ಸಿದ್ದು-ಡಿಕೆಶಿ ಪ್ರಮಾಣವಚನ ಸಮಾರಂಭಕ್ಕೆ ಯಾವೆಲ್ಲ ರಾಜ್ಯಗಳ ಸಿಎಂ, ನಾಯಕರು ಭಾಗಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಗಳಿಸಿದ ಕಾಂಗ್ರೆಸ್ ಕೊನೆಗೂ ಸರ್ಕಾರ ರಚಿಸಲು ಮುಂದಾಗಿದೆ. ಐದು ದಿನಗಳಿಂದ ನಡೆದ ಸಿಎಂ ಆಯ್ಕೆ ಕಸರತ್ತಿನಲ್ಲಿದ್ದ ಕಾಂಗ್ರೆಸ್ ಹೈಕಮಾಂಡ್ ಸಂಧಾನದ ಮೂಲಕ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಘೋಷಿಸಿ ನಿರುಮ್ಮಳವಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ನಡೆದ ತೀವ್ರ ಸ್ಪರ್ಧೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ವರಿಷ್ಠರು ಅನುಭವಿ ಸಿದ್ದರಾಮಯ್ಯಗೆ ಮಣೆ ಹಾಕಿತು. ಇದು 30:30 ಫಾರ್ಮುಲಾ ಆಗಿದ್ದು, ಮೊದಲ 30 ತಿಂಗಳು ಸಿದ್ದರಾಮಯ್ಯ ಸಿಎಂ ಆಗಲಿದ್ದರೆ, ನಂತರದ ಅವಧಿಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ.

Who Are All the Chief Guests of the Siddaramaiahs CM Swearing-in Ceremony At Bengaluru

ಇದೇ ಶನಿವಾರ, ಮೇ 20ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸಮಾರಂಭಕ್ಕೆ ಗಣ್ಯರ ಹಾಜರಿ
ಶನಿವಾರ, ಮೇ 20ರಂದು ನಡೆಯುವ ಪ್ರಮಾಣ ವಚನ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಆಗಮಿಸಲಿದ್ದಾರೆ.

Who Are All the Chief Guests of the Siddaramaiahs CM Swearing-in Ceremony At Bengaluru

ಇನ್ನು ಕರ್ನಾಟಕ ನೂತನ ಸಿಎಂ ಹಾಗೂ ಡಿಸಿಎಂ ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ಸೇತರ ನಾಯಕರೂ ಭಾಗವಹಿಸಲಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಹಾಜರಾಗುವ ನಿರೀಕ್ಷೆ ಇದೆ. ಇವರಿಗೆ ಖುದ್ದು ಮಲ್ಲಿಕಾರ್ಜುನ ಖರ್ಗೆಯೇ ಆಹ್ವಾನ ನೀಡಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಸೇರಿದಂತೆ ಹಲವು ನಾಯಕರು ಪ್ರಮಾಣ ವಚನ ಸಮಾರಂಭಕ್ಕಾಗಿ ಶನಿವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಹೆಚ್ಚಳವಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ಕಗ್ಗಂಟಾಗಿದ್ದ ಕರ್ನಾಟಕ ಸಿಎಂ ಆಯ್ಕೆ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಇವರುಗಳ ಮಧ್ಯಸ್ಥಿಕೆಯಲ್ಲಿ ಬಗೆಹರಿಸಲಾಗಿದೆ.

Who Are All the Chief Guests of the Siddaramaiahs CM Swearing-in Ceremony At Bengaluru

ಅಂತಿಮವಾಗಿ ಸಿದ್ದರಾಮಯ್ಯ ಅವರು ಮೊದಲ ಎರಡೂವರೆ ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ. ಆ ಬಳಿಕ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಡಿಸಿಎಂ ಮತ್ತು ಎರಡು ಪ್ರಮುಖ ಖಾತೆಗಳನ್ನು ನಿಭಾಯಿಸಲಿದ್ದಾರೆ. ಎರಡೂವರೆ ವರ್ಷದ ನಂತರ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ.

ಮೇ 20ರ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮದ ವೇದಿಕೆಯ ಸಿದ್ಧತೆ ಮಾಡಲಾಗುತ್ತಿದ್ದು,ಕ ರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಮತ್ತು ಸಂಪುಟದ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಸಮಾರಂಭಕ್ಕಾಗಿ ಆಗಮಿಸುವ ಜನರಿಗೆ 50 ಸಾವಿರ ಆಸನ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+