ಮಾರ್ಚ್ ಮಧ್ಯ ಭಾಗದಲ್ಲಿ ಕರ್ನಾಟಕ ಚುನಾವಣೆ ಘೋಷಣೆ ಸಾಧ್ಯತೆ

Posted By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಜನವರಿ 10: ಮಾರ್ಚ್ ಮಧ್ಯಭಾಗದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಲಿದೆ.

ಕರ್ನಾಟಕದಲ್ಲಿ ಏಪ್ರಿಲ್ 5ರಿಂದ ಮೇ 5ರ ನಡುವೆ ಯಾವುದೇ ದಿನದಂದು ಚುನಾವಣೆ ನಡೆಯುವ ಸಾಧ್ಯತೆ ಇದೆ.

ಸಂಕ್ರಾಂತಿ ವಿಶೇಷ ಪುಟ

ಒಮ್ಮೆ ಚುನಾವಣಾ ದಿನಾಕ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬರಲಿದೆ. ಚುನಾವಣಾ ದಿನಾಂಕ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಚುನಾವಣಾ ಅಧಿಕಾರಿಗಳು ಮಹತ್ವದ ಸಭೆಯನ್ನೂ ನಡೆಸಿದ್ದಾರೆ.

When will Karnataka Assembly Election 2018 be held: EC contemplates April

ಸಭೆಯಲ್ಲಿ ರಾಜ್ಯದ ಹಿರಿಯ ಸರಕಾರಿ ಅಧಿಕಾರಿಗಳು, ರಾಜ್ಯ ಚುನಾವಣಾ ಆಯೋಗದ ಸದಸ್ಯರು, ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಡಿಜಿಪಿ ನೀಲಮಣಿ ರಾಜು, ಐಜಿಪಿಗಳು ಭಾಗವಹಿಸಿದ್ದಾರೆ.

ಮಾರ್ಚ್ ನಲ್ಲಿ ಚುನಾವಣಾ ದಿನಾಂಕ ಘೋಷಣೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆದಿದೆ. ಜತೆಗೆ ಒಂದೇ ಹಂತದ ಮತದಾನ ನಡೆಯಬೇಕೋ, ಎರಡು ಹಂತದಲ್ಲೋ ಎಂಬ ಬಗ್ಗೆ ಚರ್ಚೆ ನಡೆದಿದೆ.

ಇನ್ನು ಈ ವಾರ ರಾಜಕೀಯ ಪಕ್ಷಗಳ ಪ್ರಮುಖರ ಜತೆಯೂ ಸಭೆ ನಡೆಯಲಿದೆ. ಈ ಎಲ್ಲಾ ಸಭೆಗಳ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಕೇಂದ್ರ ಚುನಾವಣಾ ಆಯೋಗ ಚುನಾವಣೆಯ ದಿನಾಂಕ ನಿರ್ಧರಿಸಲಿದೆ. ಇನ್ನು ಈ ಬಾರಿ ಕರ್ನಾಟಕದಲ್ಲಿ ಮತದಾನಕ್ಕೆ ಇವಿಎಂಗಳ ಜತೆ ವಿವಿಪ್ಯಾಟ್ ಗಳನ್ನೂ ಬಳಸಲಾಗುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The date of the Karnataka Assembly Elections 2018 will be announced by mid-march. The Election Commission of India would take into account the SSLC and PUC examinations before announcing the date.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ