ಈ ಮುದುಕಪ್ಪನಿಗೆ ಸ್ವಾಭಿಮಾನ ಇದೆ; ಮೋದಿ ಬಗ್ಗೆ ಮಾತನಾಡಲು ನೀವು ಯಾರು?: ದೇವೇಗೌಡ್ರು ಗುಡುಗಿದ್ದು ಯಾರ ವಿರುದ್ಧ
ಬೆಂಗಳೂರು, ಮಾರ್ಚ್ 06: ಬೆಳಗ್ಗೆ ಎದ್ದರೆ ಮೋದಿ ಮೋದಿ ಅಂತಾರೆ. ಹಿಂದೆ ಮನಮೋಹನ್ ಸಿಂಗ್ ಅವರು ಏನು ಕೊಟ್ಟಿದ್ದರು? ಅದನ್ನು ಇವರು ಹೇಳಬೇಕು. ಅದಕ್ಕೂ ಮೊದಲು ವಾಜಪೇಯಿ ಅವರು ಏನು ಕೊಟ್ಡಿದ್ದಾರೆ ಹೇಳಿ. ಸಿದ್ದರಾಮಯ್ಯನವರೇ ಸತ್ಯ ಹೇಳಿ. ಮೋದಿ ಈ ದೇಶದಲ್ಲಿರುವ ಸಮರ್ಥ ನಾಯಕ ಅನ್ನುವುದನ್ನು ಇಲ್ಲ ಎನ್ನುವುದಕ್ಕೆ ಇವರು ಯಾರು? WHO IS HE? ಎಂದು ಸಿದ್ದರಾಮಯ್ಯ ಅವರ ವಿರುದ್ಧ ಹೆಚ್ ಡಿ ದೇವೇಗೌಡ್ರು ಕಿಡಿಕಾರಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಂಡ್ಯದ ನಾಯಕರೊಬ್ಬರು ತುಂಬಾ ಎತ್ತರಕ್ಕೆ ಬೆಳೆದಿದ್ದಾರೆ. ತುಂಬಾ ತುಂಬಾ ಎತ್ತರಕ್ಕೆ ಬೆಳೆದಿದ್ದಾರೆ. ಅ ಮುದುಕಪ್ಪನನ್ನ ಕಟ್ಟಿಕೊಂಡು ಏನೇನೋ ಮಾಡೋಕೆ ಹೋಗ್ತಿದ್ದಾರೆ ಅಂತಾರೆ. ಅ ಮುದುಕಪ್ಪನಿಗೆ ಸ್ವಾಭಿಮಾನ ಇದೆ. ಈ ಪಕ್ಷ ಉಳಿಸೋದು ಕಾವೇರಿ ನೀರಿಗಾಗಿ, ನಿಮಗೆ ಮಾತಾಡೋ ಯೋಗ್ಯತೆ ಇಲ್ಲ. ಹೇಮಾವತಿ ಕಟ್ಟಿವನು, ಹಾರಂಗಿ ಕಟ್ಟಿರೋನು ನಿಮ್ಮ ಮುಂದೆ ಇದ್ದೇನೆ ಎಂದು ಸಚಿವ ಚೆಲುವರಾಯಸ್ವಾಮಿ ವಿರುದ್ದ ಗುಡುಗಿದರು.

ನಾನು ಯಾವುದೇ ಕಾಮಗಾರಿಯ ಎಲ್ ಒಸಿ ನೀಡಬೇಕಾದರೆ ಐದು ಪೈಸೆ ಪಡೆದಿದ್ದೇನೆ ಎಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 5 ಪೈಸೆ ತಗೊಳ್ಳೋದು ಎಲ್ಲಾದರೂ ಉಂಟೆ? ಅದು ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ತರುತ್ತಾ? ಅವರು ಒಬ್ಬರು ನೀರಾವರಿ ಕಾರ್ಯದರ್ಶಿಯನ್ನು ನೇಮಕ ಮಾಡಿದ್ದಾರೆ. ನಾನು ಫೊನ್ ಮಾಡಿದೆ ಫೋಲ್ ರಿಸೀವ್ ಮಾಡಿಲ್ಲ. ನಾನು ಒಂದು ದೇಶದ ಸಣ್ಣ ರಾಜಕಾರಣಿ. ಪಾಪ ಅವರ ಕಾರ್ಯದರ್ಶಿ ಫೋನ್ ತೆಗೆದುಕೊಂಡಿಲ್ಲ. ಅವರು ಯಾರು ಅಂತ ಕೇಳಿದರೆ ಸಿದ್ದರಾಮಯ್ಯ ಅವರ ಸಂಬಂಧಿ ಅಂತ ಹೇಳೊದಿಲ್ಲ, ಅವರು ಸಿದ್ದರಾಮಯ್ಯ ಅವರ ಸಮಾಜದವರು. ಆ ಹಿರಿಯ ಹುದ್ದೆಗೆ ಅತ್ಯಂತ ಕಿರಿಯ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಏಕೆ? ಎಂದು ಪ್ರಶ್ನಿಸಿದರು.
ಜನಪರ ಕಳಕಳಿಯ ಸರಕಾರ ನನ್ನದು ಅಂತಾರೆ ಸಿದ್ದರಾಮಯ್ಯ. ಕುಮಾರಸ್ವಾಮಿ ಅವರ ಪಂಚರತ್ನ, ಜಲಧಾರೆ ಕಾರ್ಯಕ್ರಮ ಮಾಡಿದ್ದರಲ್ಲವೇ? ಅವರಿಗೆ ಜನಪರ ಕಳಕಳಿ ಇರಲಿಲ್ಲವಾ? ಅವರ ಸರಕಾರ ತೆಗೆದಿದ್ದು ಯಾರು ಹಾಗಾದರೆ? ನೀವು ಮಾಡಿದ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಮಾಡಿದ್ದು ಕುಮಾರಸ್ವಾಮಿ. ಇಂಥ ನೀವು ಜೆಡಿಎಸ್ ಪಕ್ಷ ಉಳಿಯೊಲ್ಲ ಅಂತೀರಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯ ಕಾರ್ಯಕ್ರಮದಲ್ಲಿ ಮಾತಾಡಿದ್ದರು ಸಿದ್ದರಾಮಯ್ಯ ಅವರು. ಮುಂದಿನ ಜನ್ಮವಿದ್ದರೆ ಮುಸ್ಲಿಂಮರಲ್ಲಿ ಹುಟ್ಟುತ್ತೇನೆ ಎಂದು ದೇವೇಗೌಡರು ಹೇಳಿದ್ದರು. ಈಗ ಬಿಜೆಪಿ ಜತೆ ಸೇರಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ, ಕುಮಾರಸ್ವಾಮಿ ಅವರ ಸರಕಾರವನ್ನು ತೆಗೆದಿದ್ದು ಯಾರು? ಯಾವ ಕಾರಣಕ್ಕೆ ತೆಗೆದಿರಿಸಿ? ಎಂದು ಅಬ್ಬರಿಸಿದರು.
ಬಿಜೆಪಿ ಜತೆ ಜೆಡಿಎಸ್ ವಿಲೀನ ಅಂತ ಸಿದ್ದರಾಮಯ್ಯನವರೇ ತೀರ್ಮಾನ ಮಾಡಿಬಿಟ್ಟರು. ಮೋದಿಗೆ ಪೈಪೋಟಿ ನೀಡುವ ಸಮರ್ಥ ನಾಯಕ ಸಿದ್ದರಾಮಯ್ಯ ಎಂದಿದ್ದ ಮಂಡ್ಯದ ನಾಯಕರೊಬ್ಬರು ಹೇಳಿದ್ದರು. ಜಾತ್ಯತೀತ ಎಂಬ ಪದ ಬಳಕೆ ಮಾಡುವ ನೈತಿಕತೆ ಜೆಡಿಎಸ್ ಗೆ ಇಲ್ಲ ಎಂದು ಕಾಂಗ್ರೆಸ್ ನವರು ಹೇಳಿದ್ದರು. ಹಾಗಾದರೆ, ಮುಸ್ಲಿಮರಿಗೆ ನಾನು ಕೊಟ್ಟಿದ್ದ 4% ಮೀಸಲಾತಿಯನ್ನು ಇವರು ಮತ್ತೆ ಕೊಡಲಿ ನೋಡೋಣ ಎಂದು ಸವಾಲು ಹಾಕಿದರು.












Click it and Unblock the Notifications