All Party Meeting: ಸರ್ವಪಕ್ಷ ಸಭೆಗೆ ಯಾರು ಹಾಜರ್? ಯಾರು ಗೈರು? ಇಲ್ಲಿದೆ ಮಾಹಿತಿ
ಬೆಂಗಳೂರು, ಆಗಸ್ಟ್ 23: ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ರೈತ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಬರಗಾಲ ಸೃಷ್ಠಿಯಾಗಿರುವ ಹೊತ್ತಲ್ಲೇ ಕಾವೇರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತಗೆದಿದೆ. ತಮಿಳುನಾಡಿಗೆ ನೀರು ಬಿಟ್ಟ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ದ ವಿಪಕ್ಷಗಳು ಕಿಡಿಕಾರಿದ್ದು, ವಿಪಕ್ಷಗಳ ಒತ್ತಡಕ್ಕೆ ಮಣಿದು ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.
ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ಆರಂಭವಾಗಿದೆ.

ಇನ್ನೂ ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಬಾಗಿಯಾಗಿದ್ದಾರೆ.
ರಾಜ್ಯಸಭಾ ಸದಸ್ಯ ಜಗ್ಗೇಶ್, ಸಂಸದ ತೇಜಸ್ವಿ ಸೂರ್ಯ, ಡಿಕೆ ಸುರೇಶ್, ಲೆಹರ್ ಸಿಂಗ್, ಮಂಡ್ಯ ಸಂಸದೆ ಸುಮಲತಾ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸರ್ವಪಕ್ಷ ಸಭೆಗೆ ಗೈರಾದವರು!
ಪ್ರಹ್ಲಾದ ಜೋಷಿ
ಶೋಭಾ ಕರಂದ್ಲಾಜೆ
ಭಗವಂತ ಖೂಬಾ
ನಿರ್ಮಲಾ ಸೀತಾರಾನ್
ಎ ನಾರಾಯಣ ಸ್ವಾಮಿ
ರಾಜೀವ್ ಚಂದ್ರಶೇಖರ್












Click it and Unblock the Notifications