ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಯಾರು?

By Gururaj
|
Google Oneindia Kannada News

Recommended Video

ಕರ್ನಾಟಕ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಯಾರು? | Oneindia Kannada

ಬೆಂಗಳೂರು, ಮೇ 23 : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈಗ ಎದ್ದಿರುವ ಪ್ರಶ್ನೆ ಪ್ರತಿಪಕ್ಷ ನಾಯಕ ಯಾರು? ಎಂಬುದು.

ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಯ್ಯ ಆಡಳಿತ ಪಕ್ಷದ ಸಾಲಿನಲ್ಲಿ ಇರುತ್ತಾರೆ. ಇವರನ್ನು ಎದುರಿಸಲು ಅನುಭವಿ ನಾಯಕರನ್ನು ಬಿಜೆಪಿ ಪ್ರತಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಬೇಕು. ಅಧಿವೇಶನದ ಸಂದರ್ಭದಲ್ಲಿ ಅವರು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು.

ಸುದೀರ್ಘ ಅವಧಿಯ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ ರಾಜೀನಾಮೆಸುದೀರ್ಘ ಅವಧಿಯ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ ರಾಜೀನಾಮೆ

ಕರ್ನಾಟಕದ ಬಿಜೆಪಿ ಶಾಸಕರು ಬಿ.ಎಸ್.ಯಡಿಯೂರಪ್ಪ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಅವರು ಪ್ರತಿಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಬಹುದು. ಆದರೆ, ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಯ ರಾಜ್ಯಾಧ್ಯಕ್ಷರೂ ಹೌದು. ಅವರು ಪ್ರತಿಪಕ್ಷ ನಾಯಕರಾದರೆ ಎರಡು ಹುದ್ದೆ ಸಿಕ್ಕಿದಂತಾಗುತ್ತದೆ.

ಕೆ.ಆರ್.ರಮೇಶ್ ಕುಮಾರ್ ವಿಧಾನಸಭೆ ಸ್ಪೀಕರ್ಕೆ.ಆರ್.ರಮೇಶ್ ಕುಮಾರ್ ವಿಧಾನಸಭೆ ಸ್ಪೀಕರ್

ಜಗದೀಶ್ ಶೆಟ್ಟರ್, ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ ಅವರ ಹೆಸರುಗಳು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಕೇಳಿಬರುತ್ತಿವೆ. ಯಾರು ಪ್ರತಿಪಕ್ಷ ನಾಯಕರಾಗಲಿದ್ದಾರೆ. ಸ್ಪೀಕರ್ ಆಯ್ಕೆ, ಬಹುಮತ ಸಾಬೀತು, ಬಜೆಟ್ ಅಧಿವೇಶನದಲ್ಲಿ ಯಾರು ಪ್ರತಿಪಕ್ಷವನ್ನು ಸದನದಲ್ಲಿ ಪ್ರತಿನಿಧಿಸುತ್ತಾರೆ ಎಂಮದು ಕಾದು ನೋಡಬೇಕಾಗಿದೆ.

ಶಾಸಕಾಂಗ ಪಕ್ಷದ ನಾಯಕ

ಶಾಸಕಾಂಗ ಪಕ್ಷದ ನಾಯಕ

ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರು ಯಡಿಯೂರಪ್ಪ. ಸದನದಲ್ಲಿ ಅವರೇ ಪ್ರತಿಪಕ್ಷವನ್ನು ಮುನ್ನೆಡಸಬೇಕು. ಯಡಿಯೂರಪ್ಪ ಅವರು ಪ್ರತಿಪಕ್ಷ ನಾಯಕದಾದರೆ, ಅವರಿಗೆ ಎರಡೂ ಹುದ್ದೆ ಸಿಕ್ಕಿದಂತಾಗುತ್ತದೆ.

ಯಡಿಯೂರಪ್ಪ ಅವರು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷರು. ಒಬ್ಬರಿಗೆ ಒಂದೇ ಹುದ್ದೆ ಎಂದರೆ ಯಡಿಯೂರಪ್ಪ ಅವರು ರಾಜ್ಯಾಧ್ಯಕ್ಷ ಸ್ಥಾನವನ್ನು ಬಿಡಬೇಕಾಗುತ್ತದೆ. ಹೈಕಮಾಂಡ್ ಲೋಕಸಭೆ ಚುನಾವಣೆ ತನಕ ಯಡಿಯೂರಪ್ಪ ಅವರನ್ನೇ ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಸುವ ಸಾಧ್ಯತೆ ಇದೆ.

ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್ ಅವರು ಪ್ರತಿಪಕ್ಷ ನಾಯಕರಾಗಬಹುದು ಎಂಬ ಸುದ್ದಿಗಳಿವೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಜಗದೀಶ್ ಶೆಟ್ಟರ್ ಅವರು ಪ್ರತಿಪಕ್ಷ ನಾಯಕರಾಗಿದ್ದರು. ಮಾಜಿ ಮುಖ್ಯಮಂತ್ರಿಯಾಗಿರುವ ಅವರಿಗೆ ಪ್ರತಿಪಕ್ಷ ನಾಯಕರ ಸ್ಥಾನ ನೀಡಬಹುದು.

ಆದರೆ, ಹಿಂದೆ ಜಗದೀಶ್ ಶೆಟ್ಟರ್ ಪ್ರತಿಪಕ್ಷ ನಾಯಕ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿಲ್ಲ ಎಂಬ ಮಾತುಗಳಿವೆ. ಕೆ.ಜೆ.ಜಾರ್ಜ್ ವಿರುದ್ಧದ ಹೋರಾಟ, ಅರ್ಕಾವತಿ, ವಜ್ರ ಖಚಿತ ವಾಚ್ ವಿವಾದ ಮುಂತಾದ ಸಂದರ್ಭದಲ್ಲಿ ಶೆಟ್ಟರ್ ಸರ್ಕಾರವನ್ನು ಸರಿಯಾಗಿ ಎದುರಿಸಲ್ಲ ಎಂಬ ಮಾತುಗಳಿವೆ. ಆದ್ದರಿಂದ, ಅವರು ಪ್ರತಿಪಕ್ಷ ನಾಯಕರಾಗುವುದು ಅನುಮಾನವಾಗಿದೆ.

ಕೆ.ಎಸ್.ಈಶ್ವರಪ್ಪ

ಕೆ.ಎಸ್.ಈಶ್ವರಪ್ಪ

ಕೆ.ಎಸ್.ಈಶ್ವರಪ್ಪ ಅವರು ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿದ್ದರು. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ. ಅವರು ವಿಪಕ್ಷ ನಾಯಕರಾಗಬಹುದು.

ಆದರೆ, ಈಶ್ವರಪ್ಪ ಅವರು ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿ ಮಾಡುವವರು. ಸದನದಲ್ಲಿಯೂ ಅವರು ಇಂತಹ ಹೇಳಿಕೆ ನೀಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಬಹುದು ಎಂಬ ಕಾರಣಕ್ಕೆ ಅವರಿಗೆ ಪ್ರತಿಪಕ್ಷ ಸ್ಥಾನ ಸಿಗುವುದು ಅನುಮಾನವಾಗಿದೆ.

ಆರ್.ಅಶೋಕ್

ಆರ್.ಅಶೋಕ್

ಒಕ್ಕಲಿಗ ಸಮುದಾಯಕ್ಕೆ ಸೇರಿದ ಆರ್.ಅಶೋಕ್ ಅವರು ಮಾಜಿ ಉಪ ಮುಖ್ಯಮಂತ್ರಿಗಳು. ಅವರನ್ನು ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ.

ಆದರೆ, ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಂತಹ ನಾಯಕರನ್ನು ಆರ್.ಅಶೋಕ್ ಅವರು ಸದನದಲ್ಲಿ ಎದುರಿಸುವು ಕಷ್ಟ. ಆದ್ದರಿಂದ, ಪ್ರತಿಪಕ್ಷ ನಾಯಕನ ಹುದ್ದೆ ನೀಡುವುದು ಕಷ್ಟ.

English summary
Congress and JD(S) alliance government come to power in Karnataka. H.D.Kumaraswamy take oath as Chief Minister of the state. Now question is who is opposition leader in assembly?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X