ನ ನೋಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನ ಫೈನಲ್ ಮಾಡಲಿದೆ ಎನ್ನಲಾಗಿದೆ.

ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ
ಶಿವಮೊಗ್ಗ- ಗೀತಾ ಶಿವರಾಜ್ ಕುಮಾರ್
ತುಮಕೂರು- ಎಸ್ಪಿ ಮುದ್ದಹನುಮೇಗೌಡ
ಮಂಡ್ಯ- ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
ಹಾಸನ- ಶ್ರೇಯಸ್ ಪಟೇಲ್
ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್
ವಿಜಯಪುರ- ಎಚ್ಆರ್ ಅಲ್ಗೂರ್
ಹಾವೇರಿ: ಆನಂದ್ ಸ್ವಾಮಿ ಗಡ್ಡ ದೇವರಮಠ
ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಅಂತಿಮ ಪಟ್ಟಿ?
ತುಮಕೂರು- ಎಸ್.ಪಿ. ಮುದ್ದಹನುಮೇಗೌಡ
ಮೈಸೂರು- ಎಂ. ಲಕ್ಷ್ಮಣ್
ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ
ಕೋಲಾರ- ಕೆ.ಎಚ್. ಮುನಿಯಪ್ಪ
ಬೆಂಗಳೂರು ಕೇಂದ್ರ-ಎನ್.ಎ. ಹ್ಯಾರೀಸ್
ಬೆಂಗಳೂರು ದಕ್ಷಿಣ- ಸೌಮ್ಯಾ ರೆಡ್ಡಿ
ಚಿತ್ರದುರ್ಗ- ಬಿ.ಎನ್. ಚಂದ್ರಪ್ಪ
ವಿಜಯಪುರ- ಮಾಜಿ ಶಾಸಕ ರಾಜು ಅಲಗೂರು
ಬೀದರ್- ರಾಜಶೇಖರ್ ಪಾಟೀಲ್
ಕಲಬುರಗಿ- ರಾಧಾಕೃಷ್
ಉಡುಪಿ-ಚಿಕ್ಕಮಗಳೂರು- ಜಯಪ್ರಕಾಶ್ ಹೆಗ್ಡೆ ,ಡಾ. ಅಂಶುಮಂತ್












Click it and Unblock the Notifications