ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಚ್ಛೇ ದಿನ್ ಎಲ್ಲಿ?, ಮೋದಿಗೆ ಸಿದ್ದರಾಮಯ್ಯ ಟ್ವೀಟ್ ಬಾಣ!

|
Google Oneindia Kannada News

ಬೆಂಗಳೂರು, ಫೆಬ್ರವರಿ 24 : 'ಅಚ್ಛೇ ದಿನ್ ಎಲ್ಲಿ, 2 ಕೋಟಿ ಉದ್ಯೋಗ ಎಲ್ಲಿ, ಕಪ್ಪು ಹಣ ಎಲ್ಲಿ?' ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

@siddaramaiah ಟ್ವಿಟರ್ ಖಾತೆಯಿಂದ ಭಾನುವಾರ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ ಅವರು, 'ಮನ್ ಕೀ ಬಾತ್ ಸುಳ್ಳುಗಳನ್ನು ತುಂಬಿದ ಚೀಲ' ಎಂದು ಪ್ರಧಾನಿ ನರೇಂದ್ರ ಮೋದಿ ಅವರ ರೆಡಿಯೋ ಕಾರ್ಯಕ್ರಮವನ್ನು ಟೀಕಿಸಿದ್ದಾರೆ.

ಮೋದಿ, ಅಮಿತ್‌ ಶಾಗೆ ಸಿದ್ದರಾಮಯ್ಯ 5 ಪ್ರಶ್ನೆಗಳು!ಮೋದಿ, ಅಮಿತ್‌ ಶಾಗೆ ಸಿದ್ದರಾಮಯ್ಯ 5 ಪ್ರಶ್ನೆಗಳು!

'ಈಗ ದೇಶದ ಜನರು ಐದು ವರ್ಷಗಳ ಬಿಜೆಪಿ ಆಡಳಿತವನ್ನು ನೋಡಿದ್ದಾರೆ. ಅಚ್ಛೇದಿನ್ ಹೆಸರಿನಲ್ಲಿ ಭಾಷಣ ಮಾಡಿ ನೀಡಿದ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ' ಎಂದು ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕಕ್ಕೆ ಬರುತ್ತಿರುವ ಮೋದಿಗೆ ಹಲವು ಪ್ರಶ್ನೆ ಕೇಳಿದ ಕಾಂಗ್ರೆಸ್!ಕರ್ನಾಟಕಕ್ಕೆ ಬರುತ್ತಿರುವ ಮೋದಿಗೆ ಹಲವು ಪ್ರಶ್ನೆ ಕೇಳಿದ ಕಾಂಗ್ರೆಸ್!

'ನಾನು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇನೆ. ನರೇಂದ್ರ ಮೋದಿ ಅವರು ನೀಡಿದ ಭರವಸೆಗಳು ಈಡೇರಿಸಲಾಗಿದೆಯೇ?' ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಿದ್ದರಾಮಯ್ಯ ಗುಡುಗಿದ್ದಾರೆ...

ಮಂಗಳೂರಿನಲ್ಲಿ ಅನಾವರಣಗೊಂಡಿದೆ 'ನಮೋ ಕಿರು ಜಗತ್ತು'ಮಂಗಳೂರಿನಲ್ಲಿ ಅನಾವರಣಗೊಂಡಿದೆ 'ನಮೋ ಕಿರು ಜಗತ್ತು'

ಅಚ್ಛೇ ದಿನ್ ಎಲ್ಲಿ?

ನಾನು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇನೆ. ಅಚ್ಛೇ ದಿನ್ ಎಲ್ಲಿ? ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಇಷ್ಟು ಸುಳ್ಳು ಹೇಳಿದ ಪ್ರಧಾನಿ ಇಲ್ಲ

ದೇಶದ ಇತಿಹಾಸದಲ್ಲಿಯೇ ನರೇಂದ್ರ ಮೋದಿ ಅವರಷ್ಟು ಸುಳ್ಳು ಹೇಳಿದ ಪ್ರಧಾನಿ ಇಲ್ಲ. ಜನರ ದಾರಿ ತಪ್ಪಿಸುವುದು ಬಿಜೆಪಿಯ ಡಿಎನ್‌ಎಯಲ್ಲಿಯೇ ಇದೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಸಾಧನೆ ಮಾಡಿದ್ದು ಹೌದು

ಕಾಂಗ್ರೆಸ್ 55 ವರ್ಷಗಳಲ್ಲಿ ಮಾಡದ ಸಾಧನೆಯನ್ನು 55 ತಿಂಗಳಿನಲ್ಲಿ ನರೇಂದ್ರ ಮೋದಿ ಮಾಡಿದ್ದು ಹೌದು ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಸಂವಿಧಾನದ ಮೇಲೆ ನಂಬಿಕೆ ಇಲ್ಲ

ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಬಡ ಮತ್ತು ಮಧ್ಯಮ ವರ್ಗದ ಜನರ ಬಗ್ಗೆ ಕಾಳಜಿ ಇಲ್ಲ. ಈಗ 5 ವರ್ಷದ ಬಿಜೆಪಿ ಆಡಳಿತವನ್ನು ಜನರು ನೋಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನೆಮ್ಮದಿಯಾಗಿ ಬದುಕಲು ಬಿಡೋಲ್ಲ

'ಬಿಜೆಪಿ ಕೋಮುವಾದ ಪಕ್ಷ. ದಲಿತರು ಅಲ್ಪ ಸಂಖ್ಯಾತರನ್ನು ನೆಮ್ಮದಿಯಾಗಿ ಬದುಕುವುದಕ್ಕೆ ಅದು ಬಿಡುವುದಿಲ್ಲ. ಪ್ರಜಾಪ್ರಭುತ್ವದ ಬಗ್ಗೆ ಪಕ್ಷಕ್ಕೆ ನಂಬಿಕೆ ಇಲ್ಲ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

English summary
In series of tweet Karnataka Former Chief Minister Siddaramaiah asked the Prime Minister of India Narendra Modi Where is Acche Din?, Where are 2 Cr jobs?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X