ಕರ್ನಾಟಕದ ಮೈತ್ರಿ ಸರ್ಕಾರದ ಭವಿಷ್ಯ, ಯಾರು, ಏನು ಹೇಳಿದರು?
Recommended Video
ಬೆಂಗಳೂರು, ಮೇ 29 : ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದ ಮೈತ್ರಿ ಸರ್ಕಾರ ಸುಭದ್ರವಾಗಿದೆಯೇ?. ಹೌದು, ಚುನಾವಣೆಯ ಸೋಲಿನ ಬಳಿಕ ಉಭಯ ಪಕ್ಷದ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಕಣಕ್ಕಿಳಿದರೂ ಎರಡೂ ಪಕ್ಷಗಳು ತಲಾ 1 ಸ್ಥಾನಗಳಲ್ಲಿ ಮಾತ್ರ ಜಯಗಳಿಸಲು ಸಾಧ್ಯವಾಗಿತ್ತು.
ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಲೋಕಸಭಾ ಚುನಾವಣೆ ಬಳಿಕವೂ ಸುಭದ್ರವಾಗಿರಲಿದೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ಸರ್ಕಾರವನ್ನು ಉಳಿಸಿಕೊಳ್ಳಲು ಉಭಯ ಪಕ್ಷದ ನಾಯಕರು ತಂತ್ರ ರೂಪಿಸಿದ್ದು ಸದ್ಯಕ್ಕೆ ಮೈತ್ರಿಗೆ ಯಾವುದೇ ಧಕ್ಕೆ ಇಲ್ಲ.
ಬಿಜೆಪಿ ನಾಯಕರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿಲ್ಲ, ಬದಲಾಗಿ ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದಾರೆ. ಮೈತ್ರಿ ಸರ್ಕಾರದ ಅಳಿವು ಉಳಿವಿನ ಬಗ್ಗೆ ಯಾರು?, ಏನು ಹೇಳಿದರು? ನೋಡೋಣ ಬನ್ನಿ.....

ಸರ್ಕಾರ ಸುಭದ್ರವಾಗಿದೆ
'ಬಿಜೆಪಿ ಮತ್ತು ಅವರ ಪ್ರಯತ್ನಗಳ ಬಗ್ಗೆ ನನಗೆ ಗೊತ್ತಿಲ್ಲ. ಸರ್ಕಾರ ಸುಭದ್ರವಾಗಿದೆ' ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

5 ವರ್ಷ ಸರ್ಕಾರ ಸುಭದ್ರ
'ಲೋಕಸಭಾ ಚುನಾವಣೆಯ ಫಲಿತಾಂಶ ಕರ್ನಾಟಕ ಸಮ್ಮಿಶ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜ್ಯ ಸರ್ಕಾರ ಕುಮಾರಸ್ವಾಮಿ ಅವರ ನೇತೃತ್ವದಲ್ಲಿಯೇ ಐದು ವರ್ಷ ಸುಭದ್ರವಾಗಿವಾಗಿ ಮುಂದುವರೆಯಲಿದೆ. ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯುವುದೇ ನಮ್ಮೆಲ್ಲರ ಗುರಿ' ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಹೇಳಿದರು.

ಸರ್ಕಾರವನ್ನು ವಿಸರ್ಜನೆ ಮಾಡಿ
'ನಾವು 28 ಕ್ಷೇತ್ರಗಳ ಪೈಕಿ 25 ಸ್ಥಾನಗಳಲ್ಲಿ ಜಯಗಳಿಸಿದ್ದೇವೆ. ಇದು ಐತಿಹಾಸಿಕ ಜಯವಾಗಿದೆ. ಸರ್ಕಾರ ವಿಸರ್ಜನೆ ಮಾಡಿ ಮಧ್ಯಂತರ ಚುನಾವಣೆಗೆ ಹೋಗುವುದು ಒಳಿತು. ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್-ಜೆಡಿಎಸ್ ಸಂಪರ್ಕದಲ್ಲಿಲ್ಲ ಎಂದು' ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸರ್ಕಾರ ಮುಂದುವರೆಯಲು ಅರ್ಹವಲ್ಲ
'ರಾಜ್ಯದ ಮೈತ್ರಿ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ಯಾವುದೇ ನೈತಿಕತೆ ಇಲ್ಲ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುವಂತಿಲ್ಲ. ಬಿಜೆಪಿ ಪ್ರಮುಖ ಪ್ರತಿಪಕ್ಷವಾಗಿದೆ. ಸರ್ಕಾರ ಬಿದ್ದರೆ ಬಿಜೆಪಿ ದೊಡ್ಡ ಪಕ್ಷವಾಗಲಿದೆ. ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಲಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.












Click it and Unblock the Notifications