ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ ಅಸಮಾಧಾನ, ಕಾಂಗ್ರೆಸ್ ನಾಯಕರು ಹೇಳಿದ್ದೇನು?

|
Google Oneindia Kannada News

Recommended Video

ಸಂಪುಟ ವಿಸ್ತರಣೆ ಬಳಿಕ ಅತೃಪ್ತ ಶಾಸಕರಿಗೆ ಕಾಂಗ್ರೆಸ್‌ನಿಂದ ಎಚ್ಚರಿಕೆ! | Oneindia Kannada

ಬೆಂಗಳೂರು, ಡಿಸೆಂಬರ್ 24 : ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಉಂಟಾಗಿದೆ. ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ ಮೈತ್ರಿ ಸರ್ಕಾರಕ್ಕೆ ಕಂಟಕವಾಗಲಿದೆಯೇ? ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಸಚಿವ ಸಂಪುಟದಿಂದ ಕೈ ಬಿಟ್ಟಿದ್ದಕ್ಕೆ ರಮೇಶ್ ಜಾರಕಿಹೊಳಿ, ಆರ್.ಶಂಕರ್ ಅಸಮಾಧಾನಗೊಂಡಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯೂ ಇದೆ. ಮೂರು ದಿನದಲ್ಲಿ ತೀರ್ಮಾನ ಪ್ರಕಟಿಸುವುದಾಗಿ ಹೇಳಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಸಂಪುಟ, ಜಿಲ್ಲಾ ಮತ್ತು ಜಾತಿ ಪ್ರಾತಿನಿಧ್ಯಎಚ್.ಡಿ.ಕುಮಾರಸ್ವಾಮಿ ಸಂಪುಟ, ಜಿಲ್ಲಾ ಮತ್ತು ಜಾತಿ ಪ್ರಾತಿನಿಧ್ಯ

ಸಂಪುಟ ಸೇರುವ ನಿರೀಕ್ಷೆಯಲ್ಲಿದ್ದ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಅವರು, ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಗೆ ಸಚಿವ ಸ್ಥಾನ ಸಿಗದಿರಲು ಯಾವ ನಾಯಕರು ಕಾರಣ ಎಂದು ಗೊತ್ತು. ಸಮಯ ಬಂದಾಗ ಅವರ ಹೆಸರು ಬಹಿರಂಗ ಮಾಡುವೆ ಎಂದು ಹೇಳಿದ್ದಾರೆ.

3 ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಮೇಶ್ ರಾಜೀನಾಮೆ: ಸ್ಪಷ್ಟನೆ3 ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಮೇಶ್ ರಾಜೀನಾಮೆ: ಸ್ಪಷ್ಟನೆ

ರಮೇಶ್ ಜಾರಕಿಹೊಳಿ ಅವರು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂಬ ನಂಬಿಕೆ ಕಾಂಗ್ರೆಸ್‌ ನಾಯಕರಲ್ಲಿದೆ. ಆದರೆ, ಅವರ ಜೊತೆ ಕೆಲವು ಅತೃಪ್ತ ಶಾಸಕರು ಇದ್ದು, ಇದು ಪಕ್ಷದ ಪಾಲಿಗೆ ತಲೆನೋವಾಗಿದೆ. ಸಂಪುಟ ವಿಸ್ತರಣೆ ಬಳಿಕ ಯಾರು, ಏನು ಹೇಳಿದರು?....

ಕುಮಾರಸ್ವಾಮಿ ಸಂಪುಟಕ್ಕೆ ಕಾಂಗ್ರೆಸ್‌ನ ಎಂಟು ಹೊಸ ಸಚಿವರು ಸೇರ್ಪಡೆಕುಮಾರಸ್ವಾಮಿ ಸಂಪುಟಕ್ಕೆ ಕಾಂಗ್ರೆಸ್‌ನ ಎಂಟು ಹೊಸ ಸಚಿವರು ಸೇರ್ಪಡೆ

ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ

ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ

'ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಶಾಸಕ ಬಿ.ಸಿ.ಪಾಟೀಲ್ ಸಂಪರ್ಕದಲ್ಲಿದ್ದಾರೆ. ನಮ್ಮ ಜೊತೆಯೇ ಇದ್ದಾರೆ. ರಮೇಶ್ ಜಾರಕಿಹೊಳಿ ಅವರ ಜೊತೆ ಮಾತನಾಡಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಂಚಿಕೆ ಮಾಡಿದವರು ಹೇಳಬೇಕು

ಹಂಚಿಕೆ ಮಾಡಿದವರು ಹೇಳಬೇಕು

ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಕುರಿತು ಹೇಳಿಕೆ ನೀಡಿದ್ದು, 'ಯಾವ ದೃಷ್ಟಿಯಿಂದ ಸಚಿವ ಸ್ಥಾನ ನೀಡಿದ್ದಾರೆ ಎನ್ನುವುದು ಹಂಚಿಕೆ ಮಾಡಿದವರೇ ಹೇಳಬೇಕು. ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನವನ್ನು ಅವರೇ ಸರಿಪಡಿಸಬೇಕು' ಎಂದು ಹೇಳಿದ್ದಾರೆ.

ಯಾರೂ ಮುನಿಸಿಕೊಂಡಿಲ್ಲ

ಯಾರೂ ಮುನಿಸಿಕೊಂಡಿಲ್ಲ

'ಸಂಪುಟದಿಂದ ಕೈ ಬಿಟ್ಟಿದ್ದರಿಂದ ಯಾರೂ ಮುನಿಸಿಕೊಂಡಿಲ್ಲ. ಸಚಿವರ ಕಾರ್ಯ ವೈಖರಿ ಆಧರಿಸಿ, ಸಾಧನೆ ಆಧರಿಸಿ ಲೋಕಸಭೆ ಚುನಾವಣೆ ಬಳಿಕ ಮತ್ತೆ ಸಂಪುಟ ಪುನಾರಚನೆ ಮಾಡಲಾಗುತ್ತದೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನನ್ನ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ

ನನ್ನ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ

'ಹಿರಿಯರು ಎಂಬ ಕಾರಣಕ್ಕೆ ನನ್ನನ್ನು ಹೊರಗಿಡಲಾಗಿದೆ. ಪಕ್ಷದಲ್ಲಿ ಇಬ್ಬರು ಮೊದಲಿನಿಂದಲೂ ನನ್ನ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ಸಮಯ ಬಂದಾಗ ಅವರ ಹೆಸರು ಬಹಿರಂಗಪಡಿಸುತ್ತೇನೆ' ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಆಪ್ತರ ಜೊತೆ ಮಾತು

ಆಪ್ತರ ಜೊತೆ ಮಾತು

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮಾತುಗಳನ್ನು ಆಡುತ್ತಿದ್ದಾರೆ. 'ಎರಡು ಮೂರು ದಿನದಲ್ಲಿ ರಾಜೀನಾಮೆ ನೀಡುತ್ತೇನೆ. ರಾಜೀನಾಮಮೆ ನೀಡುವ ವಿಚಾರದಲ್ಲಿ ನನ್ನ ತೀರ್ಮಾನ ಅಂತಿಮ' ಎಂದು ಅವರು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

English summary
After Cabinet Expansion some Congress senior leaders blamed other party leaders for not to consider their name. Who said what after H.D.Kumaraswamy Cabinet Expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X