KS Eshwarappa: ಮುನಿಸು ಮರೆತು ಒಂದಾದ್ರ ಯಡಿಯೂರಪ್ಪ-ಈಶ್ವರಪ್ಪ?; ಬಿಜೆಪಿಗೆ ಬರುವಂತೆ ಕರೆ ಮಾಡಿದ್ದು ಯಾರು?
ಬೆಂಗಳೂರು, ಜುಲೈ 02: ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ಸಿಗದ ಹಿನ್ನೆಲೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸುವ ಮೂಲಕ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಕೆ ಎಸ್ ಈಶ್ವರಪ್ಪ ತೊಡೆತಟ್ಟಿದ್ರು. ಇದೀಗ ಸೋಲಿನ ಬಳಿಕ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷವಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಿಂದ ತಮ್ಮ ಪುತ್ರನಿಗೆ ಟಿಕೆಟ್ ಸಿಗದಿ ದ್ದಕ್ಕೆ ಆಕ್ರೋಶಗೊಂಡು ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸ್ಪರ್ಧಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿತ್ತು. ಬಳಿಕ, ಚುನಾವಣೆಯಲ್ಲಿ ಅವರು ಬಿಜೆಪಿಯ ಬಿ. ವೈ.ರಾಘವೇಂದ್ರ ವಿರುದ್ಧ ಸೋಲು ಅನುಭವಿಸಿದ್ದರು. ಇದೀಗ ಕೆ ಎಸ್ ಈಶ್ವರಪ್ಪ ಸೈಲೆಂಟ್ ಆಗಿದ್ದು, ಬಿಜೆಪಿ ಪಕ್ಷದ ಆಹ್ವಾನದ ಕುರಿತು ಮಾತನಾಡಿದ್ದಾರೆ.

ದೇಶಕ್ಕೆ ಬಿಜೆಪಿ ಒಂದೇ ಆಶಾಕಿರಣ. ನನಗೆ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷ ಇಲ್ಲ, ಬಿಜೆಪಿ ಆಳಾಗುತ್ತಿರೋದು ನೋಡಲು ನನ್ನಿಂದ ಆಗುತ್ತಿಲ್ಲ. ನರೇಂದ್ರ ಮೋದಿ ಅವರ ಅಲೆ ಇಲ್ಲದಿದ್ದರೆ ರಾಜ್ಯದಲ್ಲಿ ಏನಾಗ್ತಿತ್ತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.
ಇನ್ನೂ ಬಿಜೆಪಿ ಪಕ್ಷ ಸೇರಲು ಆಹ್ವಾನ ಬಂದಿದೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಬಗ್ಗೆ ಇನ್ನಷ್ಟೇ ಮಾತುಕತೆ ನಡೆಯ ಬೇಕಿದೆ. ಆದರೆ, ಬಿಜೆಪಿ ಸೇರುವುದಂತೂ ಖಚಿತ. ಆದರೆ, ಯಾವಾಗ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈಶ್ವರಪ್ಪ ಅವರನ್ನ ಆರು ತಿಂಗಳ ಕಾಲ ಬಿಜೆಪಿ ಉಚ್ಚಾಟಿಸಿತ್ತು. ಇದೀಗ ಏಕಾಏಕಿ ಕೆ ಎಸ್ ಈಶ್ವರಪ್ಪ ಅವರನ್ನ ಪಕ್ಷದ ನಾಯಕರು ಆಹ್ವಾನಿಸಿದ್ದು, ಈಶ್ವರಪ್ಪ ಹಾಗೂ ಬಿ ಎಸ್ ಯಡಿಯೂರಪ್ಪ ನಡುವಿನ ಮುಗಿಸು ಮರೆಯಾಯ್ತಾ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಅಷ್ಟಕ್ಕೂ ಕೆ ಎಸ್ ಈಶ್ವರಪ್ಪ ಅವರನ್ನ ಬಿಜೆಪಿ ಪಕ್ಷಕ್ಕೆ ಮರಳುವಂತೆ ಆಹ್ವಾನಿಸಿದ್ದು ಯಾರು ಎನ್ನುವ ಪ್ರಶ್ನೆ ಉದ್ಭವಿಸಿದೆ. ಏಕೆಂದರೇ ಲೋಕಸಭಾ ಚುನಾವಣೆಯಲ್ಲಿ ಬಹಿರಂಗವಾಗಿಯೇ ವಿಜಯೇಂದ್ರ, ರಾಘವೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿಯನ್ನ ಈಶ್ವರಪ್ಪ ಅವರು ನಡೆಸಿದ್ದು, ಇದೀಗ ಎಲ್ಲಾ ಮುನಿಸನ್ನ ಮರೆತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೇ ಈಶ್ವರಪ್ಪ ಅವರನ್ನ ಪಕ್ಷಕ್ಕೆ ಆಹ್ವಾನಿಸಿದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ. ಆದರೆ, ಬಿಜೆಪಿ ಹಿರಿಯ ನಾಯಕರೊಬ್ಬರು ಬಿಜೆಪಿಗೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications