ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರ ಕೆಡವುದರಲ್ಲಿ ಯಾರು ನಿಸ್ಸೀಮರು: ಸಿದ್ದರಾಮಯ್ಯನವರೋ, ಕುಮಾರಸ್ವಾಮಿಯೋ?

|
Google Oneindia Kannada News

Recommended Video

Siddaramaiah , Kumaraswamy engage in Tweet War | Oneindia Kannada

"ಸರಕಾರ ಕೆಡವುದರಲ್ಲಿ ಯಾರು ನಿಸ್ಸೀಮರು? ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರೋ ಅಥವಾ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರೋ?" ಈ ರೀತಿಯ ಪ್ರಶ್ನೆ ರಾಜ್ಯದ ಜನತೆಗೆ ಕಾಡಲು ಕಾರಣ ಇವರಿಬ್ಬರೇ..

ಕಳೆದ ಕೆಲವು ದಿನಗಳಿಂದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಯವರ ಮಾತಿನ ಚಕಮಕಿ, ಟ್ವೀಟ್ ಸಮರ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಇದು, ಇಬ್ಬರ ನಡುವಿನ, ಅದೇ ಹಳೇ ಹಾಡುಗಳು ಡಿಜಟಲೀಕರಣ ಎನ್ನುವುದಷ್ಟೇ ಇದರ ಸಾರಾಂಶ.

ರಾಜ್ಯ ರಾಜಕಾರಣಕ್ಕೆ ಸ್ಪೋಟಕ ತಿರುವು ನೀಡಿದ ಎಚ್ಡಿಕೆ ಹೇಳಿಕೆ: ಏನಿದರ ಅಸಲಿಯತ್ತು?ರಾಜ್ಯ ರಾಜಕಾರಣಕ್ಕೆ ಸ್ಪೋಟಕ ತಿರುವು ನೀಡಿದ ಎಚ್ಡಿಕೆ ಹೇಳಿಕೆ: ಏನಿದರ ಅಸಲಿಯತ್ತು?

"ಉಪಚುನಾವಣೆ ಮುಗಿದ ಬೆನ್ನಲ್ಲೇ, ಬಿಜೆಪಿ ಸರಕಾರ ಪತನಗೊಳ್ಳುತ್ತದೆ. ನಾವು ಜೆಡಿಎಸ್ ಸಖ್ಯ ಮತ್ತೆ ಮಾಡುವುದಿಲ್ಲ" ಎಂದು ಸಿದ್ದರಾಮಯ್ಯನವರ ಹೇಳಿಕೆಗೆ, ಕುಮಾರಸ್ವಾಮಿ ನೀಡಿದ ಕೌಂಟರ್, ರಾಜ್ಯ ರಾಜಕೀಯದಲ್ಲಿ ಹೊಸ ಮುನ್ನುಡಿ ಬರೆದಿದೆ.

ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆ: ಡಿಸಿಎಂ ಲಕ್ಷ್ಮಣ್ ಸವದಿ ತಲೆದಂಡ?ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆ: ಡಿಸಿಎಂ ಲಕ್ಷ್ಮಣ್ ಸವದಿ ತಲೆದಂಡ?

ಸಿದ್ದರಾಮಯ್ಯನವರು ಬಲಿಪಾಡ್ಯಮಿಯ (ಅ 29) ದಿನ ಮಾಡಿದ ಟ್ವೀಟ್ ಪ್ರಕಾರ, "ಸರಕಾರ ಕೆಡವುದರಲ್ಲಿ ಅವರೇ ನಿಸ್ಸೀಮರು". ಇದೇ ಅರ್ಥ ಬರುವ ಟ್ವೀಟ್ ಅನ್ನು ಕುಮಾರಸ್ವಾಮಿಯವರೂ ಎರಡು ದಿನದ ಹಿಂದೆ ಮಾಡಿದ್ದರು. ಹಾಗಿದ್ದರೆ, ಇವರಿಬ್ಬರ ನಡುವೆ ನಿಸ್ಸೀಮರು ಯಾರು? ಸಿದ್ದರಾಮಯ್ಯ ಮತ್ತು ಎಚ್ಡಿಕೆ ಮಾಡಿದ ಟ್ವೀಟ್, ಹೀಗಿದೆ..

ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು?

ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು?

"ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15ಸ್ಥಾನ ಗೆದ್ದರೆ ಬಿಎಸ್ವೈ ರಾಜೀನಾಮೆ ನೀಡಬೇಕು. ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಜೆಡಿಎಸ್ ಜತೆ ಸೇರಲ್ಲ. ಅವರ ಜೊತೆ ಸೇರಿ ಅನುಭಿವಿಸಿದ್ದು ಸಾಕು ಎಂದಿದ್ದಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ? ಇದು ಕುಮಾರಸ್ವಾಮಿ ಮಾಡಿದ್ದ ಟ್ವೀಟ್.

ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು

ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು

ಇದರ ಬೆನ್ನಲ್ಲೇ ಕುಮಾರಸ್ವಾಮಿ ಇನ್ನೊಂದು ಟ್ವೀಟ್ ಮಾಡಿದ್ದರು. ಅದು ಹೀಗಿತ್ತು, "ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು. ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ(?) ಕೊಟ್ಟವರು ಯಾರು? ಪಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸೆದಿದ್ದು ಯಾರು? ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು?".

ರಾಜಕೀಯ ದುರುದ್ದೇಶಕ್ಕೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ

ರಾಜಕೀಯ ದುರುದ್ದೇಶಕ್ಕೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ

ಕುಮಾರಸ್ವಾಮಿ ಟ್ವೀಟಿಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಹೀಗೆ, "ಕುಮಾರಸ್ವಾಮಿಯವರಿಗೆ 14 ತಿಂಗಳು ನಾನು ಆಡಳಿತ ನಡೆಸಲು ಬಿಡಲಾಗದಷ್ಟು ತೊಂದರೆ ಕೊಟ್ಟಿದ್ದರೆ ಮೊದಲ ದಿನವೇ ಅವರು ರಾಜೀನಾಮೆ ಕೊಟ್ಟು ಬಿಡಬಹುದಿತ್ತು. 14 ತಿಂಗಳು ಆಡಳಿತ ನಡೆಸಿ ಈಗ ರಾಜಕೀಯ ದುರುದ್ದೇಶಕ್ಕೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ".

ಸರ್ಕಾರ ಬೀಳಿಸುವುದರಲ್ಲಿ ಯಾರು ನಿಪುಣರು ಅವರವರ ಇತಿಹಾಸವೇ ಹೇಳುತ್ತದೆ

ಸರ್ಕಾರ ಬೀಳಿಸುವುದರಲ್ಲಿ ಯಾರು ನಿಪುಣರು ಅವರವರ ಇತಿಹಾಸವೇ ಹೇಳುತ್ತದೆ

"ಸರ್ಕಾರ ಬೀಳಿಸುವುದರಲ್ಲಿ ಯಾರು ನಿಪುಣರು ಎಂದು ಅವರವರ ಇತಿಹಾಸವೇ ಹೇಳುತ್ತದೆ" ಎಂದು ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಮತ್ತು ಪರೋಕ್ಷವಾಗಿ ದೇವೇಗೌಡರಿಗೂ ಟಾಂಗ್ ನೀಡಿದ್ದರು. ಇವರಿಬ್ಬರ ನಡುವಿನ "ಸರಕಾರ ಬೀಳಿಸುವುದರಲ್ಲಿ ಯಾರು ನಿಪುಣರು" ಎನ್ನುವ ಟಾಪಿಕ್ ಮುಂದಿನ ದಿನಗಳಲ್ಲಿ ಇನ್ನಷ್ಟು ಕಾವು ಪಡೆಯುವ ಸಾಧ್ಯತೆಯಿಲ್ಲ.

ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ

ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ

"ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ "ಯಾರು''ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ, ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ‌ ನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ" ಎಂದು ಇದಕ್ಕೂ ಮೊದಲು, ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

English summary
Who Is Well Known For Topple The Government In Karnataka Politics, Siddaramaiah Or Kumaraswamy?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X