Rain Alert: ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ವಿಜಯಪುರ, ಯಾದಗಿರಿ ಕಲಬುರಗಿ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆಯೊಂದಿಗೆ ಗುಡುಗು, ಮಿಂಚು ಕೂಡ ಸಂಭವಿಸಲಿದೆ. ಗಾಳಿಯ ವೇಗ ಗಂಟೆಗೆ 30 ಕಿ.ಮೀ ಗಳಿಂದ 40 ಕಿ.ಮೀವರೆಗೂ ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಂದಿನ ಒಂದು ವಾರಗಳ ಕಾಲ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಶುಷ್ಕ ವಾತಾವರಣ ಇರುವ ಸಾಧ್ಯತೆ ಇದೆ. ಆದರೆ ಭಾರಿ ಪ್ರಮಾಣದ ಮಳೆಯ ಮುನ್ಸೂಚನೆ ಏನಿಲ್ಲ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಆದರೆ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಮುಂದುವರಿಯಲಿದೆ ಎನ್ನಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವೆಡೆಯೂ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ನಾಳೆ ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಲಬುರ್ಗಿ, ರಾಯಚೂರು, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ ಜಿಲ್ಲೆಯಲ್ಲೂ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ಗದಗ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 23ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕಲಬುರ್ಗಿ, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೋಲಾರ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ.

ಸೆಪ್ಟೆಂಬರ್ 24ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ರಾಮನಗರ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹೇಳಿದೆ.












Click it and Unblock the Notifications