• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿಎಂಗಳ ಜೊತೆ ಸಂವಾದದ ಬೆನ್ನಲ್ಲೇ ಪಿಎಂ ಮೋದಿ ಟ್ವೀಟ್: ಮತ್ತೆ ಲಾಕ್ ಡೌನ್ ಗುಮ್ಮ!

|

ನವದೆಹಲಿ, ಸೆ 24: ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಟ್ವೀಟ್, ಕೆಲವು ರಾಜ್ಯಗಳಲ್ಲಿ ಮತ್ತೆ ಲಾಕ್ ಡೌನ್ ಹೇರಿಕೆಯಾಗಲಿದೆಯೇ ಎನ್ನುವ ಅನುಮಾನ ಮೂಡುವಂತಿದೆ.

ಬುಧವಾರ (ಸೆ 23) ಕೋವಿಡ್ 19 ಗೆ ಸಂಬಂಧಿಸಿದಂತೆ ಪ್ರಧಾನಿ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ನವದೆಹಲಿ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಒಟ್ಟು ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ್ದರು.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಸಂವಾದ

ಕೊರೊನಾ ಸೋಂಕಿತರ ಸಂಖ್ಯೆ ಏಳು ರಾಜ್ಯಗಳಲ್ಲಿ ನಿಯಂತ್ರಣ ಬರದೇ ಇರುವುದಕ್ಕೆ ಕಳವಳ ವ್ಯಕ್ತ ಪಡಿಸಿರುವ ಮೋದಿ, ಮುಖ್ಯಮಂತ್ರಿಗಳಿಗೆ ಹಲವು ಸಲಹೆ/ಸೂಚನೆಯನ್ನು ಸಭೆಯಲ್ಲಿ ನೀಡಿದ್ದರು.

ಪಿಎಂ ವಿಡಿಯೋ ಸಂವಾದದಲ್ಲಿ ಶಾಲಾ, ಕಾಲೇಜು ತೆರೆಯುವ ಬಗ್ಗೆ ಪ್ರಸ್ತಾಪವಾಗಿಲ್ಲ: ಸುಧಾಕರ್

ಕೊರೊನಾ ವಿರುದ್ದದ ಹೋರಾಟಕ್ಕೆ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ಶೇ.50ರಷ್ಟು ಬಳಸಿಕೊಳ್ಳಬಹುದು ಎಂದು ಹೇಳಿರುವ ಮೋದಿ, "ಒಂದೆರಡು ದಿನದ ಲಾಕ್ ಡೌನ್ ಪರಿಣಾಮಕಾರಿಯಾಗಬಹುದೇ" ಎಂದು ಟ್ವೀಟ್ ಮಾಡಿರುವುದು, ಮತ್ತೆ ಲಾಕ್ ಡೌನ್ ಗುಮ್ಮ ಕಾಡುವಂತೆ ಮಾಡಿದೆ. ಮೋದಿ ಮಾಡಿರುವ ಟ್ವೀಟ್ ಏನು? ಮುಂದೆ ಓದಿ...

ವರ್ಚುಯಲ್ ಸಂವಾದದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

ವರ್ಚುಯಲ್ ಸಂವಾದದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಆರೋಗ್ಯ ರಾಜ್ಯ ಖಾತೆ ಸಚಿವರಾದ ಅಶ್ವಿನಿಕುಮಾರ್ ಹಾಗೂ ಕೇಂದ್ರ ಆರೋಗ್ಯ ಮಂತ್ರಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದ ವರ್ಚುಯಲ್ ಸಂವಾದದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಕರ್ನಾಟಕದ ಸ್ಥಿತಿಗತಿಗಳನ್ನು ವಿವರಿಸಿದ್ದರು.

ಸಿಎಂಗಳ ಜೊತೆ ಸಂವಾದದ ಬೆನ್ನಲ್ಲೇ ಪಿಎಂ ಮೋದಿ ಟ್ವೀಟ್

"ಸ್ಥಳೀಯವಾಗಿ ಒಂದೆರಡು ದಿನದ ಲಾಕ್ ಡೌನ್ ಜಾರಿಗೊಳಿಸಿದರೆ ಕೊರೊನಾ ತಡೆಯಲು ಇದರಿಂದ ಏನಾದರೂ ಪ್ರಯೋಜನವಾಗಲಿದೆಯೇ? ಲಾಕ್ ಡೌನ್ ಜಾರಿಗೊಳಿಸಿದರೆ ಆರ್ಥಿಕ ಚಟುವಟಿಕೆಗಳಿಗೆ ಏನಾದರೂ ಸಮಸ್ಯೆ ಆಗಲಿದೆಯೇ? ಇವೆರಡು ವಿಷಯಗಳ ಬಗ್ಗೆ ರಾಜ್ಯ ಸರಕಾರ ಗಂಭೀರವಾಗಿ ಚಿಂತನೆ ಮಾಡಬೇಕೆಂದು ಮನವಿ ಮಾಡುತ್ತೇನೆ"ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಕಾರ್ಯಾಲಯ ವಿಡಿಯೋ ಕಾನ್ಫರೆನ್ಸ್

ಮುಖ್ಯಮಂತ್ರಿ ಕಾರ್ಯಾಲಯ ವಿಡಿಯೋ ಕಾನ್ಫರೆನ್ಸ್

ವಿಡಿಯೋ ಸಂವಾದದಲ್ಲಿ ಮುಂದಿನ ವಾರ ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಜೊತೆಗೆ ಮುಖ್ಯಮಂತ್ರಿ ಕಾರ್ಯಾಲಯ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿ ಎನ್ನುವ ಸೂಚನೆಯನ್ನು ಪ್ರಧಾನಿ, ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ.

  ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡ್ಲಿ | Oneindia Kannada
  ಮೈಕ್ರೋ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್

  ಮೈಕ್ರೋ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್

  ಮೈಕ್ರೋ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೊಳಿಸಿ, ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿವೆ. ಈ ಬಗ್ಗೆ ಗಮನ ಹರಿಸಿ, ಲಾಕ್ ಡೌನ್ ಮಾಡುವುದರಿಂದ, ಕೊರೊನಾ ನಿಯಂತ್ರಣಕ್ಕೆ ತರಬಹುದೇ ಎನ್ನುವುದರ ಬಗ್ಗೆ ಗಮನಹರಿಸಿ"ಎಂದು ಮೋದಿ, ರಾಜ್ಯಕ್ಕೆ ಸೂಚನೆಯನ್ನು ನೀಡಿದ್ದಾರೆ.

  English summary
  Whether Lock Down Is Useful PM Narendra Modi Tweet Soon After CMs Meeting.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X